Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಹೊಸ ಸಚಿವ ಸಂಪುಟ ರಚನೆಗೆ ಡಿಕೆಶಿ ದಿಲ್ಲಿ ದೌಡು; ಶಾಸಕರ ಭಾರಿ ಲಾಬಿ!

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ವಿದ್ಯಮಾನವೊಂದರಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಯನ್ನು ರಾಜ್ಯಪಾಲರು ಅಧಿಕೃತವಾಗಿ ಅಂಗೀಕರಿಸಿದ್ದಾರೆ. ಇದರ ಬೆನ್ನಲ್ಲೇ ಹಾಲಿ ಸಚಿವ ಸಂಪುಟವನ್ನು ಸಹ ವಿಸರ್ಜನೆ ಮಾಡಲಾಗಿದ್ದು, ಕರ್ನಾಟಕದಲ್ಲಿ ಹೊಸ ಸರ್ಕಾರದ ಪರ್ವ ಆರಂಭವಾಗಿದೆ.

ಮುಂದಿನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿರುವ ನಿಯೋಜಿತ ಸಿಎಂ ಡಿ.ಕೆ. ಶಿವಕುಮಾರ್ ಅವರು ನೂತನ ಸಚಿವ ಸಂಪುಟ ರಚನೆಯ ಕಸರತ್ತಿಗೆ ಕೈ ಹಾಕಿದ್ದಾರೆ. ಈ ಸಂಬಂಧ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರೊಂದಿಗೆ ಸುದೀರ್ಘ ಹಾಗೂ ಮಹತ್ವದ ಚರ್ಚೆ ನಡೆಸಿದ್ದಾರೆ.

Advertisement

ಹೈಕಮಾಂಡ್ ಮಟ್ಟದಲ್ಲಿ ತೀವ್ರ ಚರ್ಚೆ:
ದೆಹಲಿಯಲ್ಲಿ ಬೀಡು ಬಿಟ್ಟಿರುವ ಡಿ.ಕೆ. ಶಿವಕುಮಾರ್ ಅವರು ಎಐಸಿಸಿ ವರಿಷ್ಠರೊಂದಿಗೆ ಪ್ರಮುಖ ಎರಡು ವಿಷಯಗಳ ಕುರಿತು ಗಹನವಾದ ಸಮಾಲೋಚನೆ ನಡೆಸುತ್ತಿದ್ದಾರೆ.

ಮುಂದಿನ ಕೆಪಿಸಿಸಿ ಅಧ್ಯಕ್ಷ ಯಾರು?: ಡಿ.ಕೆ. ಶಿವಕುಮಾರ್ ಅವರು ಸಿಎಂ ಗಾದಿ ಏರುತ್ತಿರುವುದರಿಂದ ತೆರವಾಗಲಿರುವ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಯಾರಿಗೆ ಕಟ್ಟಬೇಕು? ಎನ್ನುವ ಚರ್ಚೆ ಕೂಡಾ ಆರಂಭವಾಗಿದೆ.

ಸಚಿವ ಸಂಪುಟ ಸೇರ್ಪಡೆ: ಪ್ರಾದೇಶಿಕ ಮತ್ತು ಸಾಮಾಜಿಕ ಸಮತೋಲನ ಕಾಯ್ದುಕೊಂಡು ಯಾರಿಗೆಲ್ಲಾ ಸಚಿವ ಸ್ಥಾನ ನೀಡಬೇಕು? ಎನ್ನುವುದು ಕೂಡಾ ಚರ್ಚೆಗೆ ಬಂದಿದೆ ಎನ್ನಲಾಗಿದೆ.

ದೆಹಲಿಗೆ ಹರಿದುಬಂದ ಶಾಸಕರ ದಂಡು: 40ಕ್ಕೂ ಹೆಚ್ಚು ಆಕಾಂಕ್ಷಿಗಳು!
ಮತ್ತೊಂದೆಡೆ ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ಶಾಸಕರ ಲಾಬಿ ತಾರಕಕ್ಕೇರಿದೆ. ಸದ್ಯದ ಮಾಹಿತಿ ಪ್ರಕಾರ ಸುಮಾರು
40ಕ್ಕೂ ಹೆಚ್ಚು ಶಾಸಕರು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದು, ಈಗಾಗಲೇ ದೆಹಲಿಯತ್ತ ಮುಖ ಮಾಡಿದ್ದಾರೆ. ಹೈಕಮಾಂಡ್‌ನ ಪ್ರಭಾವಿ ನಾಯಕರನ್ನು ಭೇಟಿಯಾಗಿ ತಮಗೆ ಸಚಿವ ಸ್ಥಾನ ನೀಡುವಂತೆ ತೀವ್ರ ಒತ್ತಡ ಹೇರುತ್ತಿದ್ದಾರೆ.

ಸಚಿವ ಸ್ಥಾನದ ರೇಸ್‌ನಲ್ಲಿ ಮುಂಚೂಣಿಯಲ್ಲಿರುವವರು:
ಹೊಸ ಸಂಪುಟದಲ್ಲಿ ಸ್ಥಾನ ಪಡೆಯಲು ಹಳಬರು ಮತ್ತು ಹೊಸಬರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಒಟ್ಟಾರೆಯಾಗಿ ರಾಜಧಾನಿ ಬೆಂಗಳೂರಿನಿಂದ ದೆಹಲಿಯವರೆಗೆ ರಾಜಕೀಯ ಚಟುವಟಿಕೆಗಳು ಗರಿ ಬಿಚ್ಚಿದ್ದು
, ಮುಂದಿನ ಒಂದೆರಡು ದಿನಗಳಲ್ಲಿ ಹೊಸ ಸಚಿವರ ಪಟ್ಟಿ ಅಂತಿಮಗೊಳ್ಳುವ ಸಾಧ್ಯತೆಯಿದೆ.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು