ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ತುಮಕೂರಿನ ಪ್ರಸಿದ್ಧ ಶ್ರೀ ಸಿದ್ದಗಂಗಾ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಸಿದ್ದಲಿಂಗ ಸ್ವಾಮೀಜಿಯವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರದ ಖಾಸಗಿ ನಿವಾಸಕ್ಕೆ ಭೇಟಿ ನೀಡಿ ಸಮಾಲೋಚನೆ ನಡೆಸಿದರು.
ಈ ಸಂದರ್ಭದಲ್ಲಿ ಶ್ರೀಗಳ ಚರಣಗಳಿಗೆ ನಮಸ್ಕರಿಸಿ ಆಶೀರ್ವಾದ ಪಡೆದುಕೊಂಡ ಡಿ.ಕೆ. ಶಿವಕುಮಾರ್, ನಾಡಿನ ಒಳಿತಿಗಾಗಿ ಶ್ರೀಗಳ ಆಶೀರ್ವಾದ ಹಾಗೂ ಹಿತವಚನಗಳು ಸದಾ ಪ್ರೇರಣೆ ನೀಡಲಿವೆ ಎಂದು ಸಂತಸ ವ್ಯಕ್ತಪಡಿಸಿದರು.
ಸಾಮಾಜಿಕ, ಶೈಕ್ಷಣಿಕ ಹಾಗೂ ನಾಡಿನ ಅಭಿವೃದ್ಧಿಯ ಹಲವು ವಿಷಯಗಳ ಕುರಿತು ಈ ವೇಳೆ ಪೂಜ್ಯ ಶ್ರೀಗಳೊಂದಿಗೆ ಸುದೀರ್ಘ ಚರ್ಚೆ ನಡೆಸಲಾಯಿತು.




