ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಾಗೂ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಭೇಟಿಯಾಗಿ ಮಹತ್ವದ ಸಮಾಲೋಚನೆ ನಡೆಸಿದ್ದಾರೆ.
ರಾಜ್ಯ ರಾಜಕಾರಣದ ಪ್ರಸಕ್ತ ವಿದ್ಯಮಾನಗಳು ಹಾಗೂ ಪಕ್ಷದ ಸಂಘಟನಾತ್ಮಕ ವಿಚಾರಗಳ ಕುರಿತು ಈ ನಾಯಕರ ಉನ್ನತ ಮಟ್ಟದ ಭೇಟಿಯಲ್ಲಿ ಚರ್ಚಿಸಲಾಗಿದೆ ಎನ್ನಲಾಗಿದೆ.



