Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿಪ್ಲೋಮಾ ಪ್ರವೇಶಾತಿ: ವಿಶೇಷಚೇತನರಿಂದ ಅರ್ಜಿ ಆಹ್ವಾನ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮೈಸೂರು ಜೆಎಸ್‍ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ವತಿಯಿಂದ 2026-27ನೇ ಸಾಲಿಗೆ ಮೂರು ವರ್ಷಗಳ ಅವಧಿಯ ಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕೆ ವಿಶೇಷಚೇತನ ವಿದ್ಯಾರ್ಥಿ
, ವಿದ್ಯಾರ್ಥಿನಿಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜೂನ್ 05 ಅರ್ಜಿ ಸಲ್ಲಿಸಲು ಕೊನೆಯ ದಿನ.

ಅನುದಾನಿತ ಕೋರ್ಸುಗಳಾದ ಆರ್ಕಿಟೆಕ್ಚರ್ ಅಸಿಸ್ಟೆಂಟ್‍ಷಿಪ್, ಕಮರ್ಷಿಯಲ್ ಪ್ರಾಕ್ಟೀಸ್, ಕಂಪ್ಯೂಟರ ಸೈನ್ಸ್ ಮತ್ತು ಇಂಜಿನಿಯರಿಂಗ್ ಹಾಗೂ ಅನುದಾನ ರಹಿತ ಕೋರ್ಸುಗಳಾದ  ಜ್ಯುಯಲರಿ ಡಿಸೈನ್ ಮತ್ತು ಟೆಕ್ನಾಲಜಿ, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್, ಕಂಪ್ಯೂಟರ್ ಅಪ್ಲೀಕೇಷನ್ಸ್, ಅಪಾರೇಲ್ ಡಿಸೈನ್ ಮತ್ತು ಫ್ಯಾಬ್ರಿಕೇಷನ್ ಟೆಕ್ನಾಲಜಿ, ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಮತ್ತು ಎಲೆಕ್ಟ್ರಿಕ್ ವೆಹಿಕಲ್  ಟೆಕ್ನಾಲಜಿ ಕೋರ್ಸುಗಳಿಗೆ ವಿಶೇಷಚೇತನರು ಅರ್ಜಿ ಸಲ್ಲಿಸಬಹುದು.

      ಪ್ರವೇಶಾರ್ಹತೆ:  ಕರ್ನಾಟಕ ಎಸ್‍ಎಸ್‍ಎಲ್‍ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹಾಗೂ ಮೂಳೆ ಮತ್ತು ಕೀಲು ಅಂಗವಿಕಲತೆ ಶೇ.40 ಮತ್ತು ಮೇಲ್ಪಟ್ಟು, ಕಿವುಡು ಮತ್ತು ಮೂಗು ಅಂಗವಿಕಲತೆ 60 ಡಿಬಿ ಮತ್ತು ಮೇಲ್ಪಟ್ಟು, ಭಾಗಶಃ ಮತ್ತು ಪೂರ್ಣ ಅಂಧತ್ವ 6/60 ಅಥವಾ 20/200 ಸ್ನೆಲೆನ್ ಹೊಂದಿರುವವರು ಅರ್ಜಿ ಸಲ್ಲಿಸಬಹುದು.

ಅರ್ಹ ವಿದ್ಯಾರ್ಥಿಗಳಿಗೆ ರಾಜ್ಯ ಮತ್ತು ರಾಷ್ಟ್ರಮಟ್ಟದ ವಿದ್ಯಾರ್ಥಿವೇತನದ ಆರ್ಥಿಕ ಸಹಾಯ ದೊರೆಯುತ್ತದೆ. ಪಾಲಿಟೆಕ್ನಿಕ್‍ನ ಯಶಸ್ವಿ ವಿದ್ಯಾರ್ಥಿಗಳಿಗೆ ಉದ್ಯೋಗ ಮತ್ತು ತರಬೇತಿ ಕೇಂದ್ರದ ಮೂಲಕ ಉದ್ಯೋಗಾವಕಾಶವನ್ನು ಕಲ್ಪಿಸಿಕೊಡಲಾಗುತ್ತದೆ. ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರುಗಳಿಗೆ  ಪ್ರತ್ಯೇಕ ವಿದ್ಯಾರ್ಥಿನಿಲಯದ ಸೌಲಭ್ಯ ಕಲ್ಪಿಸಲಾಗಿದೆ.

ಪ್ರವೇಶಕ್ಕೆ ಅರ್ಜಿಗಳನ್ನು  ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ.200/ ಹಾಗೂ SC/ST/C-1  ವರ್ಗದವರಿಗೆ ರೂ.100/ ನಗದು ಅಥಾವಾ ಡಿಡಿ ಮೂಲಕ ಮೈಸೂರಿನಲ್ಲಿ ಸಂದಾಯವಾಗುವಂತೆ ಕಳುಹಿಸಿ  ಅರ್ಜಿ ಪಡೆಯಯಬಹುದು ಅಥಾವಾ ವೆಬ್ ಸೈಟ್ ಮೂಲಕ ಡೌನ್‍ಲೋಡ್ ಮಾಡಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ www.jsspda.org /  ದೂರವಾಣಿ ಸಂಖ್ಯೆ 9844644937 ಗೆ ಸಂಪರ್ಕಿಸಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಜೂನ್ 05 ರೊಳಗೆ ಕಚೇರಿಗೆ ತಲುಪಿಸಬೇಕೆಂದು ಮೈಸೂರಿನ ಜೆಎಸ್‍ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ಪ್ರಾಂಶುಪಾಲರು ತಿಳಿಸಿದ್ದಾರೆ.

 

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ್ ಶಾ ಭೇಟಿ ಮಾಡಿದ ಡಿ.ಕೆ. ಶಿವಕುಮಾರ್: ಕರ್ನಾಟಕದ ಭದ್ರತೆ ಹಾಗೂ ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಬದ್ಧಹಿರಿಯೂರು ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕಿ ಸಂಧ್ಯಾ ವೈ.ಎಸ್. ಕರ್ತವ್ಯದಿಂದ ಬಿಡುಗಡೆಅಕ್ರಮವಾಗಿ ಗಾಂಜವನ್ನು ಸಂಗ್ರಹಿಸಿಟ್ಟಿದ್ದ ವ್ಯಕ್ತಿಯ ಬಂಧನಧರ್ಮಸ್ಥಳ ಬುರುಡೆ ಪ್ರಕರಣ: ನಟ ಪ್ರಕಾಶ್‌ರಾಜ್‌ಹೆಸರು ಪ್ರಸ್ತಾಪ; ಗೃಹ ಸಚಿವರ ಪ್ರತಿಕ್ರಿಯೆಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನೆಡೆಪೆಟ್ರೋಲ್ ಬಂಕ್‌ಗಳಲ್ಲಿ ಬಲ್ಕ್ ಇಂಧನ ಖರೀದಿಗೆ ಕೇಂದ್ರದ ಬ್ರೇಕ್: ದಿನಕ್ಕೆ 200 ಲೀಟರ್‌ಮಾತ್ರ ಮಿತಿ!ರೈತರ ತೀವ್ರ ವಿರೋಧದ ನಡುವೆ ಬಿಡದಿ ಟೌನ್ ಶಿಪ್ ಭೂ ಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಪ್ರಕಟಅನುದಾನ ಹಂಚಿಕೆಯಲ್ಲಿ ತಾರತಮ್ಯವಾಗಿಲ್ಲ, ಇದು ಅಂತಿಮ ಪಟ್ಟಿಯಲ್ಲ: ಸಿದ್ದರಾಮಯ್ಯ ಸ್ಪಷ್ಟನೆಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ತಮಿಳುನಾಡು ಸಿಎಂ 'ದಳಪತಿ' ವಿಜಯ್: ಕರವೇ ಪ್ರತಿಭಟನೆಮಾವಿನ ಹಣ್ಣು ತಿಂದ ಬೆನ್ನಲ್ಲೇ ಇಬ್ಬರು ಸಹೋದರಿಯರು ಸಾವು!