ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮುಖ್ಯ ಕಚೇರಿ ಆವರಣದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪೌರಕಾರ್ಮಿಕರ ಪಿತಾಮಹ ಐ.ಪಿ.ಡಿ ಸಾಲಪ್ಪ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಹಾಗೂ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಭಾವಪೂರ್ಣ ಗೌರವ ನಮನ ಸಲ್ಲಿಸಿದರು.
ಪೌರಕಾರ್ಮಿಕರ ಹಕ್ಕು, ಗೌರವ ಮತ್ತು ಘನತೆಗಾಗಿ ತಮ್ಮ ಇಡೀ ಬದುಕನ್ನೇ ಮುಡಿಪಾಗಿಟ್ಟಿದ್ದ ಐ.ಪಿ.ಡಿ. ಸಾಲಪ್ಪ ಅವರ ಸೇವೆ ಹಾಗೂ ಐತಿಹಾಸಿಕ ಹೋರಾಟವನ್ನು ಈ ಸಂದರ್ಭದಲ್ಲಿ ಸ್ಮರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಸಚಿವರಾದ ಯತೀಂದ್ರ ಸಿದ್ದರಾಮಯ್ಯ, ಹೆಚ್.ಸಿ. ಬಾಲಕೃಷ್ಣ, ಪಿ.ಎಂ. ನರೇಂದ್ರಸ್ವಾಮಿ ಸೇರಿದಂತೆ ಹಲವು ಮುಖ್ಯ ಗಣ್ಯರು ಹಾಗೂ ಜನಪ್ರತಿನಿಧಿಗಳು ಭಾಗವಹಿಸಿದ್ದರು.




