Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಂತಿಮ ನಮನ ಸಲ್ಲಿಸಿದ ಗಣ್ಯರು

Advertisement
ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಗುರುವಾರ ರಾತ್ರಿ ನಿಧನರಾದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ನವದೆಹಲಿಯ ಅವರ ನಿವಾಸದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು
, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ಪ್ರಿಯಾಂಕ ಗಾಂಧಿ ಸೇರಿದಂತೆ ಹಲವು ಗಣ್ಯರು ಶುಕ್ರವಾರ ಭೇಟಿ ನೀಡಿ ಪುಷ್ಪಗುಚ್ಛ ಅರ್ಪಿಸಿ ಅಂತಿಮ ನಮನ ಸಲ್ಲಿಸಿದರು.

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ತ್ರಿವರ್ಣ ಧ್ವಜ ಹೊದಿಸಿ, ಹೂಗುಚ್ಛ ಅರ್ಪಿಸಿ ಪಕ್ಷ ಬೇಧ ಮರೆತು ನಾಯಕರು ಅಂತಿಮ ಗೌರವ ಸಲ್ಲಿಸಿದರು. ಈ ವೇಳೆ ಸಿಂಗ್ ಅವರ ಪತ್ನಿ ಗುರುಶರಣ್ ಕೌರ್ ಮತ್ತಿತರ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

ಮನ ಮೋಹನ್ ಸಿಂಗ್ ಅವರ ಮಗಳು ಅಮೆರಿಕದ್ದು ಅವರ ಬರುವಿಕೆಗಾಗಿ ಕುಟುಂಬ ಕಾಯುತ್ತಿದ್ದು, ಅವರು ಬಂದ ನಂತರ ಶನಿವಾರ ಪಾರ್ಥಿವ ಶರೀರದ ಅಂತ್ಯಕ್ರಿಯೆ ನಡೆಯಲಿದೆ. ಅಲ್ಲಿಯವರೆಗೂ ಅವರ ನವದೆಹಲಿಯ ನಿವಾಸದಲ್ಲಿಯೇ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬ ಮೂಲಗಳು ಮತ್ತು ಕಾಂಗ್ರೆಸ್ ಪಕ್ಷವು ತಿಳಿಸಿದೆ.

ಶನಿವಾರ ಬೆಳಗ್ಗೆ 8 ಗಂಟೆಗೆ ಕಾಂಗ್ರೆಸ್ ಕೇಂದ್ರ ಕಚೇರಿಗೆ ಪಾರ್ಥಿವ ಶರೀರವನ್ನು ತರಲಾಗುತ್ತದೆ. ಅಲ್ಲಿ ಬೆಳಗ್ಗೆ 8-30 ರಿಂದ 9-30ರವರೆಗೂ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಲ್ಲಿಂದ ಬೆಳಗ್ಗೆ 9-30ಕ್ಕೆ ಅಂತಿಮ ಯಾತ್ರೆ ಶುರುವಾಗಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ತಿಳಿಸಿದ್ದಾರೆ.



ಮನಮೋಹನ್ ಸಿಂಗ್(92) ಅವರು ಗುರುವಾರ ವಯೋಸಹಜ ಕಾಯಿಲೆಯಿಂದ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಪತ್ನಿ ಹಾಗೂ ಮೂವರು ಪುತ್ರಿಯರನ್ನು ಮನಮೋಹನ್ ಸಿಂಗ್ ಅವರು ಅಗಲಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ