Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಾಮುಂಡೇಶ್ವರಿ ದೇವಿ ದರ್ಶನ ಪಡೆದ ಡಿ.ಕೆ. ಶಿವಕುಮಾರ್, ಇತರೆ ಗಣ್ಯರು

Advertisement
ಚಂದ್ರವಳ್ಳಿ ನ್ಯೂಸ್, ಮೈಸೂರು:
ಎರಡನೇ ಆಷಾಢ ಶುಕ್ರವಾರದ ಚಾಮುಂಡೇಶ್ವರಿ ದೇವಿ ದರ್ಶನ ಪಡೆಯಲು ಡಿಸಿಎಂ ಡಿ.ಕೆ. ಶಿವಕುಮಾರ್​
, ಸಚಿವ ಚಲುವರಾಯಸ್ವಾಮಿ, ನಟರಾದ ದರ್ಶನ್​, ಡಾಲಿ ಧನಂಜಯ್​, ಚಿಕ್ಕಣ್ಣ, ಧನ್ವೀರ್​ ಗೌಡ ಹಾಗೂ ಕುರಿ ಪ್ರತಾಪ್​ ಸೇರಿದಂತೆ ಹಲವು ಗಣ್ಯರು ಆಗಮಿಸಿ ದೇವಿಯ ದರ್ಶನ ಪಡೆದರು.

ಆಷಾಢ ಮಾಸದಲ್ಲಿ ಶಕ್ತಿ ಸ್ವರೂಪಿಣಿಯಾದ ನಾಡ ಅಧಿದೇವತೆ ಚಾಮುಂಡಿ ತಾಯಿಯ ದರ್ಶನ ಪಡೆಯಲು ಬೆಳಗಿನ ಜಾವ 3 ಗಂಟೆಯಿಂದಲೇ ಭಕ್ತರು ಚಾಮುಂಡಿಬೆಟ್ಟಕ್ಕೆ ಆಗಮಿಸಿದ್ದಾರೆ.
ಚಾಮುಂಡಿ ಬೆಟ್ಟದ ಬಳಭಾಗದಲ್ಲಿ ವಿವಿಧ ಬಗೆಯ ಹೂವುಗಳು ಹಾಗೂ ಹಣ್ಣುಗಳಿಂದ ದೇವಿಗೆ ಅಲಂಕಾರ ಮಾಡಿರುವುದು ವಿಶೇಷ ಆಕರ್ಷಣೆಯಾಗಿತ್ತು.


ಶಕ್ತಿದೇವಿಗೆ ಅಲಂಕಾರ:
ಆಷಾಢ ಮಾಸದಲ್ಲಿ ಶಕ್ತಿದೇವತೆ ಆರಾಧನೆ
, ಶ್ರಾವಣ ಮಾಸದಲ್ಲಿ ವಿಷ್ಣು ದೇವರ ಆರಾಧನೆ ಹಾಗೂ ಕಾರ್ತಿಕ ಮಾಸದಲ್ಲಿ ಶಿವನ ಅರಾಧನೆ ಮಾಡುವುದು ವಿಶೇಷ. ಆಷಾಢ ಮಾಸದ ಎರಡನೇ ಶುಕ್ರವಾರ ಶಕ್ತಿದೇವಿಗೆ ವಿಜಯಲಕ್ಷ್ಮಿ ಅಲಂಕಾರ ಮಾಡಲಾಗಿತ್ತು.


ಬೆಳಗಿನ ಜಾವ 3 ಗಂಟೆಯಿಂದಲೇ ಚಾಮುಂಡೇಶ್ವರಿ ತಾಯಿಯ ಮೂಲ ವಿಗ್ರಹಕ್ಕೆ ಅಭಿಷೇಕ, ಅರ್ಚನೆ, ಅಲಂಕಾರ ಮಾಡಿ, ಮಂಗಳಾರತಿ ಮಾಡಿ, ನಂತರ 5.30 ರಿಂದ ಭಕ್ತರಿಗೆ ದರ್ಶನದ ವ್ಯವಸ್ಥೆ ಮಾಡಲಾಗಿತ್ತು. ರಾತ್ರಿ 9.30ಕ್ಕೆ ಮಹಾಮಂಗಳಾರತಿ ಮಾಡಿ ನಂತರ ರಾತ್ರಿ 10 ಗಂಟೆಯವರೆಗೆ ದೇವಿ ದರ್ಶನಕ್ಕೆ ಅವಕಾಶ ನೀಡಲಾಗಿತ್ತು.
ಆಷಾಢ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ಸಿನಿಮಾ ಹಾಗೂ ರಾಜಕೀಯ ಪಕ್ಷಗಳ ಗಣ್ಯರು, ಸಚಿವರು ಭೇಟಿ ನೀಡಿದ್ದಾರೆ.


ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಪತ್ನಿ ಜೊತೆ ಆಗಮಿಸಿ​ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಸರ್ವರ ಒಳಿತಿಗಾಗಿ ಹಾಗೂ ಅಭಿವೃದ್ಧಿಗಾಗಿ ಪ್ರಾರ್ಥಿಸಿದರು. ಇದೇ ಸಂದರ್ಭದಲ್ಲಿ ಸಚಿವ ಚಲುವರಾಯ ಸ್ವಾಮಿ ಅವರು ಕೂಡ ಪತ್ನಿ ಜೊತೆ ಆಗಮಿಸಿ, ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು.

ಚಾಮುಂಡಿ ತಾಯಿಯ ಪರಮಭಕ್ತರಾಗಿರುವ ನಟ ದರ್ಶನ್‌ ಅವರು ಕೂಡ ಪತ್ನಿ ಜೊತೆ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ನಟರಾದ ಚಿಕ್ಕಣ್ಣ
, ಧನ್ವೀರ್​ ಗೌಡ ಹಾಗೂ ಕುರಿ ಪ್ರತಾಪ್​ ಅವರು ಜೊತೆಗೆ ಆಗಮಿಸಿ ದೇವಿಯ ದರ್ಶನ ಪಡೆದರು. ನಟ ಡಾಲಿ ಧನಂಜಯ್​ ಅವರು ಆಷಾಢ ಶುಕ್ರವಾರದಂದು ಚಾಮುಂಡೇಶ್ವರಿ ದರ್ಶನ ಪಡೆದರು‌.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ