Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಹೈಕಮಾಂಡ್ ಹೇಳಿದಾಗ ಡಿಕೆ ಸಿಎಂ-ಸಿದ್ದರಾಮಯ್ಯ

ಸಿಎಂ-ಡಿಸಿಎಂ ಮಧ್ಯ ಬ್ರೇಕ್ ​ಫಾಸ್ಟ್ ಮೀಟಿಂಗ್ ಮುಂದುವರಿಕೆ
ಚಂದ್ರವಳ್ಳಿ ನ್ಯೂಸ್
, ಬೆಂಗಳೂರು:
ಕರ್ನಾಟಕ ಕಾಂಗ್ರೆಸ್​ ಅಧಿಕಾರ ಹಂಚಿಕೆ ಬಿಕ್ಕಟ್ಟು ಉಲ್ಬಣಗೊಳ್ಳುತ್ತಿದ್ದಂತೆ ಹೈಕಮಾಂಡ್ ಸೂಚನೆಯಂತೆ ಸಿಎಂ ಸಿದ್ದರಾಮಯ್ಯ ಅವರ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಜತೆಗೆ ಬ್ರೇಕ್ ​ಫಾಸ್ಟ್ ಮೀಟಿಂಗ್ ನಡೆಸಲಾಗಿತ್ತು.


ಸಿದ್ದರಾಮಯ್ಯನವರ ಮನೆಯಲ್ಲಿ ನಡೆದ ಬ್ರೇಕ್​ಫಾಸ್ಟ್ ನಂತರ ಉಭಯ ನಾಯಕರೂ ಒಗ್ಗಟ್ಟು ಪ್ರದರ್ಶಿಸಿ ಹೇಳಿಕೆ ನೀಡಿದ್ದರು. ನಂತರ ನಡೆದ ಬೆಳವಣಿಗೆಯಿಂದಾಗಿ ಸಿದ್ದರಾಮಯ್ಯ ಅವರನ್ನು ನಾಟಿ ಕೋಳಿ ಸಾರು ಊಟಕ್ಕೆ ಬರುವಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಹ್ವಾನಿಸಿದ್ದರು.


ಡಿಕೆ ಶಿವಕುಮಾರ್ ಅವರ ಕೋರಿಕೆ ಮೇರೆಗೆ ಮಂಗಳವಾರ ಅವರ ಸದಾಶಿವ ನಗರ ನಿವಾಸದಲ್ಲಿ ಉಭಯ ನಾಯಕರು ಬ್ರೇಕ್​ಫಾಸ್ಟ್ ಮೀಟಿಂಗ್ಮಾಡಿದ್ದಾರೆ.


ಡಿಕೆ ಶಿವಕುಮಾರ್ ಅವರ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರು ನಾಟಿ ಕೋಳಿ ಸಾರು, ಇಡ್ಲಿ, ಮುಂದೆ ಸವಿದಿದ್ದಾರೆ.
ಬ್ರೇಕ್ ​ಫಾಸ್ಟ್ ಬಳಿಕ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಉಭಯ ನಾಯಕರು ಮಾಹಿತಿ ನೀಡಿದರು.




ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ನಮ್ಮ ಮನೆಗೆ ಶನಿವಾರ ಬ್ರೇಕ್​ಫಾಸ್ಟ್ ಗೆ ಬಂದಿದ್ದಾಗ ಡಿಕೆ ಶಿವಕುಮಾರ್ ಅವರು ಮಂಗಳವಾರ ನಾಟಿ ಕೋಳಿ ಸಾರ್ ಊಟಕ್ಕೆ ಬನ್ನಿ ಎಂದು ಶಿವಕುಮಾರ್ ಆಹ್ವಾನ ನೀಡಿದ್ದರು. ಅದರಂತೆ ಬಂದಿದ್ದೇನೆ. ಡಿಸೆಂಬರ್ 8ರಿಂದ ಬೆಳಗಾವಿ ಅಧಿವೇಶನ ಆರಂಭ ಆಗುತ್ತದೆ. ಅಧಿವೇಶನ ಹಿನ್ನೆಲೆ ನಾವು ಚರ್ಚೆ ಮಾಡಿದ್ದೇವೆ. ವಿಪಕ್ಷಗಳು ಯಾವುದೇ ವಿಚಾರ ಪ್ರಸ್ತಾಪಿಸಿದರೂ ಎದುರಿಸುತ್ತೇವೆ. ಪ್ರತಿಪಕ್ಷಗಳು ಅವಿಶ್ವಾಸ ನಿಲುವಳಿ ಮಂಡಿಸಲು ಮುಂದಾಗಿವೆ ಎಂದು ಮಾಧ್ಯಮಗಳಲ್ಲಿ ನೋಡಿದ್ದೇನೆ. ಅದನ್ನು ಸಮರ್ಥವಾಗಿ ಎದುರಿಸುತ್ತೇವೆ. ಆ ಬಗ್ಗೆ ಚರ್ಚೆ ನಡೆಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.


ರೈತರ ಪರ ನಮ್ಮ ಸರ್ಕಾರ ಯಾವಾಗಲೂ ಇರುತ್ತದೆ. ರಾಜ್ಯದ ಸಮಸ್ಯೆ ಬಗ್ಗೆಯೂ ನಾನು, ಡಿಸಿಎಂ ಚರ್ಚೆ ಮಾಡಿದ್ದೇವೆ. ಕಬ್ಬಿಗೆ ಬೆಲೆ ನಿಗದಿ ವಿಚಾರವಾಗಿ ಕಾರ್ಖಾನೆ ಮಾಲೀಕರ ಜತೆ, ಬೆಳೆಗಾರರ ಜತೆಗೂ ಚರ್ಚೆ ಮಾಡಿದ್ದೆ ಎಂದು ಸಿದ್ದರಾಮಯ್ಯ ಹೇಳಿದರು.


ಮೆಕ್ಕೆಜೋಳ ರೈತರ ಸಮಸ್ಯೆ ಬಗ್ಗೆಯೂ ಬ್ರೇಕ್​ಫಾಸ್ಟ್ ಮೀಟಿಂಗ್ನಲ್ಲಿ ಚರ್ಚಿಸಿದ್ದೇವೆ. ಮೆಕ್ಕೆಜೋಳಕ್ಕೆ ಎಂಎಸ್​ಪಿ ದರ 2,400 ರೂಪಾಯಿ ಇದೆ. ಮಾರುಕಟ್ಟೆಯಲ್ಲಿ ಬೇರೆ ಬೇರೆ ಬೆಲೆ ಇದೆ. ರೈತರಿಗೆ ಎಂಎಸ್​ಪಿ ದರ ಕೊಡುವುದಕ್ಕೆ ಒಪ್ಪಿಸಿದ್ದೇವೆ. ರೈತರಿಗೆ ಸಹಾಯ ಮಾಡೋಕೆ ತೀರ್ಮಾನಿಸಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಹೈಕಮಾಂಡ್ ಸೂಚನೆಯಂತೆ ನಡೆದುಕೊಳ್ಳುತ್ತೇವೆ:
ಪಕ್ಷದ ಆಂತರಿಕ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು ಹೈಕಮಾಂಡ್​ ಹೇಳಿದಂತೆ ನಾನು
, ಡಿಸಿಎಂ ನಡೆದುಕೊಳ್ಳುತ್ತೇವೆ ಎಂದು ಪುನರುಚ್ಚರಿಸಿದರು. ಹೈಕಮಾಂಡ್​ ಹೇಳಿದಂತೆ ಕೇಳಬೇಕೆಂದು ಮೊನ್ನೆಯೂ ಚರ್ಚೆ ಆಗಿತ್ತು. ಇಂದು ಕೂಡ ಚರ್ಚೆ ಮಾಡಿದ್ದೇವೆ. ನಾನು, ಡಿ.ಕೆ.ಶಿವಕುಮಾರ್​ ಸಹೋದರರೇ ಎಂದು ಸಿದ್ದರಾಮಯ್ಯ ಹೇಳಿದರು.


ದೆಹಲಿಗೆ ಹೋಗುತ್ತೇವೆ:
ಪಕ್ಷದ ಆಂತರಿಕ ವಿಚಾರದಲ್ಲಿ ಹಾಗೂ ಅಧಿಕಾರ ಹಂಚಿಕೆ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
, ಹೈಕಮಾಂಡ್ ಸೂಚನೆಯಂತೆಯೇ ನಾವಿಬ್ಬರೂ ನಡೆದುಕೊಳ್ಳುತ್ತೇವೆ. ನಮ್ಮಿಬ್ಬರಲ್ಲಿ ಯಾವುದೇ ಗೊಂದಲ ಇಲ್ಲ. ಹೈಕಮಾಂಡ್ ಕರೆದರೆ ಇಬ್ಬರೂ ದೆಹಲಿಗೆ ಹೋಗುತ್ತೇವೆ ಎಂದು ಸಿಎಂ ತಿಳಿಸಿದರು.


ಹೈಕಮಾಂಡ್ ಹೇಳಿದಾಗ ಡಿಕೆ ಸಿಎಂ:
ಡಿಕೆ ಶಿವಕುಮಾರ್ ಯಾವಾಗ ಸಿಎಂ ಆಗ್ತಾರೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಹೈಕಮಾಂಡ್ ಹೇಳಿದಾಗ ಎಂದು ತಿಳಿಸಿದರು.


ಮಂಗಳೂರಿನಲ್ಲಿ ಬುಧವಾರ ಆಯೋಜಿಸಿರುವ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದೇನೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಸಹ ಆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಿದ್ದರಾಮಯ್ಯ ಅವರು ಮಾಹಿತಿ ನೀಡಿದರು.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು