Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿಸಿಎಂ ಎನ್ನುವುದನ್ನು ಮರೆತು ಬಿಟ್ಟಿರುವ ಡಿಕೆ ಶಿವಕುಮಾರ್

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾನ್ಯ ಡಿ (ಡ್ರಾಮ) ಕೆ (ಕಿಂಗ್) ಶಿವಕುಮಾರ್ ಅವರೆ 
ನೀವು ಉಪಮುಖ್ಯಮಂತ್ರಿಗಳು ಎನ್ನುವುದನ್ನು ಮರೆತು ಬಿಟ್ಟಿದ್ದೀರಿ. ನೀವು ನ್ಯಾಯಾಧೀಶರ ಸ್ಥಾನದಲ್ಲಿ ಇದ್ದು, ಸತ್ಯಾಸತ್ಯತೆಯನ್ನು ವಿಚಾರ ಮಾಡಬೇಕಾದವರು ದುರದೃಷ್ಟವಾಶಾತ್ ಯಾರದ್ದೋ ವಕೀಲರಾಗಿಬಿಟ್ಟಿದ್ದೀರಿ. ಯಾರು ಮೋಹ ಮದ ಮಾತ್ಸರ್ಯಗಳಿಂದ ಹೊರಗಿದ್ದು ನೋಡುತ್ತಾರೋ ಅವರಿಗೆ ಸತ್ಯಾಸತ್ಯಾತೆ ಗೊತ್ತಾಗುತ್ತದೆ. ಮೋಹಪರವಶರಾದವರಿಗೆ, ಅಧಿಕಾರದ ಮದದಿಂದ ಕೂಡಿದವರಿಗೆ, ಮಾತ್ಸರ್ಯದ  ರಾಜಕಾರಣ ಮಾಡುವವರಿಗೆ ಸತ್ಯ ಅರ್ಥ ಆಗಲಿಕ್ಕೆ ಸಾಧ್ಯವಿಲ್ಲ ಎಂದು ಸಿ.ಟಿ.ರವಿ ತಿಳಿಸಿದ್ದಾರೆ.

ಸಭಾಪತಿಗಳ ರೂಲಿಂಗ್ ನೀಡಿದ ನಂತರ ನೀವುಗಳು, ನಿಮ್ಮ ಪಕ್ಷದ ಶಾಸಕರು ನಡೆದುಕೊಂಡ ರೀತಿ ನಿಮಗುಚಿತವೇ? ಗೂoಡಾಗಳನ್ನೂ, ಜೊತೆಗಾರರನ್ನು ಎತ್ತಿಕಟ್ಟಿ, ಶಾಸಕಾಂಗದ ದೇಗುಲವಾದ "ಸುವರ್ಣ ಸೌಧದಲ್ಲಿ" ನನ್ನ ಮೇಲೆ ನಡೆದ ಹಲ್ಲೆಯನ್ನು ಯಾವ ದೃಷ್ಟಿಯಿಂದ ನೋಡುತ್ತೀರಿ? ಇದನ್ನು ಗಾಂಧಿಗಿರಿ ಎನ್ನಬೇಕೇ ಅಥವಾ ಗೂoಡಾಗಿರಿ ಎನ್ನಬೇಕೇ? ಎಂದು ಸಿಟಿ ರವಿ ಪ್ರಶ್ನಿಸಿದ್ದಾರೆ.

ನಿಮ್ಮ ಸರ್ಕಾರದ ಪೊಲೀಸರು ಮಾಡಿದ ಅಸಂವಿಧಾನಿಕ, ಅನೈತಿಕ ಬಂಧನವನ್ನು ಏನೆಂದು ಭಾವಿಸುತ್ತೀರಿ? ಪೊಲೀಸರು ರಾತ್ರಿ ಇಡೀ ನಡೆಸಿದ ದೌರ್ಜನ್ಯದ ಹಿಂದೆ ಯಾರ ಕುಮ್ಮಕ್ಕಿದೆ? ಯಾರ ಕಾಣದ ಕೈಗಳ ಪಾತ್ರವಿದೆ? ಇದನ್ನು ಮೋಹ ಮದ ಮಾತ್ಸರ್ಯಗಳಿಂದ ಹೊರಗಿದ್ದು ನೋಡಿ, ಸತ್ಯದರಿವು ನಿಮಗಾಗುತ್ತದೆ. ಕಪಟ ನಾಟಕ ಯಾರು ಮಾಡುತ್ತಿದ್ದಾರೆ ಎನ್ನುವುದೂ ಗೊತ್ತಾಗುತ್ತದೆ ಎಂದು ಸಿಟಿ ರವಿ ವಾಗ್ದಾಳಿ ಮಾಡಿದ್ದಾರೆ.

ಸಾರ್ವಜನಿಕ ಬದುಕಿನಲ್ಲಿ ಸಿ ಟಿ ರವಿಯನ್ನು ಹೋರಾಟಗಾರ ಎಂದು ಗುರುತಿಸಿದ್ದಾರೆ, ರವಿಯನ್ನು ಕೆಲಸಗಾರ ಎಂದು ಗುರುತಿಸಿದ್ದಾರೆ, ರವಿಯನ್ನ ಪಕ್ಷನಿಷ್ಠ, ಸಿದ್ಧಾಂತ ಬದ್ಧ ಎಂದು ಗುರುತಿಸುತ್ತಾರೆ ಎಂಬುದು ನನ್ನ ಕರ್ನಾಟಕದ ಜನತೆ ತಿಳಿದಿದೆ.

"ಯದ್ಭಾವಂ ತದ್ಭವತಿ" ಎಂಬ ಮಾತಿನಂತೆ  "ಯಾರು ಹೇಗಿದ್ದಾರೋ ಇತರರೂ ಹಾಗೆ ಎಂದು ಭಾವಿಸುತ್ತಾರೆ" "ಉಪಮುಖ್ಯಮಂತ್ರಿ" ಯವರೆ. ಅಂದಹಾಗೆ ಕಾಂಗ್ರಸ್ಸಿನ ಕೆಲ ನಾಯಕರು "ನಮ್ಮ ಡ್ರಾಮಾ(D) ಕಿಂಗ್ (K) ಶಿವಕುಮಾರ್ ಅವರು ಇಷ್ಟೆಲ್ಲಾ ಡ್ರಾಮಾ ಮಾಡುತ್ತಿರುವುದು ಮುಖ್ಯಮಂತ್ರಿ ಗಾದಿಯನ್ನು ಏರುವ ಹಪಹಪಿಗಾಗಿ" ಎಂದು ರಾಜಕೀಯದ ಮೊಗಸಾಲೆಗಳಲ್ಲಿ ಹೇಳಿಕೊಂಡು ಸುತ್ತುತ್ತಿರುವುದು ನಿಜವೇ? ಎಂದು ಸಿಟಿ ರವಿ ಪ್ರಶ್ನಿಸಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ