ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಗರದ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಸಾರ್ವಜನಿಕರನ್ನು ಭೇಟಿಯಾಗಿ ಅವರಿಂದ ನೇರವಾಗಿ ಅಹವಾಲುಗಳನ್ನು ಸ್ವೀಕರಿಸಿದರು.
ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಸಾರ್ವಜನಿಕರು ಹಾಗೂ ನಿಯೋಗಗಳು ತಮ್ಮ ಸಮಸ್ಯೆಗಳು, ಕುಂದುಕೊರತೆಗಳು ಮತ್ತು ಕುರಿತಾದ ಮನವಿ ಪತ್ರಗಳನ್ನು ಅವರಿಗೆ ಹಸ್ತಾಂತರಿಸಿದರು.
ಪ್ರತಿಯೊಬ್ಬರ ಅಹವಾಲುಗಳನ್ನು ಆಲಿಸಿದ ಅವರು, ಸಾರ್ವಜನಿಕರ ಸಮಸ್ಯೆಗಳಿಗೆ ಶೀಘ್ರವಾಗಿ ಸ್ಪಂದಿಸಿ ಸೂಕ್ತ ಪರಿಹಾರ ಒದಗಿಸುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.




