Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅನುದಿನವೂ ನಡೆಯಲಿದೆ ಕೆಂಪೇಗೌಡರ ಇತಿಹಾಸದ ಸ್ಮರಣೆ-ಡಿಕೆಶಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅನುದಿನವೂ ನಡೆಯಲಿದೆ ಕೆಂಪೇಗೌಡರ ಇತಿಹಾಸದ ಸ್ಮರಣೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದರು.


ಅಪ್ರತಿಮ ಆಡಳಿತಗಾರ, ಸರ್ವ ಜನಾಂಗದ ನಾಯಕ ನಾಡಪ್ರಭು ಕೆಂಪೇಗೌಡರ 516ನೇ ಜಯಂತ್ಯುತ್ಸವದ ಪ್ರಯುಕ್ತ ಶುಕ್ರವರ ಸುಮನಹಳ್ಳಿ ವೃತ್ತದ ಬಳಿ, 5 ಎಕರೆ ಜಾಗದಲ್ಲಿ ಕೆಂಪೇಗೌಡ ಭವನದ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ, 7 ಗಡಿಗೋಪುರಗಳು ಹಾಗೂ ಐತಿಹಾಸಿಕ ಸ್ಥಳಗಳಿಂದ ಆಗಮಿಸಿದ ಪುರಜ್ಯೋತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಪೂಜ್ಯ ಮಠಾಧೀಶರುಗಳ ದಿವ್ಯ ಸಾನಿಧ್ಯದಲ್ಲಿ ಸ್ವೀಕರಿಸಿ ಅವರು ಮಾತನಾಡಿದರು.
ಯುಗಪುರುಷ ನಾಡಪ್ರಭು ಕೆಂಪೇಗೌಡರು ನಮಗೆಲ್ಲಾ ಆದರ್ಶ!


ಧರ್ಮವೀರ, ಸಾವಿರ ಕೆರೆಗಳ ಸರದಾರ, ಬೆಂಗಳೂರೆಂಬ ಮಹಾನಗರಿಯನ್ನು ವಿಜಯನಗರ ಸಾಮ್ರಾಜ್ಯದಂತೆ ಸಂಪದ್ಭರಿತವಾಗಿ ನಿರ್ಮಿಸಲು ಪಣ ತೊಟ್ಟ ದಾರ್ಶನಿಕ, ನಾಡಪ್ರಭು ಕೆಂಪೇಗೌಡರು ಎಂದು ಡಿಸಿಎಂ ತಿಳಿಸಿದರು. ಕೆಂಪೇಗೌಡರ ದಕ್ಷ ಆಡಳಿತ ಹಾಗೂ ಅಭಿವೃದ್ಧಿ ಮಾದರಿಯು ಸದಾ ನಮ್ಮ ಸರ್ಕಾರಕ್ಕೆ ಸ್ಫೂರ್ತಿಯಾಗಿದೆ. ಬೆಂಗಳೂರನ್ನು ವ್ಯಾಪಾರೋದ್ಯಮಗಳ ಕೇಂದ್ರವಾಗಿ, ಸರ್ವಜನಾಂಗದ ಶಾಂತಿಯ ತೋಟವಾಗಿ, ಜಲಸಮೃದ್ಧ ನಗರವಾಗಿ ನಿರ್ಮಿಸಿದ ಆ ಮಹಾನ್‌ ಚೇತನಕ್ಕೆ ಸಾವಿರದ ಶರಣು ಎಂದು ಡಿಕೆ ಶಿವಕುಮಾರ್ ಸ್ಮರಿಸಿದರು.

ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರು ನಗರ ಇಂದು ಜಾಗತಿಕ ಮಟ್ಟದಲ್ಲಿ ಹೆಸರುವಾಸಿಯಾಗಿದೆ. ಕೆಂಪೇಗೌಡರು ಈ ನಾಡಿಗೆ ನೀಡಿದ ಅಮೂಲಾಗ್ರ ಕೊಡುಗೆಗಳನ್ನು ಗೌರವಿಸಿ, ಅವರ ಸ್ಮರಣಾರ್ಥ ಕಾಂಗ್ರೆಸ್ ಸರ್ಕಾರವು ಇಲ್ಲಿಯವರೆಗೂ ಅನೇಕ ಅಭಿವೃದ್ಧಿ ಯೋಜನೆಗಳು, ಸರ್ವರಿಗೂ ಒಳಿತಾಗುವಂಥ ಕಾರ್ಯಕ್ರಮಗಳನ್ನು ಕೈಗೊಂಡಿದೆ. ಅದರ ಒಂದು ಕಿರುನೋಟ ಇಲ್ಲಿದೆ ಎಂದು ಉಪಮುಖ್ಯಮಂತ್ರಿಗಳು ತಿಳಿಸಿದರು.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ