Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ದೇಶದ್ರೋಹಿಗಳ ರಕ್ಷಕರಿಗೆ ಆರ್‌ಎಸ್‌ಎಸ್ ಪ್ರಶ್ನಿಸುವ ಯೋಗ್ಯತೆಯಿದೆಯೇ?- ಅಶೋಕ್

 ಚಂದ್ರವಳ್ಳಿ ನ್ಯೂಸ್, ​ಬೆಂಗಳೂರು:
ದೇಶದ್ರೋಹಿಗಳ ರಕ್ಷಕರಿಗೆ ಹಾಗೂ ದೇಶ ವಿಭಜಕರ ಮಿತ್ರರಿಗೆ ರಾಷ್ಟ್ರಭಕ್ತ ಸಂಘಟನೆಯಾದ ಆರ್‌ಎಸ್‌ಎಸ್ ಅನ್ನು ಪ್ರಶ್ನಿಸುವ ಯಾವುದೇ ಯೋಗ್ಯತೆಯಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

​ಸಾಮಾಜಿಕ ಜಾಲತಾಣಗಳಲ್ಲಿ ಸಚಿವರ ವಿರುದ್ಧ ಆಕ್ರೋಶ ಹೊರಹಾಕಿರುವ ಅವರು, ಕಾಂಗ್ರೆಸ್‌ನ ದೇಶವಿರೋಧಿ ಧೋರಣೆ ಹಾಗೂ ಸಚಿವರ ಆಡಳಿತಾತ್ಮಕ ವೈಫಲ್ಯಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Advertisement

​ಆರ್‌ಎಸ್‌ಎಸ್ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್‌ಗಿಲ್ಲ!
​"ದೇಶ ವಿಭಜನೆಗೆ ಕಾರಣವಾದ ಮುಸ್ಲಿಂ ಲೀಗ್‌ನಂತಹ ಅತ್ಯಂತ ವಿಭಜನಕಾರಿ, ದೇಶ ವಿದ್ರೋಹಿ ಸಂಘಟನೆಯೊಂದಿಗೆ ಕೇವಲ ಅಧಿಕಾರದ ಲಾಲಸೆಗಾಗಿ ರಾಜಕೀಯ ಮೈತ್ರಿ ಮಾಡಿಕೊಂಡು ಎರಡೆರಡು ರಾಜ್ಯಗಳಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಆರ್‌ಎಸ್‌ಎಸ್ ಬಗ್ಗೆ ಮಾತನಾಡುವ ನೈತಿಕತೆ ಎಲ್ಲಿದೆ?" ಎಂದು ಆರ್. ಅಶೋಕ್ ಪ್ರಶ್ನಿಸಿದ್ದಾರೆ.

​ವಿಧಾನಸೌಧದ ಮುಂಭಾಗದಲ್ಲೇ ದೇಶವಿರೋಧಿಗಳು ಪಾಕಿಸ್ತಾನ್ ಜಿಂದಾಬಾದ್ಎಂದು ಘೋಷಣೆ ಕೂಗಿದರೂ, ಕಣ್ಣು-ಕಿವಿ ಮುಚ್ಚಿ ಕುಳಿತು, ಅವರ ಮೇಲೆ ಯಾವುದೇ ಕ್ರಮ ಕೈಗೊಳ್ಳದೆ ಉದ್ಧಟತನದಿಂದ ಸಮರ್ಥನೆ ಮಾಡಿಕೊಂಡ ಇತಿಹಾಸ ಪ್ರಿಯಾಂಕ್ ಖರ್ಗೆ ಅವರದ್ದಾಗಿದೆ. ಇಂತಹ ದೇಶದ್ರೋಹಿ ಮಾನಸಿಕತೆಯ ರಕ್ಷಕರು, ಕಳೆದ ನೂರು ವರ್ಷಗಳಿಂದ ಯಾವುದೇ ಅಪೇಕ್ಷೆಯಿಲ್ಲದೆ, ನಿಸ್ವಾರ್ಥವಾಗಿ ಭಾರತಾಂಬೆಯ ಸೇವೆಯಲ್ಲಿ ತೊಡಗಿಸಿಕೊಂಡಿರುವ ಆರ್‌ಎಸ್‌ಎಸ್‌ನ ಕಾನೂನು ಬದ್ಧತೆ ಹಾಗೂ ದೇಶನಿಷ್ಠೆಯನ್ನು ಪ್ರಶ್ನೆ ಮಾಡುತ್ತಿರುವುದು ಹಾಸ್ಯಾಸ್ಪದ ಮತ್ತು ನಾಚಿಕೆಗೇಡಿತನ ಎಂದು ಅವರು ಕಿಡಿಕಾರಿದ್ದಾರೆ.

​ಹೈಕಮಾಂಡ್ ಓಲೈಕೆಗಾಗಿ 'ಸಿಎಂ' ಹಗಲುಗನಸು:
​ಮುಂದಿನ
2028ರ ವಿಧಾನಸಭಾ ಚುನಾವಣೆಯಲ್ಲಿ ತಾವೇ ಕಾಂಗ್ರೆಸ್‌ನ ಸಿಎಂ ಅಭ್ಯರ್ಥಿ ಎಂದು ಹಗಲುಗನಸು ಕಾಣುತ್ತಿರುವ ಡಿ.ಕೆ. ಶಿವಕುಮಾರ್ ಅವರಿಗೆ ಸದ್ದಿಲ್ಲದಂತೆ ಸೆಡ್ಡು ಹೊಡೆಯಲು ಪ್ರಿಯಾಂಕ್ ಖರ್ಗೆ ಈ ರಾಜಕೀಯ ತಂತ್ರಗಾರಿಕೆ ನಡೆಸುತ್ತಿದ್ದಾರೆ ಎಂದು ಅಶೋಕ್ ಲೇವಡಿ ಮಾಡಿದ್ದಾರೆ. ದೆಹಲಿಯ ನಕಲಿ ಗಾಂಧಿ ಹೈಕಮಾಂಡ್‌ನ ಓಲೈಕೆ ಮಾಡಿ, ಅವರನ್ನು ಮೆಚ್ಚಿಸಿ ಹೇಗಾದರೂ ಮಾಡಿ ತಾನೇ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಆಗಬೇಕೆಂಬ ದುರಾಸೆಯಿಂದ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್ ಅನ್ನು ಬೆದರು ಬೊಂಬೆ ಮಾಡಿಕೊಳ್ಳಲು ಹೊರಟಿದ್ದಾರೆ. ಸದಾ ಸಮಾಜದಲ್ಲಿ ಸೈದ್ಧಾಂತಿಕ ವಿವಾದ ಸೃಷ್ಟಿಸಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಇವರು ನಡೆಸುತ್ತಿರುವ ಒಳಸಂಚು ಪ್ರಜ್ಞಾವಂತ ಕನ್ನಡಿಗರಿಗೆ ಚೆನ್ನಾಗಿ ಅರ್ಥವಾಗುತ್ತದೆ ಎಂದಿದ್ದಾರೆ.

​ಕರ್ನಾಟಕದ ಇತಿಹಾಸದಲ್ಲೇ ಅಟ್ಟರ್ ಫ್ಲಾಪ್ಸಚಿವ!
​ತಮಗೆ ವಹಿಸಿಕೊಡಲಾಗಿದ್ದ ಐಟಿ-ಬಿಟಿ
, ಗ್ರಾಮೀಣಾಭಿವೃದ್ಧಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಸೇರಿದಂತೆ ಪ್ರತಿಯೊಂದು ಇಲಾಖೆಯ ಜವಾಬ್ದಾರಿಯಲ್ಲೂ ಪ್ರಿಯಾಂಕ್ ಖರ್ಗೆ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಅವರು ಅತ್ಯಂತ ಅಟ್ಟರ್ ಫ್ಲಾಪ್ಸಚಿವ ಎಂದು ಅಶೋಕ್ ಟೀಕಿಸಿದ್ದಾರೆ.

​ಅಭಿವೃದ್ಧಿ ವಿಚಾರದಲ್ಲಿ ಶೂನ್ಯ ಸಾಧನೆ ಮಾಡಿರುವ ಇವರು, ಈಗ ಹೇಗಾದರೂ ಮಾಡಿ ಗೃಹ ಇಲಾಖೆಯನ್ನು ಬಳಸಿಕೊಂಡು ಹೈಕಮಾಂಡ್ ಗಮನ ಸೆಳೆಯಲು ಹಪಾಹಪಿಸುತ್ತಿದ್ದಾರೆ. ಅದಕ್ಕಾಗಿ ದಿನದ 24 ಗಂಟೆಯೂ ಆರ್‌ಎಸ್‌ಎಸ್ ಜಪಮಾಡುತ್ತಾ, ಮಾಧ್ಯಮಗಳಲ್ಲಿ ಮತ್ತು ಸೋಷಿಯಲ್ ಮೀಡಿಯಾಗಳಲ್ಲಿ ಸುದ್ದಿಯಲ್ಲಿರಲು ಹತಾಶ ಪ್ರಯತ್ನ ನಡೆಸುತ್ತಿದ್ದಾರೆ ಎಂದು ದೂರಿದ್ದಾರೆ.

​ಕಾಂಗ್ರೆಸ್‌ನ ಇಂತಹ ಸವಕಲು ರಾಜಕೀಯ ತಂತ್ರಗಳಿಗೆ ಹಾಗೂ ದೇಶವಿರೋಧಿ ಧೋರಣೆಗಳಿಗೆ ಕರ್ನಾಟಕದ ಪ್ರಬುದ್ಧ, ಪ್ರಜ್ಞಾವಂತ ಜನತೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸುವುದು ನಿಶ್ಚಿತ ಎಂದು ಆರ್. ಅಶೋಕ್ ಎಚ್ಚರಿಸಿದ್ದಾರೆ.

 

 

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು