Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಕುಂಚಿಟಿಗರ ಕಡೆಗಣನೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇಂದ್ರ ಸರ್ಕಾರ ಕುಂಚಿಟಿಗ ಜಾತಿಗೆ ಒಬಿಸಿ ಮೀಸಲು ನೀಡಲ್ಲ, ರಾಜ್ಯ ಸರ್ಕಾರ ಕುಂಚಿಟಿಗ ಕುಲಶಾಸ್ತ್ರೀಯ ಅಧ್ಯಯನ ವರದಿಯನ್ನು ಸಂಪುಟಕ್ಕೆ ತಂದು ಸಾಮಾಜಿಕ ನ್ಯಾಯ ನೀಡದಿರುವುದು ಕುಂಚಿಟಿಗ ಸಮಾಜಕ್ಕೆ ಮಾಡುತ್ತಿರುವ ಮಹಾದ್ರೋಹದ ಕೆಲಸವಾಗಿದೆ ಎಂದು
ರಾಜ್ಯ ಕುಂಚಿಟಿಗ ಅಧಿಕಾರಿಗಳು ಮತ್ತು ನೌಕರರ ಸಂಘದ ರಾಜ್ಯಾಧ್ಯಕ್ಷ ಎಸ್.ಕೆ.ಲಕ್ಷ್ಮಣ್ ವಿಷಾದ ವ್ಯಕ್ತಪಡಿಸಿದರು.

 ಬೆಂಗಳೂರಿನ ಆರ್.ಎಂ.ವಿ 2ನೇ ಹಂತದ ರಾಜ್ ಮಹಲ್ ಬಡಾವಣೆಯಲ್ಲಿರುವ ರಾಜ್ಯ ಕುಂಚಿಟಿಗ ಅಧಿಕಾರಿಗಳು ಮತ್ತು ನೌಕರರ ಸಂಘದ ಕಚೇರಿಯಲ್ಲಿ ಮಾಹಿತಿ ಆಯೋಗದ ಆಯುಕ್ತೆ ಡಾ.ಬಿ.ಆರ್ ಮಮತಾ ಹಾಗೂ ಬಿಬಿಎಂಪಿ ಡೆಪ್ಯೂಟಿ ಕಮಿಷನರ್ ಜೆ.ರಾಜು ಬೇತೂರು ಪಾಳ್ಯ ಇವರಿಗೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಕೇಂದ್ರದ ಒಬಿಸಿ ಮೀಸಲಾತಿ ನೆನೆಗುದಿಗೆ ಬಿದ್ದಿದೆ. ಇನ್ನೂ ರಾಜ್ಯ ಸರ್ಕಾರವು ಕುಂಚಿಟಿಗ ಕುಲಶಾಸ್ತ್ರೀಯ ಅಧ್ಯಯನ ವರದಿಯನ್ನು ಯಥಾವತ್ ಜಾರಿ ತಂದಿಲ್ಲ. ಚುನಾವಣೆ ಸಂದರ್ಭದಲ್ಲಿ ಮಾತ್ರ ಕುಂಚಿಟಿಗ ಜಾತಿಯನ್ನು ಬಳಸಿಕೊಂಡು ನಂತರ ಸಂಪೂರ್ಣ ಕಡೆಗಣಿಸಲಾಗುತ್ತದೆ. ಇದರಿಂದಾಗಿ ಹಿಂದುಳಿದ ಕುಂಚಿಟಿಗ ಜಾತಿಗೆ ಶಿಕ್ಷಣ, ಉದ್ಯೋಗದಲ್ಲಿ ಭಾರೀ ಅನ್ಯಾಯವಾಗುತ್ತಿದೆ ಎಂದು ಲಕ್ಷ್ಮಣ್ ಬೇಸರ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರದ ಸಂವಿಧಾನಕ ಹುದ್ದೆಗಳಲ್ಲಿ ಕುಂಚಿಟಿಗ ಪಾಲು ಶೂನ್ಯವಾಗಿದೆ. ಯಾವುದೇ ಆಯೋಗ ಸೇರಿದಂತೆ ವಿವಿಧ ನಿಗಮ, ಮಂಡಳಿ, ಅಕಾಡೆಮಿಗಳಲ್ಲಿ ಕುಂಚಿಟಿಗರಿಗೆ ಸಾಮಾಜಿಕ ನ್ಯಾಯ ಸಿಕ್ಕಿಲ್ಲ. ಅಲ್ಲದೆ ಸಮಾಜದಲ್ಲಿರುವ ಏಕೈಕ ಶಾಸಕ ಟಿ.ಬಿ ಜಯಚಂದ್ರ ಅವರಿಗೆ ಸಂಪುಟದಲ್ಲಿ ಸ್ಥಾನ ಮಾನ ನೀಡದಿರುವುದು ಕುಂಚಿಟಿಗರಿಗೆ ಮಾಡಿರುವ ದ್ರೋಹದ ಕೆಲಸ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ವಿಶ್ರಾಂತ ಐಎಎಸ್ ಅಧಿಕಾರಿ ಹಾಗೂ ಮಾಹಿತಿ ಆಯೋಗದ ಆಯುಕ್ತರಾದ ಡಾ.ಬಿ.ಆರ್.ಮಮತ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿ ಸಮಾಜದ ಮುಖ್ಯವಾಹಿನಿಯಲ್ಲಿರುವ ಮುಖಂಡರು, ಕುಂಚಿಟಿಗ ಸಮಾಜದ ಮಕ್ಕಳಿಗೆ ಉತ್ತಮ ಶಿಕ್ಷಣ ಹೊಂದಲು ಜಾಗೃತಿ ಮೂಡಿಸುವ ಅಗತ್ಯವಿದೆ. ಶಿಕ್ಷಣದಿಂದ ಮಾತ್ರ ಸಮಬಾಳು ಸಮಪಾಲು ಪಡೆಯಲು ಸಾಧ್ಯ ಎನ್ನುವ ಸತ್ಯ ಅರಿತು ಶೈಕ್ಷಣಿಕವಾಗಿ ಸಮಾಜ ಮುಖ್ಯವಾಹಿನಿಗೆ ಬರಬೇಕಿದೆ ಎಂದು ಅವರು ತಿಳಿಸಿದರು.

ಮಾಹಿತಿ ಆಯೋಗದ ಆಯುಕ್ತರನ್ನಾಗಿ ರಾಜ್ಯ ಸರ್ಕಾರ ನೇಮಕ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಮತ್ತಿತರರಿಗೆ ಧನ್ಯವಾದಗಳನ್ನ ಅರ್ಪಿಸಿದ ಮಮತ ಅವರು, ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕಿದೆ ಎಂದು ಕರೆ ನೀಡಿದರು.

ಕೆಂಪೇಗೌಡ ದಂತ ವೈದ್ಯಕೀಯ ಸಂಘದ ಅಧ್ಯಕ್ಷರು ಹಾಗೂ ಬಿಬಿಎಂಪಿ ಡೆಪ್ಯೂಟಿ ಕಮಿಷನರ್ ಜೆ.ರಾಜು ಬೇತೂರು ಪಾಳ್ಯ ಸನ್ಮಾನ ಸ್ವೀಕರಿಸಿ ಮಾತನಾಡಿ ಕುಂಚಿಟಿಗ ಒಕ್ಕಲಿಗ ಸಮಾಜದಲ್ಲಿ ಯುವಕ-ಯುವತಿಯರಲ್ಲಿ ಸಾಕಷ್ಟು ಗ್ಯಾಪ್ ಏರ್ಪಟ್ಟಿದೆ. ಸಮಾಜದ ಹೆಣ್ಣು ಮಕ್ಕಳು ಶ್ರಮವಹಿಸಿ ಶೈಕ್ಷಣಿಕವಾಗಿ ಸಾಧನೆ ಮಾಡುತ್ತಿದ್ದರೆ, ಯುವಕರು ಕಲಿಕೆಯಿಂದ ಹೊರಗುಳಿಯುತ್ತಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಸಮಾಜದ ಯುವಕರು ಸತತ ಪರಿಶ್ರಮದ ಮೂಲಕ ಶಿಕ್ಷಣ ಪಡೆಯಬೇಕು ಎಂದು ಸೂಚ್ಯವಾಗಿ ತಿಳಿಸಿದರು.



ಅಖಿಲ ಕುಂಚಿಟಿಗ ಮಹಾಮಂಡಲದ ಮಾಜಿ ರಾಜ್ಯಾಧ್ಯಕ್ಷ ಕೆ.ಬಸವಾನಂದ, ರಾಜ್ಯ ಕುಂಚಿಟಿಗ ಅಧಿಕಾರಿಗಳು ಮತ್ತು ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಡಾ.ಎಂ.ಜಿ.ಗೋವಿಂದಯ್ಯ,  ಉಪಾಧ್ಯಕ್ಷ ರಾಮಾಂಜಿನಪ್ಪ, ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ವಿಜಯಕುಮಾರ್, ರಮೇಶ್, ಮಹಾಲಿಂಗಪ್ಪ, ರಮೇಶ್ ಸೇರಿದಂತೆ ಮತ್ತಿತರ ಪದಾಧಿಕಾರಿಗಳು, ಸಮಾಜದ ಮುಖಂಡರು ಹಾಜರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ