Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Education News

ವಾಣಿಜ್ಯ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ರಾಜ್ಯಕ್ಕೆ ಪ್ರಥಮ

ಚಂದ್ರವಳ್ಳಿ ನ್ಯೂಸ್, ಮೂಡುಬಿದಿರೆ(ದಕ್ಷಿಣ ಕನ್ನಡ):
ರಾಜ್ಯಾದ್ಯಂತ ಕುತೂಹಲ ಮೂಡಿಸಿದ್ದ 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಹೊರಬಿದ್ದಿದ್ದು, ಮೂಡುಬಿದಿರೆಯ ಆಳ್ವಾಸ್ ಪಿಯು ಕಾಲೇಜು ರಾಜ್ಯಮಟ್ಟದಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿದೆ.

ವಾಣಿಜ್ಯ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವ ಮೂಲಕ ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ಬರೆದಿದ್ದಾರೆ.

ನೂರಕ್ಕೆ ನೂರು ಅಂಕ: ಮೂಡುಬಿದಿರೆ ಮೂಲದವರೇ ಆಗಿರುವ ದಿಶಾ ಅಪ್ರತಿಮ ಸಾಧನೆ ಮಾಡಿದ್ದಾರೆ. ವಾಣಿಜ್ಯ ವಿಭಾಗದ ಆರೂ ವಿಷಯಗಳಲ್ಲಿ 600 (ಶೇ.100) ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರ ಈ ಸಾಧನೆಯು ಇಡೀ ರಾಜ್ಯದ ಗಮನ ಸೆಳೆದಿದೆ.

ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮ ಮನೆಮಾಡಿದೆ. ವಿದ್ಯಾರ್ಥಿನಿಯ ಸಾಧನೆಯನ್ನು ಕಂಡು ಹರ್ಷ ವ್ಯಕ್ತಪಡಿಸಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವ ದಿಶಾ ಅವರಿಗೆ ಅಭಿನಂದಿಸಿದರು.

ವಿಜ್ಞಾನದಲ್ಲಿ ಮಂಗಳೂರಿನ ಎಕ್ಸ್‌ಪರ್ಟ್ ಕಾಲೇಜು ವಿದ್ಯಾರ್ಥಿಗಳ ಸಾಧನೆ: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಮಂಗಳೂರಿನ ಎಕ್ಸ್‌ಪರ್ಟ್ ಕಾಲೇಜು ವಿದ್ಯಾರ್ಥಿಗಳು ಭರ್ಜರಿ ಸಾಧನೆ ಮಾಡಿರುವುದು ಗಮನಾರ್ಹವಾಗಿದೆ. ಇಬ್ಬರು ವಿದ್ಯಾರ್ಥಿಗಳು 600ರಲ್ಲಿ 598 ಅಂಕಗಳನ್ನು ಪಡೆದು ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ವಿಜ್ಞಾನ ವಿಭಾಗದಲ್ಲಿ 598 ಅಂಕ ಪಡೆದ ನಂದನ್ ನಾಯ್ಕ ತಮ್ಮ ಸಾಧನೆ ಕುರಿತು ಮಾತನಾಡಿ, "ನಾನು 598 ಅಂಕಗಳನ್ನು ನಿರೀಕ್ಷಿಸಿದ್ದೆ. ನಿರಂತರ ಹಾರ್ಡ್‌ವರ್ಕ್ ಮಾಡುತ್ತಿದ್ದೆ. ನನ್ನ ಸಾಧನೆಗೆ ಮುಖ್ಯ ಕ್ರೆಡಿಟ್‌ನ್ನು ನನ್ನ ಅಪ್ಪ-ಅಮ್ಮ ಮತ್ತು ಶಿಕ್ಷಕರಿಗೆ ನೀಡುತ್ತೇನೆ" ಎಂದು ಹೇಳಿದರು.

ಇದೇ ವೇಳೆ ಮತ್ತೊಬ್ಬ ವಿದ್ಯಾರ್ಥಿ ಸಮನ್ಯು ಎಸ್​. ಶೆಟ್ಟಿ ಕೂಡ ಸಂತಸ ವ್ಯಕ್ತಪಡಿಸಿ, "ನನಗೆ 600ರಲ್ಲಿ 598 ಅಂಕಗಳು ಬಂದಿವೆ. ಎರಡು ವಿಷಯಗಳಲ್ಲಿ ಒಂದೊಂದು ಅಂಕ ಕಡಿಮೆಯಾಗಿದೆ. ಉಳಿದ ಎಲ್ಲಾ ವಿಷಯಗಳಲ್ಲಿ ಉತ್ತಮ ಅಂಕಗಳನ್ನು ಪಡೆದಿದ್ದೇನೆ. 599 ಅಂಕಗಳ ನಿರೀಕ್ಷೆ ಇತ್ತು. ಒಂದು ಅಂಕ ಕಡಿಮೆಯಾದರೂ 598 ಅಂಕಗಳು ಉತ್ತಮ ಸಾಧನೆ ಎಂದು ಸಂತೋಷವಾಗಿದೆ" ಎಂದು ಅಭಿಪ್ರಾಯಪಟ್ಟರು.

ಅದೇ ಕಾಲೇಜಿನ ದೀಕ್ಷಾ ಶೆಣೈ, ಅದಿತಿ ಐ ರೆಡ್ಡಿ, ಅಮೋಘ್ ಬಿ ಲೋಕ್, ಸುಹಾನ್ ನಾರಾಯಣ ಬಿಲ್ಲವ ಅವರು ತಲಾ 600ರಲ್ಲಿ 596 ಅಂಕಗಳನ್ನು ಪಡೆದು ಕಾಲೇಜಿನ ಗೌರವ ಹೆಚ್ಚಿಸಿದ್ದಾರೆ.

ಒಟ್ಟಾರೆ, ಈ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿರುವುದು ಶಿಕ್ಷಣ ಕ್ಷೇತ್ರದಲ್ಲಿ ಹೊಸ ಭರವಸೆಯನ್ನು ಮೂಡಿಸಿದೆ.

ಫಲಿತಾಂಶ ಸೈಟ್​ ವಿವರ: https://karresults.nic.in ಲಿಂಕ್​ ಮೂಲಕ ಹಾಗೂ KarnatakaOne Mobile App ಮೂಲಕವೂ ರಿಸಲ್ಟ್​ ನೋಡಬಹುದು. ಅಲ್ಲದೆ, ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸ್​ಆ್ಯಪ್/ಎಸ್‌ಎಂಎಸ್ (SMS) ಮೂಲಕವೂ ಫಲಿತಾಂಶದ ಮಾಹಿತಿಯನ್ನು ಮಂಡಳಿಯಿಂದ ರವಾನಿಸಲಾಗಿದೆ.

ಅಂಕಪಟ್ಟಿಯನ್ನು ಡಿಜಿಲಾಕರ್​​ನಿಂದ ಡೌನ್‌ಲೋಡ್ ಮಾಡಿಕೊಳ್ಳಲು ಬಯಸುವವರು ವಿಡಿಯೋ ಲಿಂಕ್​ https://tinyurl.com/mw84wmh9 ಮೂಲಕ ಪ್ರಕ್ರಿಯೆಯನ್ನು ತಿಳಿದುಕೊಳ್ಳಬಹುದು.

 

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು