ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭವ್ಯ ಕರ್ನಾಟಕದ ಭವಿಷ್ಯದ ಆಶಾಕಿರಣಗಳಾದ ನಾಡಿನ ಹೆಮ್ಮೆಯ ವಿದ್ಯಾರ್ಥಿ ಮಿತ್ರರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೊಸ ಶೈಕ್ಷಣಿಕ ವರ್ಷದ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ.
ಹೊಸ ಶೈಕ್ಷಣಿಕ ವರ್ಷ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಸಂದೇಶ ನೀಡಿರುವ ಅವರು, "ಶಾಲೆ ಎಂಬ ಜ್ಞಾನ ದೇಗುಲದಲ್ಲಿ ನಿಮ್ಮ ಕನಸುಗಳು ಚಿಗುರಲಿ" ಎಂದು ಆಶಿಸಿದ್ದಾರೆ.
ವಿದ್ಯಾರ್ಥಿಗಳು ನಿರಂತರ ಪರಿಶ್ರಮ ಹಾಗೂ ಆತ್ಮವಿಶ್ವಾಸದ ಮೂಲಕ ತಾವು ಅಂದುಕೊಂಡ ಗುರಿಯನ್ನು ತಲುಪಬೇಕು. ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಿ ವಿದ್ಯಾರ್ಥಿಗಳು ಮಾಡುವ ಸಾಧನೆಗಳು ನಮ್ಮ ಹೆಮ್ಮೆಯ ಕರ್ನಾಟಕ ರಾಜ್ಯಕ್ಕೆ ಕೀರ್ತಿ ತರಲಿ ಎಂದು ಡಿ.ಕೆ.ಶಿವಕುಮಾರ್ ಅವರು ತಮ್ಮ ಸಂದೇಶದಲ್ಲಿ ಹಾರೈಸಿದ್ದಾರೆ.



