Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿದ್ದು ಸ್ವಾಭಿಮಾನಿ ಸಮಾವೇಶದ ಬದಲು ಡಿಕೆಶಿಯ ಜನ ಕಲ್ಯಾಣ ಸಮಾವೇಶ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಿಎಂ ಸಿದ್ದರಾಮಯ್ಯ ಅವರ ಸ್ವಾಭಿಮಾನಿ ಸಮಾವೇಶ ಈಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಜನಕಲ್ಯಾಣ ಸಮಾವೇಶ ಆಯ್ತು! ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ವ್ಯಂಗ್ಯ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವೆ ಅದೇನು 'ಒಪ್ಪಂದ' ಆಗಿದೆಯೋ, 'ಒಪ್ಪಂದ' ಕಾರ್ಯಗತ ಆಗೋಲ್ಲ ಅನ್ನೋ ಅನುಮಾನ ಡಿ.ಕೆ.ಶಿವಕುಮಾರ್ ಅವರಿಗೆ ಯಾಕೆ ಕಾಡುತ್ತಿದೆಯೋ ಗೊತ್ತಿಲ್ಲ, ಒಟ್ಟಿನಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಶೀಘ್ರದಲ್ಲೇ ದೊಡ್ಡ ರಾಜಕೀಯ ಸ್ಫೋಟವಾಗುವ ಎಲ್ಲ ಲಕ್ಷಣಗಳಂತೂ ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಅಶೋಕ್ ಆರೋಪಿಸಿದ್ದಾರೆ.

ಸ್ವಾಮಿ ಡಿ.ಕೆ ಶಿವಕುಮಾರ್ ಅವರೇ, ತಾವು ಚಸ್ ಆದರೂ ಆಡಿ, ಫುಟ್ಬಾಲ್ ಆದರೂ ಆಡಿ, ಆದರೆ ನಿಮ್ಮ ರಾಜಕೀಯ ಮೇಲಾಟದಲ್ಲಿ ಕನ್ನಡಿಗರ ಬದುಕಿನ ಜೊತೆ ಮಾತ್ರ ಚೆಲ್ಲಾಟವಾಡಬೇಡಿ ಎಂದು ಅವರು ತಾಕೀತು ಮಾಡಿದ್ದಾರೆ.

ತಮ್ಮ ಲಾಯಲ್ಟಿಗೆ ತಮ್ಮ ಹೈಕಮಾಂಡ್ ರಾಯಲ್ಟಿ ಕೊಡುತ್ತೋ ಬಿಡುತ್ತೋ ಅದು ನಿಮ್ಮ ಪಕ್ಷದ ಆಂತರಿಕ ವಿಚಾರ, ಆದರೆ ಕಾಂಗ್ರೆಸ್ ಪಕ್ಷಕ್ಕೆ ಲಾಯಲ್ ಆಗಿ ಮತ ನೀಡಿ ಅಧಿಕಾರ ಕೊಟ್ಟಿರುವ ಕರ್ನಾಟಕದ ಮಾತಾದರರಿಗೆ ಅಭಿವೃದ್ಧಿಯ ರಾಯಲ್ಟಿ ಕೊಟ್ಟು ಕನ್ನಡಿಗರ ಋಣ ತೀರಿಸಿ ಎಂದು ಅಶೋಕ್ ಆಗ್ರಹ ಮಾಡಿದ್ದಾರೆ.

ನೀವು ವ್ಯಕ್ತಿ ಪೂಜೆ ಆದರೂ ಮಾಡಿ, ಪಕ್ಷ ಪೂಜೆ ಆದರೂ ಮಾಡಿ, ಆದರೆ ಕಾಂಗ್ರೆಸ್ ಪಕ್ಷವನ್ನು ನಂಬಿ ಅಧಿಕಾರ ಕೊಟ್ಟಿರುವ ಮತದಾರ ಪ್ರಭುಗಳಿಗೆ ದ್ರೋಹ ಬಗೆಯಬೇಡಿ ಎಂದು ಬಿಜೆಪಿ ನಾಯಕ ಅಶೋಕ್ ಕಿವಿ ಮಾತು ಹೇಳಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ