Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Sports News

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ಜಯದೇವ ಕಪ್ ಕ್ರೀಡಾಕೂಟ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಮುರುಘರಾಜೇಂದ್ರ ಶ್ರೀಮಠದ ವತಿಯಿಂದ ಪ್ರತಿ ವರ್ಷ ದಸರಾ ಹಬ್ಬದ ಪ್ರಯುಕ್ತ ಶರಣ ಸಂಸ್ಕೃತಿ ಉತ್ಸವ ಆಚರಿಸಲಾಗುತ್ತಿದ್ದು
,

ಈ ವರ್ಷ ಶ್ರೀ ಜಯದೇವ ಮುರುಘರಾಜೇಂದ್ರ ಮಹಾ ಸ್ವಾಮೀಜಿಗಳ 150ನೇ ಜಯಂತಿ ಅಂಗವಾಗಿ ಜಯದೇವ ಕಪ್-2024 ಕ್ರೀಡಾ ಜಾತ್ರೆಯನ್ನು ಸಂಘಟಿಸಲಾಗುತ್ತಿದ್ದು, ಈ ಪ್ರಯುಕ್ತ ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಅ.4 ರಿಂದ 7 ರವರೆಗೆ ಜಿಲ್ಲಾ ಮಟ್ಟದ ಕ್ರೀಡಾ ವಿಭಾಗದಲ್ಲಿ ಸ್ಥಳೀಯ ಪ್ರತಿಭೆಗಳಿಗೆ ಸಹಕಾರಿಯಾಗುವಂತೆ ಪ್ರೌಢಶಾಲಾ ಬಾಲಕ, ಬಾಲಕಿಯರಿಗಾಗಿ (17ವರ್ಷ ಒಳಗಿನವರಿಗೆ) ಕಬಡ್ಡಿ, ಖೋ ಖೋ, ವಾಲಿಬಾಲ್ ಹಾಗೂ ಹ್ಯಾಂಡ್ ಬಾಲ್, ಹೊನಲು ಬೆಳಕಿನ ಪಂದ್ಯಾವಳಿಗಳನ್ನು ಆಯೋಜಿಸಲಾಗಿದೆ.

ಈ ಪಂದ್ಯಾವಳಿಗಳಿಗೆ ಇಲಾಖೆಯಿಂದ ತಾಲ್ಲೂಕು ಮಟ್ಟದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ತಂಡಗಳಿಗೆ ಅವಕಾಶ ಕಲ್ಪಿಸಲಾಗಿದೆ. ಹಾಗೆಯೇ ಹೊರ ತಾಲ್ಲೂಕುಗಳಿಂದ ಬರುವ ಕ್ರೀಡಾ ಪಟುಗಳಿಗೆ ವಸತಿ, ಊಟ, ತಿಂಡಿ, ವ್ಯವಸ್ಥೆ ಇದ್ದು,

ಬಂದು ಹೋಗುವ ಪ್ರಯಾಣ ಭತ್ಯೆಯನ್ನು ಸಹ ನೀಡಲಾಗುವುದು. ಪಂದ್ಯಾವಳಿಯಲ್ಲಿ ಪ್ರಥಮ, ದ್ವಿತೀಯ, ತೃತೀಯ, ಚತುರ್ಥ ಸ್ಥಾನ ಪಡೆದ ತಂಡಗಳಿಗೆ ಕ್ರಮವಾಗಿ ರೂ.10,000, 8,000, 6,000, 4000 ನಗದು ಹಾಗೂ ಆಕರ್ಷಕ ಟ್ರೋಪಿ, ಮೆಡಲ್, ಟೀ ಷರ್ಟ್, ಕ್ರೀಡಾ ಪರಿಕರಗಳು ಮತ್ತು ವೈಯಕ್ತಿಕ ವಿಶೇಷ ಟ್ರೋಪಿ ಸಹ ನೀಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಶ್ಚಿಮಘಟ್ಟ ಸಂರಕ್ಷಣೆ: ಕಸ್ತೂರಿ ರಂಗನ್ ವರದಿ ಸ್ಯಾಟಲೈಟ್ ಮ್ಯಾಪಿಂಗ್ ಒಪ್ಪಲು ಸಾಧ್ಯವಿಲ್ಲ; ಬಿ.ಕೆ.ಹರಿಪ್ರಸಾದ್ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶಶಾಸಕ ಎಸ್. ಸುರೇಶ್ ಕುಮಾರ್ ಅವರು "ಸಜ್ಜನ" ಎಂಬ ಮುಖವಾಡ ಧರಿಸಿದ ದುರ್ಜನಸರ್ಕಾರದ ಅನುದಾನಕ್ಕೆ ಕಾಯದೆ ಸ್ವಂತ ಖರ್ಚಿನಲ್ಲಿ ಕಾಲುವೆ ದುರಸ್ತಿಗೆ ಮುಂದಾದ ಎಚ್.ಡಿ. ರೇವಣ್ಣಹೈಕೋರ್ಟ್‌ನಿಂದ ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಎಸ್‌ಐಟಿ ತನಿಖೆಗೆ ಆದೇಶಆಲಮಟ್ಟಿ ಜಲಾಶಯ ಎತ್ತರ ಹೆಚ್ಚಳ: ಯುಕೆಪಿ ಹಂತ-3ರ ಭೂಸ್ವಾಧೀನ ಪ್ರಕ್ರಿಯೆಗೆ ಚುರುಕುವ್ಯಾಪಕ ಭ್ರಷ್ಟಾಚಾರ: ಕಾಮಗಾರಿಗಳ ಶ್ವೇತಪತ್ರ ಹೊರಡಿಸಲು ಆಂಜನೇಯ ಆಗ್ರಹ‘ಗೌರವಯುತ ಲಂಚ’: ಕಾಂಗ್ರೆಸ್ ಸರ್ಕಾರದ ಹೊಸ 'ಪ್ರಜಾಸೇವಾ ಶುಲ್ಕ' ಎಂದು ಆರ್. ಅಶೋಕ್ಸ್ವಪಕ್ಷೀಯರ ಆಕ್ರೋಶವೇ ಕಾಂಗ್ರೆಸ್ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ: ಆರ್. ಅಶೋಕ್ ವಾಗ್ದಾಳಿಬರ ಪರಿಹಾರದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲ: ಬಿ. ವೈ. ವಿಜಯೇಂದ್ರ