ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಜಾಲಪ್ಪ ಅವರ 101ನೇ ಜನ್ಮದಿನದ ಅಂಗವಾಗಿ ಇಲ್ಲಿನ ಲಯನ್ಸ್ಕ್ಲಬ್ಆಫ್ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಇನ್ಸ್ಟಿಟ್ಯೂಷನ್ಸ್ಹಾಗೂ ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳ ನೇತೃತ್ವದಲ್ಲಿ ರೋಗಿಗಳಿಗೆ ಮತ್ತು ವೃದ್ದರಿಗೆ ಹಣ್ಣು ಹಂಪಲು ವಿತರಣೆ ಕಾರ್ಯಕ್ರಮ ನಡೆಯಿತು.
ಇಲ್ಲಿನ ಸರ್ಕಾರಿ ತಾಯಿ ಮಗು ಆಸ್ಪತ್ರೆ, ತಾಲೂಕು ಆಸ್ಪತ್ರೆ, ನಿರಾಶ್ರಿತರ ಪುನರ್ವಸತಿ ಕೇಂದ್ರ, ತೂಬಗೆರೆಯ ವೃದ್ದಾಶ್ರಮದಲ್ಲಿರುವ ಫಲಾನುಭವಿಗಳಿಗೆ ಹಣ್ಣು-ಹಂಪಲು, ಬ್ರೆಡ್ಹಾಲು ವಿತರಣೆ ಮಾಡಲಾಯಿತು. ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು.
ಲಯನ್ಸ್ಪ್ರಾಂತೀಯ ಅಧ್ಯಕ್ಷ ಜೆ.ಆರ್.ರಾಕೇಶ್, ವಲಯ ಅಧ್ಯಕ್ಷ ಡಾ.ಶ್ರೀನಿವಾಸರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಜಿಲ್ಲಾಧ್ಯಕ್ಷ ಪ್ರೊ.ಕೆ.ಆರ್.ರವಿಕಿರಣ್, ಕ್ಲಬ್ಅಧ್ಯಕ್ಷ ಕೆ.ಸಿ.ನಾಗರಾಜ್, ಖಜಾಂಚಿ ಹರ್ಷ,ಕೊನಘಟ್ಟ ಲೆಜೆಂಡ್ಸ್ನ ಅಧ್ಯಕ್ಷ ಜಿ.ಲಕ್ಷ್ಮೀಪತಿ, ಮುಖಂಡರಾದ ಮುನಿರಾಮೇಗೌಡ, ಗೋಪಾಲ್ನಾಯಕ್, ರೋಜಿಪುರ ಪ್ರಕಾಶ್, ರುದ್ರಪ್ಪ, ಜೆ.ವೈ.ಮಲ್ಲಪ್ಪ, ಅರಸೇಗೌಡ ಮತ್ತಿತರರು ಉಪಸ್ಥಿತರಿದ್ದರು.




