LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಿವಮೊಗ್ಗಕ್ಕೆ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ಕುರಿತು ಚರ್ಚೆ:

Advertisement
Advertisement

ಚಂದ್ರವಳ್ಳಿ ನ್ಯೂಸ್, ​ಬೆಂಗಳೂರು: 
ಶಿವಮೊಗ್ಗ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ವಕೀಲರ ಸಂಘದ ಪ್ರಮುಖರ ನಿಯೋಗವು ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಮಹತ್ವದ ಸಮಾಲೋಚನೆ ನಡೆಸಿತು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದ ನಿಯೋಗವು
, ಇತ್ತೀಚೆಗೆ ರಾಜ್ಯದ ಮುಖ್ಯಮಂತ್ರಿಯಾಗಿ ಜವಾಬ್ದಾರಿ ವಹಿಸಿಕೊಂಡಿರುವ ಅವರಿಗೆ ಜಿಲ್ಲೆಯ ಪರವಾಗಿ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿತು.

​ಮುಖ್ಯಮಂತ್ರಿಗಳೊಂದಿಗಿನ ಈ ಸಭೆಯಲ್ಲಿ ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳು ಹಾಗೂ ಪ್ರಮುಖವಾಗಿ ಮಲೆನಾಡು ಮತ್ತು ಮಧ್ಯ ಕರ್ನಾಟಕ ಭಾಗದ ಸಾರ್ವಜನಿಕರ ಹಿತದೃಷ್ಟಿಯಿಂದ ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪಿಸುವ ಕುರಿತು ಸಮಾಲೋಚನೆ ನಡೆಸಲಾಯಿತು ಎಂದು ಮೂಲಗಳು ತಿಳಿಸಿವೆ.​
ಈ ಉನ್ನತ ಮಟ್ಟದ ನಿಯೋಗದಲ್ಲಿ ಶಿವಮೊಗ್ಗ ಜಿಲ್ಲೆಯ ಪ್ರಮುಖ ಜನಪ್ರತಿನಿಧಿಗಳಾದ ಶಾಸಕ ಚನ್ನಬಸಪ್ಪ
, ಬೇಳೂರು ಗೋಪಾಲಕೃಷ್ಣ, ವಿಧಾನ ಪರಿಷತ್ ಸದಸ್ಯರಾದ ಧನಂಜಯ ಸರ್ಜಿ ಹಾಗೂ ಅರುಣ್ ಶಂಕರ್ ಮೂರ್ತಿ ಪಾಲ್ಗೊಂಡಿದ್ದರು.

​ಇವರೊಂದಿಗೆ ಶಿವಮೊಗ್ಗ ವಕೀಲರ ಸಂಘದ ಅಧ್ಯಕ್ಷರಾದ ರಾಘವೇಂದ್ರ ಸ್ವಾಮಿ, ಹಿರಿಯ ವಕೀಲರಾದ ಬಸಪ್ಪ ಗೌಡ ಸೇರಿದಂತೆ ಜಿಲ್ಲೆಯ ಹಲವು ಹಿರಿಯ ನ್ಯಾಯವಾದಿಗಳು ಭಾಗವಹಿಸಿ, ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠದ ಅಗತ್ಯತೆಯ ಕುರಿತು ಮುಖ್ಯಮಂತ್ರಿಗಳಿಗೆ ವಿವರವಾದ ಮನವಿ ಸಲ್ಲಿಸಿದರು.

​ನಿಯೋಗದ ಅಹವಾಲನ್ನು ಆಲಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಜಿಲ್ಲೆಯ ನ್ಯಾಯಾಂಗ ಮೂಲಸೌಕರ್ಯಗಳ ವೃದ್ಧಿ ಹಾಗೂ ಸಾರ್ವಜನಿಕರ ಕಾನೂನು ಅಗತ್ಯತೆಗಳ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸುವುದಾಗಿ ಭರವಸೆ ನೀಡಿದ್ದಾರೆ. ಪಕ್ಷಾತೀತವಾಗಿ ಜಿಲ್ಲೆಯ ಅಭಿವೃದ್ಧಿಗೆ ಎಲ್ಲರೂ ಒಟ್ಟಾಗಿ ಶ್ರಮಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ: ಹಿರಿಯೂರಿನಲ್ಲಿ ರಾಜಕೀಯ ಪಕ್ಷಗಳ ಸಭೆಶ್ರೀ ಮಲ್ಲಿಕಾರ್ಜುನ ಸ್ವಾಮಿಗಳವರ ಶಿಕ್ಷಣ ಮತ್ತು ಸಮಾಜಸೇವೆ ಆದರ್ಶನೀಯ ಬೇತೂರುಪಾಳ್ಯ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಪುನರ್ಮಿಲನ ಹಾಗೂ ಗುರುವಂದನೆಶತಮಾನದ ಜ್ಞಾನ ದೇಗುಲ: ಹೀರದ ಸೂಗಮ್ಮ ಶಾಲೆಯ ಶತಮಾನೋತ್ಸವ ಉದ್ಘಾಟಿಸಿದ ಸಚಿವ ಎಂ. ಬಿ. ಪಾಟೀಲ್ಎಸ್. ನಿಜಲಿಂಗಪ್ಪ ಅವರ ಪುಣ್ಯಸ್ಮರಣೆ: ಪುಷ್ಪಾರ್ಚನೆ ಮಾಡಿ ಗೌರವ ನಮನ​ 'ನಶೆ ಮುಕ್ತ ಭಾರತ' ನಿರ್ಮಾಣಕ್ಕೆ ಪ್ರತಿಜ್ಞಾವಿಧಿ: ಬಿ. ವೈ. ವಿಜಯೇಂದ್ರ'ಅಗ್ನಿ-4' ಕ್ಷಿಪಣಿ ಉಡಾವಣೆ ಯಶಸ್ವಿ: ಭಾರತದ ರಕ್ಷಣಾ ವಲಯಕ್ಕೆ ಮತ್ತಷ್ಟು ಬಲ, 'ಆತ್ಮನಿರ್ಭರ ಭಾರತ'ಕ್ಕೆ ದಿಕ್ಸೂಚಿE20 ಎಥನಾಲ್ ಇಂಧನ ನೀತಿ ವಿರುದ್ಧ ಕೇಂದ್ರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆಗಳ ಸುರಿಮಳೆ‘ಕಸದಿಂದ ಮುಕ್ತಿ’ ಅಭಿಯಾನಕ್ಕೆ ಬೆಸ್ಕಾಂ ಬೆಂಬಲ:ಕಾಂಗ್ರೆಸ್ ಸರ್ಕಾರ ಸಂಪೂರ್ಣ ದಿವಾಳಿ, ಶಾಸಕರಿಗೆ ಅಧಿಕಾರ ದಾಹ: ಸಚಿವ ಹೆಚ್.ಡಿ. ಕುಮಾರಸ್ವಾಮಿ