LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪರಿಷತ್‌ಕ್ರಾಸ್ ವೋಟಿಂಗ್‌ಬೆನ್ನಲ್ಲೇ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ: ರೇಣುಕಾಚಾರ್ಯ ಆಕ್ರೋಶ!

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ವಿಧಾನಪರಿಷತ್ ಚುನಾವಣೆಯಲ್ಲಿ ನಡೆದ ಶಾಸಕರ ಅಡ್ಡಮತದಾನದ ಎಫೆಕ್ಟ್‌, ರಾಜ್ಯ ಬಿಜೆಪಿಯಲ್ಲಿ ತಲ್ಲಣ ಸೃಷ್ಟಿಸಿದೆ.

ಈ ಬೆಳವಣಿಗೆಯನ್ನು ಹೈಕಮಾಂಡ್ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರನ್ನು ದೆಹಲಿಗೆ ಕರೆಯಿಸಿಕೊಂಡು ಈಗಾಗಲೇ ಸಂಪೂರ್ಣ ಮಾಹಿತಿ ಪಡೆದಿದೆ.

ಆದರೆ, ಇತ್ತ ರಾಜ್ಯ ಬಿಜೆಪಿಯ ಒಳಗಡೆ ಮತ್ತೊಂದು ಹಂತದ ರಾಜಕೀಯ ಜಟಾಪಟಿ ಆರಂಭವಾಗಿದ್ದು, ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲೆಂದೇ ಆಡಳಿತ ಪಕ್ಷದೊಂದಿಗೆ ಕೈಜೋಡಿಸಿ ಈ ಅಡ್ಡಮತದಾನ ಮಾಡಿಸಲಾಗಿದೆ ಎಂಬ ಗಂಭೀರ ಚರ್ಚೆಗಳು ಮುನ್ನೆಲೆಗೆ ಬಂದಿವೆ. ಈ ಕುರಿತು ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಯಡಿಯೂರಪ್ಪ ವಿರೋಧಿ ಬಣದ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

ಹಣ ಪಡೆದು ಅಡ್ಡಮತದಾನ: ರೇಣುಕಾಚಾರ್ಯ ಗಂಭೀರ ಆರೋಪ
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರೇಣುಕಾಚಾರ್ಯ, ಸ್ವಪಕ್ಷದ ನಾಯಕರ ವಿರುದ್ಧವೇ ತೀವ್ರ ಆಕ್ರೋಶ ಹೊರಹಾಕಿದರು:

"ನಮ್ಮ ಪಕ್ಷದಲ್ಲಿರುವ ಕೆಲವು 'ಮೀರ್ ಸಾದಿಕ್‌'ಗಳು ಹಣ ಪಡೆದು ಅಡ್ಡಮತದಾನ ಮಾಡಿದ್ದಾರೆ. ಬಿ.ವೈ. ವಿಜಯೇಂದ್ರ ಅವರು ರಾಜ್ಯ ಬಿಜೆಪಿ ಅಧ್ಯಕ್ಷರಾಗಿರುವುದನ್ನು ಅರಗಿಸಿಕೊಳ್ಳಲು ಹಿರಿಯ ನಾಯಕರ ಕೆಲವು ಬಣಗಳಿಗೆ ಸಾಧ್ಯವಾಗುತ್ತಿಲ್ಲ."

"ಹೇಗಾದರೂ ಮಾಡಿ ವಿಜಯೇಂದ್ರ ಅವರ ಮುಖಕ್ಕೆ ಮಸಿ ಬಳಿಯಬೇಕು ಹಾಗೂ ಅವರ ನೇತೃತ್ವಕ್ಕೆ ಹಿನ್ನಡೆ ಉಂಟುಮಾಡಬೇಕು ಎಂಬ ಒಂದೇ ಕಾರಣಕ್ಕೆ ಈ ವ್ಯವಸ್ಥಿತ ಷಡ್ಯಂತ್ರ ರೂಪಿಸಲಾಗಿದೆ" ಎಂದು ಕಿಡಿಕಾರಿದರು.

ರಾಜ್ಯಾಧ್ಯಕ್ಷ ಸ್ಥಾನದ ಮೇಲಿದೆಯೇ ಕಣ್ಣು?:
ಪರಿಷತ್ ಚುನಾವಣೆಯಲ್ಲಿ ಇಬ್ಬರು ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದರೂ, ಪಕ್ಷದ ಶಾಸಕರಿಂದಲೇ ಮತಗಳು ಕೈತಪ್ಪಿರುವುದು ನಾಯಕತ್ವದ ವೈಫಲ್ಯ ಎಂದು ಬಿಂಬಿಸಲು ಒಂದು ಬಣ ಹವಣಿಸುತ್ತಿದೆ. ಇದನ್ನು ಮುನ್ಸೂಚಿಸಿರುವ ರೇಣುಕಾಚಾರ್ಯ, ವಿಜಯೇಂದ್ರ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವ ಉದ್ದೇಶದಿಂದಲೇ ಒಳಗೊಳಗೆ ಈ ರಾಜಕೀಯ ತಂತ್ರ ಹೆಣೆಯಲಾಗಿದೆ ಎಂದು ಪರೋಕ್ಷವಾಗಿ ಸ್ವಪಕ್ಷದ ಅತೃಪ್ತರ ವಿರುದ್ಧವೇ ವಾಗ್ದಾಳಿ ನಡೆಸಿದ್ದಾರೆ.

ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಭೇಟಿ ಮುಗಿದ ಬೆನ್ನಲ್ಲೇ ರಾಜ್ಯದಲ್ಲಿ ರೇಣುಕಾಚಾರ್ಯ ಅವರ ಈ ಹೇಳಿಕೆ ಹೊರಬಿದ್ದಿರುವುದು, ಮುಂದಿನ ದಿನಗಳಲ್ಲಿ ರಾಜ್ಯ ಬಿಜೆಪಿಯಲ್ಲಿ ಆಂತರಿಕ ಭಿನ್ನಮತ ಮತ್ತಷ್ಟು ತಾರಕಕ್ಕೇರುವ ಮುನ್ಸೂಚನೆ ನೀಡಿದೆ.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾಣಿ ವಿಲಾಸ ಸಾಗರ ಹಾಗೂ ಗಾಯತ್ರಿ ಜಲಾಶಯಗಳಿಗೆ ಪ್ರವಾಸಿಗರ ಪ್ರವೇಶ ತಾತ್ಕಾಲಿಕ ನಿರ್ಬಂಧಆಗಸ್ಟ್ 12ಕ್ಕೆ 'ಶತಮಾನದ ಖಗ್ರಾಸ ಸೂರ್ಯಗ್ರಹಣ': ಭಾರತದಲ್ಲಿ ಗೋಚರವಿಲ್ಲ, ಯಾವುದೇ ಆಚರಣೆ ಅಗತ್ಯವಿಲ್ಲರಾಣಿ ಎಲಿಜಬೆತ್ ಹೊಗಳಿದ್ದ ನಮ್ಮ ವಿಧಾನಸೌಧವೇ ನನಗೆ ಸ್ಫೂರ್ತಿ-ಟಿ.ಬಿ ಜಯಚಂದ್ರಕೆಪಿಸಿಸಿ ಅಧ್ಯಕ್ಷರ ಆಶೀರ್ವಾದ ಸಿಕ್ಕಿದೆ- ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಣ್ಣಚಿತ್ತಯ್ಯ ಯುವ ಜನತೆಗೆ ಯೋಗ, ವ್ಯಾಯಾಮ ಅತ್ಯಂತ ಅವಶ್ಯ:ದಿವ್ಯ ಜ್ಞಾನಾನಂದ ಶ್ರೀಎಸ್. ನಾಗೇನಹಳ್ಳಿ ಎಂಪಿಸಿಎಸ್ ನೂತನ ಅಧ್ಯಕ್ಷರಾಗಿ ಮುನಿಕೃಷ್ಣಪ್ಪ ಆಯ್ಕೆಅಪಘಾತದಲ್ಲಿ ಮೃತಪಟ್ಟ ಕೋಳಿಗಳು 'ಜೀವಸಂಪತ್ತು': ವಿಮಾ ಪರಿಹಾರ ಎತ್ತಿಹಿಡಿದ ಹೈಕೋರ್ಟ್ಸವರ್ಣೀಯ ಮುಖಂಡರಿಂದ ದಲಿತ ಅಧಿಕಾರಿಗಳಿಗೆ ಕಿರುಕುಳ-ಮಾರಸಂದ್ರ ಮುನಿಯಪ್ಪಅಂಗನವಾಡಿ ಕೇಂದ್ರದ ಮಕ್ಕಳಿಗೆ ಸಮವಸ್ತ್ರ ವಿತರಣೆಮೈಸೂರಲ್ಲಿ  'ಜೋಡೆತ್ತು' ಚಿತ್ರದ ಅದ್ದೂರಿ ಕ್ಲೈಮ್ಯಾಕ್ಸ್