LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜೂನ್ 14ರ ಭಾನುವಾರ ಜಿಲ್ಲಾ ಮಟ್ಟದ ‘ಕುಂಚಿಟಿಗ ಮಕ್ಕಳ ಪ್ರತಿಭಾ ಪುರಸ್ಕಾರ’ ಸಮಾರಂಭ

Advertisement
Advertisement

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ತಾಲೂಕು ಕುಂಚಿಟಿಗರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಜಿಲ್ಲಾ ಮಟ್ಟದ ಕುಂಚಿಟಿಗ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿರುವ ಪ್ರತಿಭಾ ಪುರಸ್ಕಾರಸಮಾರಂಭವು ಇದೇ ಬರುವ ಜೂನ್ 14, 2026ರ ಭಾನುವಾರ ಬೆಳಿಗ್ಗೆ 10 ಗಂಟೆಗೆ ನಗರದ ನೆಹರೂ ಮೈದಾನದಲ್ಲಿರುವ ರೋಟರಿ ಭವನದಲ್ಲಿ ಜರುಗಲಿದೆ.

ಈ ಕುರಿತು ತಾಲೂಕು ಕುಂಚಿಟಿಗರ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಜಿ. ಹನುಮಂತರಾಯ ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

ದಿನಾಂಕ ಮತ್ತು ಸಮಯ: 14-06-2026, ಭಾನುವಾರ ಬೆಳಿಗ್ಗೆ 10 ಗಂಟೆಗೆ. ಸ್ಥಳ: ರೋಟರಿ ಭವನ (ನೆಹರೂ ಮೈದಾನದ ಹತ್ತಿರ), ಹಿರಿಯೂರು. ಆಯೋಜಕರು: ತಾಲೂಕು ಕುಂಚಿಟಿಗರ ಕ್ಷೇಮಾಭಿವೃದ್ಧಿ ಸಂಘ, ಹಿರಿಯೂರು.

ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಮನವಿ:
"
ಜಿಲ್ಲಾ ಮಟ್ಟದ ಈ ಪ್ರತಿಭಾ ಪುರಸ್ಕಾರ ಸಮಾರಂಭಕ್ಕೆ ಚಿತ್ರದುರ್ಗ ಜಿಲ್ಲೆ ಹಾಗೂ ಹಿರಿಯೂರು ತಾಲೂಕಿನ ಕುಂಚಿಟಿಗ ಸಮಾಜದ ಎಲ್ಲಾ ಮುಖಂಡರುಗಳು, ಸಂಘದ ಪದಾಧಿಕಾರಿಗಳು, ಪುರಸ್ಕಾರಕ್ಕೆ ಆಯ್ಕೆಯಾಗಿರುವ ಅರ್ಹ ಮಕ್ಕಳು, ಅವರ ಪೋಷಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಿಕೊಡಬೇಕು."
ಕೆ.ಜಿ. ಹನುಮಂತರಾಯ, ಪ್ರಧಾನ ಕಾರ್ಯದರ್ಶಿ.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST