ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಿಎಂ ಸಿದ್ದರಾಮಯ್ಯ ನವರಿಂದ ಮುಖ್ಯಮಂತ್ರಿ ಕುರ್ಚಿ ಕಿತ್ತುಕೊಳ್ಳುವುದ್ದಕ್ಕೆ ಜಿದ್ದಿಗೆ ಬಿದ್ದಿರುವ ಡಿಕೆ ಶಿವಕುಮಾರ್ ಅವರು ಬ್ಲ್ಯಾಕ್‌ಮೇಲ್ ರಾಜಕಾರಣದ ಮೂಲಕ ಶಾಸಕರ ಕ್ರೋಢೀಕರಣಕ್ಕೆ ಮುಂದಾಗಿದ್ದಾರೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.
ಅನುದಾನ ಬೇಕಾದರೆ ಡಿಕೆ ಶಿವಕುಮಾರ್ ಅವರನ್ನು ಬೆಂಬಲಿಸಬೇಕು ಎನ್ನುವ ಸತ್ಯ ಕಾಂಗ್ರೆಸ್ಸಿನ ಬಂಡಾಯ ಶಾಸಕರಿಂದಲೇ ಬಯಲಾಗಿದೆ. ಇನ್ನೂ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಪೈಪೋಟಿ ರಾಜಕಾರಣಕ್ಕೆ ಕರ್ನಾಟಕದಲ್ಲಿ ಅಭಿವೃದ್ಧಿ ಕಣ್ಮರೆಯಾಗುತ್ತಿರುವುದು ವಿಷಾದನೀಯ! ಎಂದು ಬಿಜೆಪಿ ದೂರಿದೆ.


