Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಾಸನದಲ್ಲಿ ಜಿಲ್ಲಾಡಳಿತ ಮತ್ತು ಪತ್ರಕರ್ತರ ಸೌಹಾರ್ದಯುತ ಕ್ರಿಕೆಟ್ ಪಂದ್ಯಾವಳಿ

Advertisement

ಚಂದ್ರವಳ್ಳಿ ನ್ಯೂಸ್, ಹಾಸನ:
ಹಾಸನ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ಜಿಲ್ಲಾಡಳಿತದ
15 ಇಲಾಖೆಗಳ ತಂಡಗಳು ಹಾಸನದಲ್ಲಿ ಏರ್ಪಡಿಸಿದ್ದ ಸೌಹಾರ್ದಯುತ ಕ್ರಿಕೆಟ್ ಪಂದ್ಯಾವಳಿಗಳಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಬ್ಯಾಟಿಂಗ್ ಮಾಡುವ ಮೂಲಕ ಚಾಲನೆ ನೀಡಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಎಚ್.ಬಿ.ಮದನಗೌಡ, ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಜೆ.ಆರ್.ಕೆಂಚೇಗೌಡ, ಉಪಾಧ್ಯಕ್ಷರಾದ ಎನ್.ನಂಜುಂಡೇಗೌಡ, ಜಿ.ಪ್ರಕಾಶ್, ಪ್ರಧಾನ ಕಾರ್ಯದರ್ಶಿ ಕೆ.ಜಿ.ಸುರೇಶ್, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಕೆ.ಪಿ.ಎಸ್.ಪ್ರಮೋದ್, ಪದಾಧಿಕಾರಿಗಳಾದ ಹರೀಶ್, ಪ್ರಕಾಶ್ ಬೆಣಲವಾಡಿ, ಖುಷವಂತ್, ಮಾಜಿ ಅಧ್ಯಕ್ಷ ಬಾಳ್ಳು ಗೋಪಾಲ್, ಉದಯಕುಮಾರ್ ಮತ್ತಿತರರು ಹಾಜರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಕೆಯುಡಬ್ಲೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಮಾನಸಿಕ ಒತ್ತಡ ನಿವಾರಿಸಿಕೊಳ್ಳಲು ಕ್ರೀಡೆ ಸರಿಯಾದ ಮಾರ್ಗ. ಈ ನಿಟ್ಟಿನಲ್ಲಿ ಪತ್ರಕರ್ತರೂ ಕೂಡ ಒತ್ತಡ ನಡುವೆ ಬಿಡುವಾಗಿ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು.

ಹಾಸನ ಜಿಲ್ಲಾ ಪತ್ರಕರ್ತರ ಸಂಘದ ಜೊತೆಗೆ ಸರ್ಕಾರಿ ವಿವಿಧ ಇಲಾಖೆಯ 15 ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಿರುವುದು ಇದೇ ಮೊದಲು ಎನ್ನುವುದು ವಿಶೇಷ. ಅದಕ್ಕಾಗಿ ಅಭಿನಂದಿಸುವುದಾಗಿ ತಗಡೂರು ಹೇಳಿದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST