ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರದ ಮೆದೇಹಳ್ಳಿ ರಸ್ತೆ ಈದ್ಗಾ ಮೊಹಲ್ಲಾದ ನಿವಾಸಿ ಮಹಮ್ಮದ್ ಅಜೀಜ್ ತಂದೆ ಭಾಷಾಸಾಬ್ (ವಯಸ್ಸು 21) ಕಾಣೆಯಾದ ಕುರಿತು ಆಗಸ್ಟ್ 28ರಂದು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಣೆಯಾದ ಮಹಮ್ಮದ್ ಅಜೀಜ್ 5.5 ಅಡಿ ಎತ್ತರವಿದ್ದು, ದುಂಡು ಮುಖ, ಸಾಧರಣಾ ಮೈ ಕಟ್ಟು ಹೊಂದಿದ್ದಾರೆ. ಮೂಗಿನ ಮೇಲೆ ಹಳೆಯ ಗಾಯದ ಗುರುತು ಇರುತ್ತದೆ. ಕನ್ನಡ, ಹಿಂದಿ, ಉರ್ದು ಭಾಷೆ ಮಾತನಾಡುತ್ತಾನೆ.
ಕಾಣೆಯಾದ ಸಂದರ್ಭದಲ್ಲಿ ಹಳದಿ ಬಣ್ಣದ ಜಾಕೀಟ್ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ. ಗುರುತು ಪತ್ತೆಯಾದವರು ಜಿಲ್ಲಾ ಕಂಟ್ರೋಲ್ ರೂಂ ಸಂಖ್ಯೆ 08194-222782 ಗೆ ಕರೆ ಮಾಡುವಂತೆ ಪ್ರಕಟಣೆ ತಿಳಿಸಿದೆ.



