Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಬಿಐ ತನಿಖಾ ಸಂಸ್ಥೆ ವಿರುದ್ಧ ಹರಿಹಾಯ್ದ ಜಿಲ್ಲಾಧ್ಯಕ್ಷ ಜಗದೀಶ್

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿಯ ನ್ಯಾಯಾಲಯವು ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ, ಕೆ ಕವಿತಾ ಸೇರಿದಂತೆ 23 ಮಂದಿಯ ವಿರುದ್ಧ ಇದ್ದ ಪ್ರವರಣವನ್ನು ವಜಾ ಮಾಡಿದ್ದು ಇದು ಸತ್ಯಕ್ಕೆ ಸಿಕ್ಕಿರುವ ಜಯ ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಜಗದೀಶ್ ಹೇಳಿದರು.


ಇಲ್ಲಿನ ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ನ್ಯಾಯಾಧೀಶ ಜಿತೇಂದರ್ ಸಿಂಗ್ ಅವರು ಸುಮಾರು
598 ಪುಟಗಳ ಸುದೀರ್ಘ ತೀರ್ಪು ಹೊರಡಿಸಿ, ಕೇಜ್ರಿವಾಲ್ ವಿರುದ್ಧದ ಆರೋಪಗಳು ಸಹ-ಆರೋಪಿಗಳ ಅಥವಾ ಸಾಕ್ಷಿಗಳ ಹೇಳಿಕೆಗಳನ್ನು ಮಾತ್ರವೇ ಆಧರಿಸಿವೆ, ಆದರೆ ಅವರನ್ನು ಯಾವುದೇ ಕ್ರಿಮಿನಲ್ ಪಿತೂರಿಯಲ್ಲಿ ಭಾಗಿಯಾಗಿದ್ದಾರೆ ಎಂಬುದನ್ನು ಸಾಬೀತು ಮಾಡುವ ಸ್ವತಂತ್ರ ಪುರಾವೆಗಳ ಕೊರತೆಯಿದೆ ಎಂದು ಹೇಳಿದ್ದಾರೆ ಎಂದು ಜಗದೀಶ್ ತಿಳಿಸಿದರು.


ನ್ಯಾಯಾಲಯವು ತನಿಖಾ ಸಂಸ್ಥೆಯ ಅನೇಕ ಲೋಪದೋಷಗಳನ್ನು ಎತ್ತಿ ತೋರಿಸಿ, ಸಿಬಿಐ ವಿರುದ್ಧ ಛಾಟಿ ಬೀಸಿದೆ. ಆರೋಪಿಗಳ ವಿರುದ್ಧ ವಿಚಾರಣೆ ನಡೆಸಲು ಕ್ರಿಮಿನಲ್ ಕಾನೂನಿನ ಅಡಿಯಲ್ಲಿ ಅಗತ್ಯವಿರುವ ಗಂಭೀರ ಅನುಮಾನವಿರಲಿ, ಕನಿಷ್ಠ ಮಟ್ಟದ ಮೇಲ್ನೋಟದ ಅನುಮಾನವನ್ನೂ ಎತ್ತಿ ತೋರಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ನ್ಯಾಯಾಲಯ ಹೇಳಿದ್ದು ಸ್ವಾಗತಾರ್ಹವಾಗಿದೆ ಎಂದು ಅವರು ತಿಳಿಸಿದರು.

ಸಿಬಿಐ ತನಿಖಾ ಸಂಸ್ಥೆಯ ಅಧಿಕಾರಿಗಳು ತಮ್ಮ ಅಧಿಕಾರ ವ್ಯಾಪ್ತಿ ಮೀರಿ ವರ್ತಿಸುವ ಮೂಲಕ ನಾವು ಮಾಡಿದ್ದೆ ಸರಿ ಎನ್ನುವ ರೀತಿಯಲ್ಲಿ ವರ್ತಿಸುತ್ತಿರುವುದು ಖಂಡನೀಯ ಎಂದು ಜಗದೀಶ್ ತಿಳಿಸಿದರು.
ಪ್ರಕರಣದಲ್ಲಿ ಬಿಡುಗಡೆಯಾಗಿರುವ ಆಮ್ ಆದ್ಮಿ ಪಾರ್ಟಿಯ ಮುಖ್ಯಸ್ಥ ಅರವಿಂದ್ ಕ್ರೇಜಿವಾಲ ಅವರ ಬಿಡುಗಡೆಯಿಂದಾಗಿ ಕಾರ್ಯಕರ್ತರು, ಮುಖಂಡರಲ್ಲಿ ಉತ್ಸಾಹ ಇಮ್ಮಡಿಗೊಂಡಿದೆ ಎಂದು ಜಿಲ್ಲಾಧ್ಯಕ್ಷ ಜಗದೀಶ್ ತಿಳಿಸಿದರು.


ಸುದ್ದಿಗೋಷ್ಠಿ ಆಮ್ ಆದ್ಮಿ ಪಾರ್ಟಿಯ ಜಂಟಿ ಕಾರ್ಯದರ್ಶಿಗಳಾದ ರಾಮಣ್ಣ, ರವಿಕುಮಾರ್, ಲೋಕೇಶ್, ಕುಬೇರ್ ನಾಯ್ಕ್, ಮಹಿಳಾ ಜಿಲ್ಲಾಧ್ಯಕ್ಷ ಜ್ಯೋತಿ, ವಿನೋದಮ್ಮ ಮತ್ತಿತರರು ಇದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ