Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಕ್ರಮವಹಿಸಿ: ಜಿಲ್ಲಾಧಿಕಾರಿ ಎ.ಬಿ.ಬಸವರಾಜು

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು ಗ್ರಾಮಾಂತರ :
ಜಿಲ್ಲೆಯಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸಿ ಅಪೌಷ್ಟಿಕತೆ ನಿವಾರಣೆಗೆ ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರು ತಿಳಿಸಿದರು.
 

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಆಯೋಜಿಸಿದ್ದ ವಿವಿಧ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಜಿಲ್ಲೆಯಲ್ಲಿ 269 ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ, ಆ ಮಕ್ಕಳಿಗೆ ಸೂಕ್ತ ಆಹಾರ, ಆರೋಗ್ಯ ಸೇವೆ ನೀಡಬೇಕು. ಅಂಗನವಾಡಿಗಳಲ್ಲಿ ಮಕ್ಕಳಿಗೆ ಪೌಷ್ಠಿಕ ಆಹಾರಗಳನ್ನು ಸಮಯಕ್ಕೆ ಸರಿಯಾಗಿ ವಿತರಿಸಬೇಕು. ಯಾವುದೇ ಕಾರಣಕ್ಕೂ ವ್ಯರ್ಥ ಮಾಡದಂತೆ ನೋಡಿಕೊಳ್ಳಬೇಕು ಎಂದು ಸಿಡಿಪಿಒಗಳಿಗೆ ಸೂಚಿಸಿದರು. 

ಮಕ್ಕಳ ಹಾಗೂ ಗರ್ಭಿಣಿ ಬಾಣಂತಿಯರ ಆರೋಗ್ಯ ರಕ್ಷಣೆಗೆ ಮೊದಲ ಆದ್ಯತೆ ನೀಡಿಅಂಗನವಾಡಿ, ಆಶಾ ಕಾರ್ಯಕರ್ತೆಯರು ಗರ್ಭಿಣಿ, ಬಾಣಂತಿಯರ ಮನೆ ಮನೆಗೆ ಭೇಟಿ ನೀಡಿ ಲಸಿಕೆ ಬಗ್ಗೆ ಅರಿವು ಮೂಡಿಸಿ, ಜೊತೆಗೆ ಅಂಗನವಾಡಿ ಇಂದ ಸಿಗುವ ಆಹಾರ ಸಾಮಗ್ರಿ ತಪ್ಪದೇ ತಲುಪಿಸಿ. ಶಿಶು ಹಾರೈಕೆ ಮತ್ತು ಗರ್ಭಿಣಿ, ಬಾಣಂತಿಯರ ಹಾರೈಕೆಯಲ್ಲಿ ನಿರತರಾಗಿ ಎಂದರು. 

ಜಿಲ್ಲೆಯಲ್ಲಿ ಒಟ್ಟು  1277 ಅಂಗನವಾಡಿ ಕೇಂದ್ರಗಳಿದ್ದು, 999 ಸ್ವಂತ ಅಂಗನವಾಡಿ ಕಟ್ಟಡಗಳು, 3 ಪಂಚಾಯಿತಿ ಕಟ್ಟಡಗಳುಸಮುದಾಯ ಭವನದಲ್ಲಿನ 53 ಅಂಗನವಾಡಿಗಳು, 83 ಅಂಗನವಾಡಿಗಳು ಶಾಲೆಗಳಲ್ಲಿ ಹಾಗೂ 139 ಅಂಗನವಾಡಿಗಳು ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಬಾಕಿ ಉಳಿದಿರುವ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಕೂಡಲೇ ಸ್ಥಳ ಗುರುತಿಸುವಂತೆ   ಅಧಿಕಾರಿಗಳಿಗೆ ತಿಳಿಸಿದರು. 

ಕೌಟುಂಬಿಕ ಹಿಂಸೆಗೊಳಗಾದ ಮಹಿಳೆಯರಿಗೆ ಸಕಾಲದಲ್ಲಿ ಆಪ್ತ ಸಮಾಲೋಚನೆ ನಡೆಸಿ ಆತ್ಮಸ್ಥೈರ್ಯ ತುಂಬಬೇಕು. ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಅಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ದೌರ್ಜನ್ಯಗೊಳಗಾದ ಮಹಿಳೆಯರಿಗೆ, ಮಕ್ಕಳಿಗೆ ಸೂಕ್ತ ಮಾರ್ಗದರ್ಶನ ನೀಡಿ ನ್ಯಾಯ ಒದಗಿಸಬೇಕು. 

ಕೌಟುಂಬಿಕ ದೌರ್ಜನ್ಯ ಕಾಯ್ದೆಯಡಿ  2025-26 ಸಾಲಿನ ಜುಲೈ 2025ರ ಮಾಹೆಯಿಂದ ನವೆಂಬರ್ 2025 ರವೆಗೆ ದಾಖಲಾದ 32 ಪ್ರಕರಣಗಳಲ್ಲಿ 8 ಪ್ರಕರಣಗಳು ಇತ್ಯರ್ಥಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು. 

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀ ಶೈಲ್ ಭೀಮಸೇನ ಭಾಗಡಿ ಅವರು ಮಾತನಾಡಿ, ಸಾಂತ್ವನ ಕೇಂದ್ರಗಳಲ್ಲಿ ಬಗೆಹರಿಸಲಾಗದ ಪ್ರಕರಣಗಳನ್ನು  ಸಿಡಿಪಿಒಗಳು ಆದಷ್ಟು ಬೇಗ ಬಗೆಹರಿಸಲು ಪ್ರಯತ್ನ ಮಾಡಬೇಕು, ಇಲ್ಲವಾದಲ್ಲಿ, ಅಂತಹ ಪ್ರಕರಣಗಳನ್ನು ಬಗೆಹರಿಸಲು 15100 ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿ ಎಂದರು. 

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್.ಅನುರಾಧ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಲಕ್ಕ ಕೃಷ್ಣ ರೆಡ್ಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಮುದ್ದಣ್ಣ ಎಂ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ