Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದಾವಣಗೆರೆ, ಬಾಗಲಕೋಟೆ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಜಿಲ್ಲಾ ಕಾಂಗ್ರೆಸ್‌ನಿಂದ ವಿಜಯೋತ್ಸವ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಶಾಲಿಯಾಗಿರುವುದಕ್ಕೆ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗ ಸೋಮವಾರ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಲಾಯಿತು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‌ಪೀರ್ ಮಾತನಾಡಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪಂಚ ಗ್ಯಾರೆಂಟಿ ಯೋಜನೆಗಳು, ಕಾರ್ಯಕರ್ತರ ನಿಷ್ಟೆ ಹಾಗೂ ಮತದಾರರು ಕಾಂಗ್ರೆಸ್ ಪಕ್ಷದ ಮೇಲೆ ನಂಬಿಕೆ ವಿಶ್ವಾಸವಿಟ್ಟು ಮತ ಚಲಾಯಿಸಿದ್ದರ ಪರಿಣಾಮ ಎರಡು ಕಡೆ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲು ಕಾರಣವಾಯಿತು ಎಂದು ಹರ್ಷ ವ್ಯಕ್ತಪಡಿಸಿದರು.

ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುನಿರಾ ಎ.ಮಕಾಂದಾರ್ ಮಾತನಾಡಿ ಚುನಾವಣೆ ಸಂದರ್ಭದಲ್ಲಿ ಪಕ್ಷದ ನಾಯಕರುಗಳೊಂದಿಗೆ ದಾವಣಗೆರೆಯಲ್ಲಿ ಮನೆ ಮನೆಗೆ ತೆರಳಿ ಕಾಂಗ್ರೆಸ್ ಅಭ್ಯರ್ಥಿ ಪರ ಮತ ಯಾಚಿಸಿದ್ದೇವೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಮತದಾರರು

ಡಾ.ಶಾಮನೂರು ಶಿವಶಂಕರಪ್ಪನವರ ಕುಟುಂಬದ ಮೇಲೆ ಅಪಾರ ಅಭಿಮಾನಿವಿಟ್ಟು ಅವರ ಮೊಮ್ಮಗನನ್ನು ಗೆಲ್ಲಿಸಿದ್ದಾರೆ. ಅದೇ ರೀತಿ ಬಾಗಲಕೋಟೆಯಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಪಕ್ಷಕ್ಕೆ ಶಕ್ತಿ ತುಂಬಿದಂತಾಗಿದೆ ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಗ್ಯಾರೆಂಟಿ ಅನುಷ್ಠಾನಗಳ ಸಮಿತಿ ಅಧ್ಯಕ್ಷ ಆರ್.ಶಿವಣ್ಣ, ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ಪ್ರಧಾನ ಕಾರ್ಯದರ್ಶಿ ಕೆ.ಪಿ.ಸಂಪತ್‌ಕುಮಾರ್, ಕರ್ನಾಟಕ ರಾಜ್ಯ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ರಾಜ್ಯಾಧ್ಯಕ್ಷ ಟಿಪ್ಪುಖಾಸಿಂ ಆಲಿ, ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎನ್.ಡಿ.ಕುಮಾರ್, ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಸೈಯದ್ ಮೊಹಿದ್ದೀನ್(ಚೋಟು) ಪದವೀಧರ ವಿಭಾಗದ ಅಧ್ಯಕ್ಷ ಮುದಸಿರ್ ನವಾಜ್, ಇಂಟೆಕ್ ವಿಭಾಗದ ಮಾಜಿ ಅಧ್ಯಕ್ಷ ಸೈಯದ್ ಸೈಫುಲ್ಲಾ, ಕರುನಾಡ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಸೈಯದ್ ಇಸ್ಮಾಯಿಲ್, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರೇಣುಕಾಶಿವು ಇನ್ನು ಅನೇಕರು ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಸಿಎಂ ಪರಮೇಶ್ವರ್ ಭೇಟಿಯಾಗಿ ಆರೋಗ್ಯ ವಿಚಾರಿಸಿದ ಸಿಎಂ ಡಿ.ಕೆ. ಶಿವಕುಮಾರ್ವಿಧಾನಸೌಧದಲ್ಲಿ ಮತ ಚಲಾಯಿಸಿದ ಆರ್. ಅಶೋಕ್"16 ಲಕ್ಷಕ್ಕೂ ಅಧಿಕ ಬಡವರ ಸಾಮಾಜಿಕ ಭದ್ರತಾ ಪಿಂಚಣಿಗೆ ಕತ್ತರಿ""ಸತ್ತವರ ಹೆಸರಲ್ಲೂ ಗೃಹಲಕ್ಷ್ಮಿ ಲೂಟಿ: ಸಿಬಿಐ ತನಿಖೆಗೆ ಆರ್. ಅಶೋಕ್ ಆಗ್ರಹ"ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಇವಿ (ಎಲೆಕ್ಟ್ರಿಕ್ ವಾಹನ) ಪರಿಸರ ವ್ಯವಸ್ಥೆ ಕುರಿತು ಮಹತ್ವದ ಸಭೆ: ಮಂಡ್ಯದಲ್ಲಿ ಹೂಡಿಕೆಗೆ ಆಹ್ವಾನಬೆಂಗಳೂರು–ವಿಜಯಪುರ ನೇರ ವಿಶೇಷ ರೈಲು ಸೇವೆ ಆಗಸ್ಟ್ 31ರವರೆಗೆ ವಿಸ್ತರಣೆ: ಸಚಿವ ಎಂ.ಬಿ. ಪಾಟೀಲ್ ​ವಿಧಾನ ಪರಿಷತ್ ಚುನಾವಣೆಯಲ್ಲಿ ತಮ್ಮ ಮತ ಚಲಾಯಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಸಿಎಂ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಜಂಟಿ ಕಾರ್ಯತಂತ್ರಅಮೂಲ್ಯ ಮತ ಚಲಾಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ; ಐದೂ ಅಭ್ಯರ್ಥಿಗಳ ಗೆಲುವಿನ ವಿಶ್ವಾಸ​ಕುಮಾರಸ್ವಾಮಿ ಆಸ್ತಿ ವಿವರ ಬಹಿರಂಗ: ಸಚಿವ ಚಲುವರಾಯಸ್ವಾಮಿಗೆ ಜೆಡಿಎಸ್ ತೀಕ್ಷ್ಣ ತಿರುಗೇಟು