Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೆಸರಿಗಷ್ಟೇ ಶುದ್ಧ ಕುಡಿಯುವ ನೀರಿನ ಘಟಕ| ನೀರು ಮಾತ್ರ ಕೇಳ್ಬೇಡಿ

Advertisement
ಚಂದ್ರವಳ್ಳಿ ನ್ಯೂಸ್, ಕೂಡ್ಲಿಗಿ:
ಕೂಡ್ಲಿಗಿ ತಾಲೂಕಿನ ಜುಮ್ಮೋಬನಹಳ್ಳಿ ಹಾಗೂ ಮ್ಯಾಸರ ಹಟ್ಟಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಮಾಡಿ ಹಲವು ವರ್ಷಗಳೆ ಕಳೆದಿದೆ. ಆದರೆ ಹನಿ ನೀರು ಮಾತ್ರ ಕೇಳ್ಬೇಡಿ. ಇಲ್ಲಿನ ಜನರಿಗೆ ಹೇಳಿಕೊಳ್ಳೋಕೆ ಮಾತ್ರ ಇದು ಶುದ್ಧ ಕುಡಿಯುವ ಘಟಕ ನೀರಿಗೆ ಮಾತ್ರ ಪಕ್ಕದ ಊರುಗಳಿಗೋಗಿ ತರಬೇಕಾದ ದುಸ್ಥಿತಿ ನಿರ್ಮಾಣವಾಗಿದೆ.


ಸರ್ಕಾರ ಸಾರ್ವಜನಿಕರಿಗೆ ಉಪಯೋಗವಾಗಲಿ ಎನ್ನುವ ದೃಷ್ಠಿಯಿಂದ ಲಕ್ಷಾಂತರ ರೂ. ಖರ್ಚು ಮಾಡಿ ಶುದ್ದ ಕುಡಿಯುವ ನೀರಿನ ಘಟಕ ನಿರ್ಮಿಸಿದೆ. ಆದರೆ ಜನರಿಗೆ ಕುಡಿಯಲು ನೀರು ಕೊಡದೆ ಘಟಕವನ್ನು ಪ್ರದರ್ಶನದ ವಸ್ತುವಂತೆ ಇರಿಸಲಾಗಿದೆ.

ವಸ್ತು ಪ್ರದರ್ಶನದ ಅವಶೇಷಗಳಲ್ಲಿರುವ ಕುಡಿಯುವ ನೀರಿನ ಘಟಕದ ಬಾಗಿಲು, ಕಿಟಕಿ ಕಿತ್ತು ಹೋಗಿವೆ. ಶುದ್ಧ ಕುಡಿಯುವ ನೀರಿನ ಘಟಕದ ಒಳಗಿನ ಯಂತ್ರೋಪಕರಣಗಳ ಬಿಡಿ ಭಾಗಗಳು ಕಣ್ಮರೆಯಾಗುವ ಹಂತ ತಲುಪಿದೆ. ಆದರೂ ಶುದ್ಧ ಕುಡಿಯುವ ನೀರಿನ ಘಟಕ ಕಾರ್ಯಾರಂಭದ ಲಕ್ಷಣವೇ ಕಾಣುತ್ತಿಲ್ಲ ಎನ್ನುವ ಕೊರಗು ಜುಮ್ಮೋಬನಹಳ್ಳಿ ಹಾಗೂ ಮ್ಯಾಸರ ಹಟ್ಟಿ ಗ್ರಾಮದ ಸಾರ್ವಜನಿಕರದಾಗಿದೆ.

ಜನರ ಆರೋಗ್ಯ ಕಾಪಾಡುವ ದೃಷ್ಠಿಯಿಂದ ಲಕ್ಷಾಂತರ ರೂ. ವ್ಯಯಿಸಿ ಶುದ್ದ ಕುಡಿಯುವ ನೀರಿನ ಘಟಕವನ್ನು ನಿರ್ಮಿಸಲಾಗಿದೆ. ಆದರೆ ವಿವಿಧ ಕಾರಣಗಳಿಂದ ಇದು ನನೆಗುದಿಗೆ ಬಿದ್ದಿದೆ. ಕುಡಿಯುವ ನೀರಿನ ಘಟಕದಲ್ಲಿರುವ, ಸಾಮಾಗ್ರಿಗಳು ತುಕ್ಕು ಹಿಡಿದು ಮುರಿದು ಬೀಳುವ ಹಂತದಲ್ಲಿವೆ.

ಸಂಬಂಧಪಟ್ಟ ಅಧಿಕಾರಿಗಳು  ಈವರೆಗೂ ಗಮನ ಹರಿಸದೆ ನಿರ್ಲಕ್ಷ ತೋರಿದ್ದಾರೆ. ಆದಷ್ಟು ಶೀಘ್ರ ದುರಸ್ತಿ ಮಾಡಿದರೆ ಒಳ್ಳೆಯದು ಎಂದು ಸಾರ್ವಜನಿಕರು ಮಾಧ್ಯಮದ ಮೂಲಕ ತಮ್ಮ ಅಳಲು ತೋಡಿಕೊಂಡಿದ್ದಾರೆ ಸಿ ಅರುಣ್ ಕುಮಾರ್ ಮಾಹಿತಿ ನೀಡಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ