ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಜ್ಯ ಜಲಸಂಪನ್ಮೂಲ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ಇದೇ ಸೆಪ್ಟೆಂಬರ್ 20ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ಅಂದು ಬೆಳಿಗ್ಗೆ 7ಕ್ಕೆ ಬೆಂಗಳೂರಿಂದ ಹೊರಟು, ಬೆಳಿಗ್ಗೆ 10ಕ್ಕೆ ಹಿರಿಯೂರು ತಾಲ್ಲೂಕು ಐಮಂಗಲಕ್ಕೆ ಆಗಮಿಸಿ, ಭದ್ರಾ ಮೇಲ್ದಂಡೆ ಯೋಜನೆಯ ಚಿತ್ರದುರ್ಗ ಶಾಖಾ ಕಾಲುವೆಯಡಿ ಪ್ರಾಯೋಗಿಕವಾಗಿ ನೀರನ್ನು ಹರಿಸಿರುವ ಕೆರೆಗಳ ಪರಿವೀಕ್ಷಣೆ ಮಾಡುವರು.
ನಂತರ ಮಧ್ಯಾಹ್ನ 1.30ಕ್ಕೆ ಚಿತ್ರದುರ್ಗ ನಗರಕ್ಕೆ ಆಗಮಿಸಿ, ಸೆಪ್ಟೆಂಬರ್ 24ರಂದು ಮುಖ್ಯಮಂತ್ರಿಯವರು ನೆರವೇರಿಸಲಿರುವ ಭದ್ರಾ ಮೇಲ್ದಂಡೆ ಯೋಜನೆಯ ಗಂಗಾ ಪೂಜೆ ಕಾರ್ಯಕ್ರಮದ ಪೂರ್ವಸಿದ್ಧತೆಯ ಪರಿವೀಕ್ಷಣೆ ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ನಂತರ ಮಧ್ಯಾಹ್ನ 3ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಜಲಸಂಪನ್ಮೂಲ ಸಚಿವರ ಆಪ್ತ ಕಾರ್ಯದರ್ಶಿ ಎ.ಆರ್.ರವಿ ತಿಳಿಸಿದ್ದಾರೆ.




