LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೈ ಸಂಪುಟ ವಿಸ್ತರಣೆ ಬೆನ್ನಲ್ಲೇ ಭುಗಿಲೆದ್ದ ಅಸಮಾಧಾನ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಪಾಟೀಲ್ 

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸಚಿವ ಸಂಪುಟ ಕೊನೆಗೂ ವಿಸ್ತರಣೆಯಾಗಿದ್ದು
, 20 ನೂತನ ಸಚಿವರ ಪಟ್ಟಿಯನ್ನು ಕಾಂಗ್ರೆಸ್ ಹೈಕಮಾಂಡ್ ಅಧಿಕೃತವಾಗಿ ಪ್ರಕಟಿಸಿದೆ.

ಹೈಕಮಾಂಡ್ ಹೊಸ ಸಮೀಕರಣಗಳೊಂದಿಗೆ ಸಚಿವ ಸ್ಥಾನ ಭರ್ತಿ ಮಾಡಿದ್ದು, ನೂತನ ಸಚಿವರ ಪಟ್ಟಿ ಹೊರಬಿದ್ದ ತಕ್ಷಣವೇ ಕಾಂಗ್ರೆಸ್‌ನಲ್ಲಿ ಸಚಿವಾಂಕ್ಷಿಗಳ ಆಕ್ರೋಶ ಭುಗಿಲೆದ್ದಿದೆ. 

ಸಚಿವ ಸ್ಥಾನದ ತೀವ್ರ ನಿರೀಕ್ಷೆಯಲ್ಲಿದ್ದ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್ ಅವರಿಗೆ ಕೊನೆ ಗಳಿಗೆಯಲ್ಲಿ ಸಚಿವ ಸ್ಥಾನ ಕೈತಪ್ಪಿದ್ದು, ಇದರಿಂದ ತೀವ್ರ ಅಸಮಾಧಾನಗೊಂಡಿರುವ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

 ಅಷ್ಟೇ ಅಲ್ಲದೆ, ತಮ್ಮ ಬಳಿಯಿರುವ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಇದರಿಂದಾಗಿ ಕೆಲ ಶಾಸಕರು ಕೂಡ ರಾಜೀನಾಮೆ ಹಾದಿ ತುಳಿಯುವ ಸುಳಿವು ನೀಡಿದ್ದಾರೆ. 

ಎಂ.ಬಿ. ಪಾಟೀಲ್ ವಿರುದ್ಧ ಬೆಂಬಲಿಗರ ಆರೋಪ:  ಕೆಲವು ದಿನಗಳ ಹಿಂದಷ್ಟೇ ಯಶವಂತರಾಯಗೌಡ ಪಾಟೀಲ್ ಅವರ ಬೆಂಬಲಿಗರು ಬೆಂಗಳೂರಿನ ಸಿಎಂ ನಿವಾಸದ ಹೊರಗೆ ಬೃಹತ್ ಪ್ರತಿಭಟನೆ ನಡೆಸಿದ್ದರು.

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು ವಿಜಯಪುರ ಜಿಲ್ಲೆಯ ಮತ್ತೊಬ್ಬ ಶಾಸಕರಿಗೆ ಸಚಿವ ಸ್ಥಾನ ನೀಡುವುದನ್ನು ವಿರೋಧಿಸುತ್ತಿದ್ದಾರೆ ಎಂದು ಆರೋಪಿಸಲಾಗಿತ್ತು.

ಯಶವಂತರಾಯಗೌಡರು ಸಚಿವರಾದರೆ ತಮ್ಮ ರಾಜಕೀಯ ಪ್ರಾಮುಖ್ಯತೆ ಕಡಿಮೆಯಾಗಬಹುದು ಎಂಬ ಭಯದಿಂದ ಎಂ.ಬಿ. ಪಾಟೀಲ್ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಬೆಂಬಲಿಗರು ಗಂಭೀರ ಆರೋಪ ಮಾಡಿದ್ದರು.  ವಿಜಯಪುರ ಜಿಲ್ಲೆಗೆ ಮತ್ತೊಂದು ಸಚಿವ ಸ್ಥಾನ ನೀಡಬೇಕು ಎಂಬ ಬೆಂಬಲಿಗರ ಹಾಗೂ ಶಾಸಕರ ಆಗ್ರಹಕ್ಕೆ ಹೈಕಮಾಂಡ್ ಸೊಪ್ಪು ಹಾಕದಿರುವುದು ಈಗ ಕಾಂಗ್ರೆಸ್ ಪಾಳಯದಲ್ಲಿ ದೊಡ್ಡ ಮಟ್ಟದ ಬಂಡಾಯದ ಸದ್ದು ಉಂಟುಮಾಡಿದೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾಣಿ ವಿಲಾಸ ಸಾಗರ ಹಾಗೂ ಗಾಯತ್ರಿ ಜಲಾಶಯಗಳಿಗೆ ಪ್ರವಾಸಿಗರ ಪ್ರವೇಶ ತಾತ್ಕಾಲಿಕ ನಿರ್ಬಂಧಆಗಸ್ಟ್ 12ಕ್ಕೆ 'ಶತಮಾನದ ಖಗ್ರಾಸ ಸೂರ್ಯಗ್ರಹಣ': ಭಾರತದಲ್ಲಿ ಗೋಚರವಿಲ್ಲ, ಯಾವುದೇ ಆಚರಣೆ ಅಗತ್ಯವಿಲ್ಲರಾಣಿ ಎಲಿಜಬೆತ್ ಹೊಗಳಿದ್ದ ನಮ್ಮ ವಿಧಾನಸೌಧವೇ ನನಗೆ ಸ್ಫೂರ್ತಿ-ಟಿ.ಬಿ ಜಯಚಂದ್ರಕೆಪಿಸಿಸಿ ಅಧ್ಯಕ್ಷರ ಆಶೀರ್ವಾದ ಸಿಕ್ಕಿದೆ- ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಣ್ಣಚಿತ್ತಯ್ಯ ಯುವ ಜನತೆಗೆ ಯೋಗ, ವ್ಯಾಯಾಮ ಅತ್ಯಂತ ಅವಶ್ಯ:ದಿವ್ಯ ಜ್ಞಾನಾನಂದ ಶ್ರೀಎಸ್. ನಾಗೇನಹಳ್ಳಿ ಎಂಪಿಸಿಎಸ್ ನೂತನ ಅಧ್ಯಕ್ಷರಾಗಿ ಮುನಿಕೃಷ್ಣಪ್ಪ ಆಯ್ಕೆಅಪಘಾತದಲ್ಲಿ ಮೃತಪಟ್ಟ ಕೋಳಿಗಳು 'ಜೀವಸಂಪತ್ತು': ವಿಮಾ ಪರಿಹಾರ ಎತ್ತಿಹಿಡಿದ ಹೈಕೋರ್ಟ್ಸವರ್ಣೀಯ ಮುಖಂಡರಿಂದ ದಲಿತ ಅಧಿಕಾರಿಗಳಿಗೆ ಕಿರುಕುಳ-ಮಾರಸಂದ್ರ ಮುನಿಯಪ್ಪಅಂಗನವಾಡಿ ಕೇಂದ್ರದ ಮಕ್ಕಳಿಗೆ ಸಮವಸ್ತ್ರ ವಿತರಣೆಮೈಸೂರಲ್ಲಿ  'ಜೋಡೆತ್ತು' ಚಿತ್ರದ ಅದ್ದೂರಿ ಕ್ಲೈಮ್ಯಾಕ್ಸ್