ಚಂದ್ರವಳ್ಳಿ ನ್ಯೂಸ್,ತಿರುಮಲ: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಡಿ.ಕೆ. ಶಿವಕುಮಾರ್ ಅವರು ಆಂಧ್ರಪ್ರದೇಶದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ತಿರುಮಲಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದಿದ್ದಾರೆ.
ಮುಖ್ಯಮಂತ್ರಿಯಾಗಿ ಜವಾಬ್ದಾರಿ ವಹಿಸಿಕೊಂಡ ನಂತರ ಮೊದಲ ಬಾರಿಗೆ ತಿರುಪತಿಗೆ ಭೇಟಿ ನೀಡಿದ ಅವರು, ತಿಮ್ಮಪ್ಪನಿಗೆ ವಿಶೇಷ ಪೂಜೆ ಹಾಗೂ ಕಲ್ಯಾಣೋತ್ಸವ ಸೇವೆಗಳನ್ನು ಸಲ್ಲಿಸಿದರು.
ಸರ್ವಜನರ ಕಲ್ಯಾಣಕ್ಕಾಗಿ ಪ್ರಾರ್ಥನೆ.
ದೇವರ ದರ್ಶನದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, "ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ತಿರುಮಲದಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದದ್ದು ನನ್ನ ಸೌಭಾಗ್ಯ. ನಾಡಿನ ಹಾಗೂ ದೇಶದ ಜನರ ಶಾಂತಿ, ಸಮೃದ್ಧಿ, ಪ್ರಗತಿ ಮತ್ತು ಕಲ್ಯಾಣಕ್ಕಾಗಿ ನಾನು ಈ ಸಂದರ್ಭದಲ್ಲಿ ದೇವರಲ್ಲಿ ಪ್ರಾರ್ಥಿಸಿದ್ದೇನೆ," ಎಂದು ತಿಳಿಸಿದ್ದಾರೆ.
ದೇವಾಲಯದ ಮಂಡಳಿಯ ವತಿಯಿಂದ ಮುಖ್ಯಮಂತ್ರಿಗಳಿಗೆ ಆತ್ಮೀಯ ಸ್ವಾಗತ ಕೋರಿ, ಸ್ವಾಮಿಯ ಪ್ರಸಾದ ಹಾಗೂ ಶೇಷವಸ್ತ್ರ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಅವರ ಕುಟುಂಬಸ್ಥರು ಹಾಗೂ ಪ್ರಮುಖ ನಾಯಕರು ಉಪಸ್ಥಿತರಿದ್ದರು.



