Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಿಲ್ಲಾ ಆಸ್ಪತ್ರೆ ಮಾನ್ಯತೆ, ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್ ಭರವಸೆ

Advertisement
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಚಿತ್ರದುರ್ಗ ಜಿಲ್ಲೆಯಲ್ಲಿ ತಾಲ್ಲೂಕು ಮಟ್ಟದ ಸಾರ್ವಜನಿಕ ಆಸ್ಪತ್ರೆಯಲ್ಲಿ ಅತಿಹೆಚ್ಚು ರೋಗಿಗಳಿಗೆ ಚಿಕಿತ್ಸೆ ನೀಡುವ ಜಿಲ್ಲೆಯ ಏಕೈಕ ಸಾರ್ವಜನಿಕ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆ ಪಾತ್ರವಾಗಿದೆ. ಆಸ್ಪತ್ರೆಗೆ ಜಿಲ್ಲಾಮಾನ್ಯತೆ ನೀಡುವಂತೆ ಈಗಾಗಲೇ ಶಾಸಕರು ಒತ್ತಾಯಿಸಿದ್ಧಾರೆ. ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಮುಂದಿನ ಸಚಿವ ಸಂಪುಟದಲ್ಲಿ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ಗುಂಡೂರಾವ್ ಭರವಸೆ ನೀಡಿದರು.


ಅವರು ನಗರದ ಶಾಸಕರ ಭವನದಲ್ಲಿ ಸಮಾಜಕಲ್ಯಾಣ ಇಲಾಖೆವತಿಯಿಂದ ಅಲೆಮಾರಿ ಜನಾಂಗಕ್ಕೆ ತಾಡಪಾಲ್ ವಿತರಣೆ, ಕಾರ್ಮಿಕ ಇಲಾಖೆಯಿಂದ ಕಾರ್ಮಿಕರ ಸುರಕ್ಷತಾಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. 

ರಾಜ್ಯಮಟ್ಟದಲ್ಲಿ ಅತ್ಯುತ್ತಮ ಕೆಲಸ ನಿರ್ವಹಿಸಿದ ಶಾಸಕರು ಹಲವಾರು ಜನರ ಇದ್ದರೆ ಅದರಲ್ಲಿ ಹೆಚ್ಚಿ ಸ್ಥಾನಮಾನ ಶಾಸಕ ಟಿ.ರಘುಮೂರ್ತಿಗೆ ದೊರೆಯುತ್ತದೆ. ಮೂರುಬಾರಿ ಈ ಕ್ಷೇತ್ರವನ್ನು ಅವರು ಪ್ರತಿನಿಧಿಸುವ ಮೂಲಕ ಕಾಂಗ್ರೆಸ್‌ಪಕ್ಷ ಭದ್ರಕೋಟೆಯನ್ನಾಗಿ ಮಾರ್ಪಾಡು ಮಾಡಿದ್ಧಾರೆ. ಈ ಕ್ಷೇತ್ರದ ಜನರು ಸಹ ಅವರನ್ನು ಸಚಿವರನ್ನಾಗಿ ಕಾಣಬೇಕೆಂಬ ಹಂಬಲ ಇರುವ ಬಗ್ಗೆ ನನಗೆ ಮಾಹಿತಿ ಇದೆ. ನಾನು ಸಹ ನಿಮ್ಮಂತೆಯೇ ಅವರಿಗೆ ಉನ್ನತ್ತ ಸ್ಥಾನ ಸಿಗಲಿ ಎಂದು ಶುಭಹಾರೈಸುತ್ತೇನೆಂದರು.

ಶಾಸಕ, ಸಣ್ಣಕೈಗಾರಿಕೆ ಅಭಿವೃದ್ದಿಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ, ಈ ಬಾರಿ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾ ಆಸ್ಪತ್ರೆ ಮಾನ್ಯತೆ ನೀಡುವಂತೆ ಮನವಿ ಮಾಡಿದ್ದು ಅದಕ್ಕೂ ಸಹ ಒಪ್ಪಿಗೆ ನೀಡಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಮಾನ್ಯತೆ ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳುವ ಭರವಸೆ ನೀಡಿದ್ಧಾರೆ. ಪ್ರಸ್ತುತ ಆಸ್ಪತ್ರೆಯಲ್ಲಿ ವೈದ್ಯರ ಹುದ್ದೆ ಖಾಲಿ ಇದ್ದು ಭರ್ತಿಮಾಡುವಂತೆ ಶಾಸಕರು ಮನವಿ ಮಾಡಿದರು. ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳುವ ಭರವಸೆಯನ್ನು ಸಚಿವರು ನೀಡಿದರು.


ಇದೇ ಸಂದರ್ಭದಲ್ಲಿ ಚಳ್ಳಕೆರೆ ನಗರದ ಶಾಸಕರ ಭವನಕ್ಕೆ ಆಗಮಿಸಿದ್ದ ರಾಜ್ಯ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ರವರನ್ನು ಶಾಸಕ, ಸಣ್ಣಕೈಗಾರಿಕೆ ಅಭಿವೃದ್ದಿಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ಸನ್ಮಾನಿಸಿದರು.



ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ, ನಗರಾಭಿವೃದ್ದಿ ಮಂಡಳಿ ಅಧ್ಯಕ್ಷ ತಾಜ್‌ಪೀರ್, ದ್ರಾಕ್ಷಿ ಮತ್ತು ವೈನ್‌ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್‌ಬಾಬು, ಜಿಲ್ಲಾಗ್ಯಾರಂಟಿ ಸಮಿತಿ ಅಧ್ಯಕ್ಷ ಶಿವಣ್ಣ, ಪ್ರಧಾನಕಾರ್ಯದರ್ಶಿ ಸಂಪತ್‌ಕುಮಾರ್, ತಾಲ್ಲೂಕು ಪ್ರಚಾರಸಮಿತಿ ಅಧ್ಯಕ್ಷ ಟಿ.ಪ್ರಭುದೇವ್, ನಗರಸಭೆ ಅಧ್ಯಕ್ಷೆ ಬಿ.ಶಿಲ್ಪಮುರುಳಿ, ಉಪಾಧ್ಯಕ್ಷೆ ಕವಿತಾವೀರೇಶ್, ಸದಸ್ಯರಾದ ಬಿ.ಟಿ.ರಮೇಶ್‌ಗೌಡ, ಚಳ್ಳಕೆರೆಯಪ್ಪ, ಟಿ.ಮಲ್ಲಿಕಾರ್ಜುನ್, ಕೆ.ವೀರಭದ್ರಪ್ಪ, ಕವಿತಾಬೋರಯ್ಯ,

ಎಂ.ಜೆ.ರಾಘವೇಂದ್ರ, ಮಹಿಳಾಘಟಕದ ಅಧ್ಯಕ್ಷೆ ಗೀತಾಬಾಯಿ, ಉಪವಿಭಾಗಾಧಿಕಾರಿ ಮೆಹಬೂಬ್‌ಜಿಲಾನಿ, ತಹಶೀಲ್ಧಾರ್‌ರೇಹಾನ್‌ಪಾಷ, ಇಒ ಎಚ್.ಶಶಿಧರ, ಪೌರಾಯುಕ್ತ ಜಗರೆಡ್ಡಿ, ಸಮಾಜಕಲ್ಯಾಣಾಧಿಕಾರಿ ದೇವ್ಲಾನಾಯ್ಕ, ಕಾರ್ಮಿಕ ಅಧಿಕಾರಿ ಕುಸುಮಾ ಮುಂತಾದವರು ಉಪಸ್ಥಿತರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ