Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೇವೇಗೌಡರು ಆಂಬ್ಯುಲೆನ್ಸ್‌ನಲ್ಲಿ ಬಂದು ಪ್ರಚಾರ ಮಾಡುತ್ತಾರೆಂದು ಅಪಹಾಸ್ಯ ಮಾಡಿದ ಡಿ ಕೆ ಸುರೇಶ್

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದೇವೇಗೌಡರು ಆಂಬ್ಯುಲೆನ್ಸ್‌ನಲ್ಲಿ ಬಂದು ಪ್ರಚಾರ ಮಾಡುತ್ತಾರೆ ಎಂದು, ಅವರ ಆರೋಗ್ಯದ ಬಗ್ಗೆ ಅಪಹಾಸ್ಯ ಮಾಡಿರುವ ಮಾಜಿ ಸಂಸದ ಡಿ.ಕೆ.ಸುರೇಶ್ ವಿರುದ್ಧ ಜೆಡಿಎಸ್ ವಾಗ್ದಾಳಿ ಮಾಡಿ ನಿಮಗೆ ಚನ್ನಪಟ್ಟಣದ ಜನತೆ ಉತ್ತರಿಸುತ್ತಾರೆ ಎಂದು ಟ್ವೀಟ್ ಮಾಡಿದೆ.

ರೈತನಾಯಕ, ನೀರಾವರಿಗಳ ಹರಿಕಾರರು, ಮಾಜಿ ಪ್ರಧಾನಿಗಳಾದ ಹೆಚ್‌.ಡಿ. ದೇವೇಗೌಡರು ನಾಡಿಗೆ ಕೊಟ್ಟಿರುವ ಕೊಡುಗೆಗಳು ಅಪಾರ. ದೇವೇಗೌಡರು ಹುಟ್ಟು ಹೋರಾಟಗಾರರು ಎಂದು ಜೆಡಿಎಸ್ ಹೇಳಿದೆ.

ಕರ್ನಾಟಕ ಕಾಂಗ್ರೆಸ್ ನ  ತಾವು ಮರೆತಿರಬಹುದು, ಹಿಂದೆ ಚನ್ನಪಟ್ಟಣದ ವಿಟ್ಲೇನಹಳ್ಳಿ ಗೋಲಿಬಾರ್‌ನಿಮ್ಮದೇ ಕಾಂಗ್ರೆಸ್‌ಸರ್ಕಾರ ನಡೆಸಿತ್ತು. ಆಗಲೂ ದೇವೇಗೌಡರು ಚನ್ನಪಟ್ಟಣದಿಂದ ಬೆಂಗಳೂರಿನ ತನಕ ರೈತರಿಗೆ ನ್ಯಾಯ ಕೊಡಿಸಲು ಪಾದಯಾತ್ರೆ ಮಾಡಿದ್ದರು.

 ಇಳಿ ವಯಸ್ಸಿನಲ್ಲೂ ರಾಜ್ಯಸಭೆಯಲ್ಲಿ ರಾಜ್ಯದ ಹಲವು ಸಮಸ್ಯೆಗಳ ಕುರಿತು ಮತ್ತು ದೇಶದ ರೈತರ ಬಗ್ಗೆ ಧ್ವನಿ ಎತ್ತಿ ಮಾತನಾಡುವ ಅವರ ಬಗ್ಗೆ ಲಘುವಾಗಿ ಮಾತಾಡಿರುವ ನೀವು, 2 ಬಾರಿ ಸಂಸದರಾಗಿ ಲೋಕಸಭೆಯಲ್ಲಿ ನೀರಾವರಿ, ರೈತರು ಹಾಗೂ ನಾಡಿನ ಸಮಸ್ಯೆಗಳ ಬಗ್ಗೆ ಎಷ್ಟು ಮಾತನಾಡಿದ್ದೀರಿ ? ಎಂದು ಜೆಡಿಎಸ್ ಖಾರವಾಗಿ ಪ್ರಶ್ನಿಸಿದೆ.

ನಿಮ್ಮ ಆತ್ಮಸಾಕ್ಷಿಯನ್ನು ಪ್ರಶ್ನೆಮಾಡಿಕೊಳ್ಳಿ ಮಿಸ್ಟರ್‌ಸುರೇಶ್‌. ದೇವೇಗೌಡರು ತಂದಿರುವ ನೀರಾವರಿ ಯೋಜನೆಗಳು, ಜಲಾಶಯಗಳ ನಿರ್ಮಾಣ ಕುರಿತು ಇಡೀ ದೇಶವೆ ಮೆಚ್ಚುಗೆ ವ್ಯಕ್ತಪಡಿಸುತ್ತದೆ. ರಾಜ್ಯದ ನದಿಗಳು - ನೀರಾವರಿ ಹೋರಾಟಗಳ ಬಗ್ಗೆ ಸಂಸತ್ತಿನಲ್ಲಿ ಈಗಲು ಮಾತಾನಾಡುತ್ತಲೇ ಇದ್ದಾರೆ ದೇವೇಗೌಡರು. 

ದೇವೇಗೌಡರ ಕುಟುಂಬದ ಬಗ್ಗೆ ಟೀಕಿಸುತ್ತಿರುವ ಕೃತಜ್ಞತೆ ಇಲ್ಲದ ಆ ಮಾಗಡಿ ಶಾಸಕ, ಮೊದಲ ಬಾರಿಗೆ ಜನಪ್ರತಿನಿಧಿಯಾಗಿದ್ದು ಯಾರ ಕೃಪೆಯಿಂದ ಎಂಬುದು ಜನತೆಗೆ ಗೊತ್ತಿದೆ ಎಂದು ಜೆಡಿಎಸ್ ವಾಗ್ದಾಳಿ ಮಾಡಿದೆ. 

ಭಾರತೀಯ ಕಾಂಗ್ರೆಸ್ ನಾಯಕರು, ಹಿರಿಯರಿಗೆ ಹೇಗೆ ಗೌರವ ಕೊಡಬೇಕು ಎಂಬುದನ್ನು ರಾಜ್ಯ ಕಾಂಗ್ರೆಸ್‌ನಾಯಕರಿಗೆ ಮೊದಲು ಕಲಿಸಲಿ ಎಂದು ತಾಕೀತು ಮಾಡಿದೆ. 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ