ಚಂದ್ರವಳ್ಳಿ ನ್ಯೂಸ್, ಬೆಂಗಳೂರು:ನವದೆಹಲಿ:
ಕರ್ನಾಟಕದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ನವದೆಹಲಿಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಭೇಟಿಯ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಡಿ.ಕೆ. ಶಿವಕುಮಾರ್ ಅವರು, "ಶುಕ್ರವಾರ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದೆ. ಅವರ ಮಾರ್ಗದರ್ಶನ, ಪ್ರೋತ್ಸಾಹ ಮತ್ತು ಆಶೀರ್ವಾದಕ್ಕೆ ನಾನು ಸದಾ ಕೃತಜ್ಞನಾಗಿದ್ದೇನೆ," ಎಂದು ಬರೆದುಕೊಂಡಿದ್ದಾರೆ.
ರಾಜ್ಯ ರಾಜಕಾರಣದ ಪ್ರಸಕ್ತ ವಿದ್ಯಮಾನಗಳು ಹಾಗೂ ಪಕ್ಷದ ಸಾಂಘಿಕ ಬಲವರ್ಧನೆ ಕುರಿತು ಉಭಯ ನಾಯಕರು ಈ ಸಂದರ್ಭದಲ್ಲಿ ಚರ್ಚಿಸಿದ್ದಾರೆ ಎನ್ನಲಾಗಿದೆ.



