Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಗಂಗಾ ಕಲ್ಯಾಣ ಯೋಜನೆಯಡಿ ಫಲಾನುಭವಿಗಳಿಗೆ ಪಂಪ್‍ಸೆಟ್ ವಿತರಣೆ

ಚಂದ್ರವಳ್ಳಿ ನ್ಯೂಸ್, ​ಚಿತ್ರದುರ್ಗ:
ಪರಿಶಿಷ್ಟ ಪಂಗಡದ ರೈತರ ಕೃಷಿ ಅಭಿವೃದ್ಧಿ ಹಾಗೂ ಆರ್ಥಿಕ ಸ್ವಾವಲಂಬನೆಗೆ ಗಂಗಾ ಕಲ್ಯಾಣ ಯೋಜನೆ ಮಹತ್ವದ ಕೊಡುಗೆ ನೀಡಲಿದೆ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ಅವರು ತಿಳಿಸಿದರು.

ಹಿರಿಯೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಗಂಗಾ ಕಲ್ಯಾಣ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಪಂಪ್‍ಸೆಟ್ ಹಾಗೂ ಇತರೆ ಪೂರಕ ಸಾಮಗ್ರಿಗಳ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಚಿವರು, ಫಲಾನುಭವಿಗಳಿಗೆ ಪಂಪ್‍ಸೆಟ್ ಹಾಗೂ ಅಗತ್ಯ ಸಾಮಗ್ರಿಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗಂಗಾ ಕಲ್ಯಾಣ ಯೋಜನೆಯು ಪರಿಶಿಷ್ಟ ಪಂಗಡದ ರೈತರ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಮಹತ್ವದ ಯೋಜನೆಯಾಗಿದೆ. ಪಂಪ್‍ಸೆಟ್ ಹಾಗೂ ಪೂರಕ ಸಾಮಗ್ರಿಗಳ ವಿತರಣೆಯಿಂದ ರೈತರು ತಮ್ಮ ಜಮೀನುಗಳಲ್ಲಿ ಕೃಷಿ ಚಟುವಟಿಕೆಗಳನ್ನು ಸುಗಮವಾಗಿ ಕೈಗೊಳ್ಳಲು ಅನುಕೂಲವಾಗಲಿದೆ. ಇದರಿಂದ ಕೃಷಿ ಉತ್ಪಾದನೆ ಹೆಚ್ಚುವುದರ ಜೊತೆಗೆ ರೈತ ಕುಟುಂಬಗಳ ಆರ್ಥಿಕ ಸ್ಥಿತಿಯೂ ಸುಧಾರಿಸಲಿದೆ ಎಂದು ವಿವರಿಸಿದರು.

ಸರ್ಕಾರದ ಜನಪರ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕು ಹಾಗೂ ಪರಿಶಿಷ್ಟ ಪಂಗಡದ ಜನರು ಆರ್ಥಿಕವಾಗಿ ಸಬಲರಾಗಬೇಕು ಎಂಬುದು ನಮ್ಮ ಆಶಯವಾಗಿದೆ. ಈ ನಿಟ್ಟಿನಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ: ಕರ್ನಾಟಕಕ್ಕೆ ಬಿಳಿಗುಂಡ್ಲುವಿನಲ್ಲಿ ಪ್ರತಿದಿನ 3,000 ಕ್ಯೂಸೆಕ್ ನೀರು ಹರಿಸಲು ಸೂಚನೆ100 ಹಿರಿಯ ನಾಗರಿಕರಿಗೆ ಉಚಿತ ಹಾಗೂ ವಿಶೇಷ ವಸತಿ ಆರೈಕೆಬುಡ ಸಮೇತ ಧರಾಶಾಯಿಯಾದ ಬೃಹತ್ ಮರ"ಕುರುಬರು ಕೆಟ್ಟು ಕುಂಚಿಟಿಗರಾದರು", "ಹಂಚಿಕಡ್ಡಿಗಾಗಿ ಕಂಚಿಪಟ್ಟಣ ಕೆಡಿಸಿ ಬಂದವರು ಕುಂಚಿಟಿಗರು"ಕುಂಚಿಟಿಗ ಸಮುದಾಯದ 'ಜಾನಕಲ್ಲೋರು' ಮತ್ತು 'ಜಲಧೇನೋರು' ಎಂಬ ಗೋತ್ರಗಳ ನಡುವೆ ನಡೆದ ಸಂಘರ್ಷದ ಕಥನಸಂಪುಟ ವಿಸ್ತರಣೆ ಮತ್ತು ಸ್ಟಿಂಗ್ ಚರ್ಚೆ: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ದೆಹಲಿ ಪ್ರವಾಸ  ಬೆಂಗಳೂರು ವಿಮಾನ ನಿಲ್ದಾಣ ಸಂಸ್ಥೆಗಳಿಂದ ಸ್ಥಳೀಯರಿಗೆ ಉದ್ಯೋಗ ಭರವಸೆ: ಕರವೇ ‘ಆಗ್ರಹ ಅಭಿಯಾನ’ದ ಸಭೆ ಯಶಸ್ವಿಪತ್ನಿ ಸೇರಿ ಒಂದೇ ಕುಟುಂಬದ 7 ಜನರ ಬರ್ಬರ ಹತ್ಯೆ; ಆರೋಪಿ ಕ್ಯಾಬ್ ಚಾಲಕ ಪೊಲೀಸ್ ವಶಕ್ಕೆಕಾಲ ಕೂಡಿ ಬಂದಾಗ ಎಲ್ಲವೂ ಸರಿಹೋಗಲಿದೆ: ಸಚಿವ ಸತೀಶ್ ಜಾರಕಿಹೊಳಿಹೊಸೂರಿನಲ್ಲಿ ಘೋರ ದುರಂತ: ಕಾರ್ಖಾನೆ ಕಟ್ಟಡದ ಸೆಂಟ್ರಿಂಗ್ ಕುಸಿದು ಮೂವರು ಕಾರ್ಮಿಕರ ಸಾವು