Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡೊನಾಲ್ಡ್​​ ಟ್ರಂಪ್​ ಅಭೂತಪೂರ್ವ ಜಯ, ಭಾರತೀಯ ಮೂಲದ ಕಮಲಾ ಸೋಲು

Advertisement
ಚಂದ್ರವಳ್ಳಿ ನ್ಯೂಸ್, ವಾಷಿಂಗ್ಟನ್:
ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್​​ ಟ್ರಂಪ್​ ಅಭೂತ ಪೂರ್ವ ಜಯ ಸಾಧಿಸಿದ್ದಾರೆ. ಅಧಿಕೃತ ಘೋಷಣೆಯೊಂದೇ ಬಾಕಿ ಇದ್ದು ಭಾರೀ ಗೆಲವು ಸಾಧಿಸಿದ ಟ್ರಂಪ್​
, ಅಮೆರಿಕಕ್ಕೆ ಮತ್ತೆ ಸುವರ್ಣಯುಗ ತರುವುದಾಗಿ ವಾಗ್ದಾನ ಮಾಡಿದ್ದಾರೆ.

ಅಧ್ಯಕ್ಷೀಯ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ನೀಡಿದ್ದೀರಿ. ಈ ಜನಾದೇಶದೊಂದಿಗೆ ಅಮೆರಿಕವನ್ನು ಮತ್ತೆ ಸುವರ್ಣಯುಗದ ಹಳಿಗೆ ತರುವೆ. ದೇಶವನ್ನು ಮತ್ತೊಮ್ಮೆ ಶ್ರೇಷ್ಠವಾಗಿಸಲು ಪ್ರತಿಕ್ಷಣವೂ ಪ್ರಯತ್ನಿಸುವೆ ಎಂದು ಫ್ಲೋರಿಡಾದ ಪಾಮ್ ಬೀಚ್‌ನಲ್ಲಿರುವ ಪಾಮ್ ಬೀಚ್ ಕನ್ವೆನ್ಷನ್ ಸೆಂಟರ್‌ನಲ್ಲಿ ತಮ್ಮ ಬೆಂಬಲಿಗರನ್ನುದ್ದೇಶಿಸಿ ಟ್ರಂಪ್ ಮಾತನಾಡಿದರು.

"ಇದು ಹಿಂದೆಂದೂ ನೋಡಿರದಂತಹ ರಾಜಕೀಯ ಹೋರಾಟವಾಗಿದೆ. ನಾನು ಕಂಡ ಅತಿ ಕಠಿಣ ಚುನಾವಣೆಯಾಗಿದೆ. ಬಹುಶಃ ಇದು ದೇಶದ ಇತಿಹಾಸದಲ್ಲೂ ಮೊದಲಿದ್ದರೂ ಅಚ್ಚರಿಯೇನಲ್ಲ. ನೀವು ನೀಡಿದ ಜಯದಿಂದ ದೇಶ ಕಟ್ಟಲು ಸಹಾಯಕವಾಗಲಿದೆ ಎಂದು ತಿಳಿಸಿದ್ದಾರೆ.

ಬಲಿಷ್ಠ ದೇಶ ಕಟ್ಟುವೆ: ನನ್ನ ಜೀವನದ ಅತ್ಯಂತ ಪ್ರಮುಖ ಗಳಿಗೆಯಾಗಿದೆ. ನನ್ನ ಸರ್ವಸ್ವವನ್ನು ಅಮೆರಿಕಕ್ಕೆ ಸಮರ್ಪಿಸುವೆ. ದೇಶದ ಪ್ರತಿ ನಾಗರಿಕ, ಕುಟುಂಬಕ್ಕಾಗಿ ಮತ್ತು ನಮ್ಮ ಭವಿಷ್ಯಕ್ಕಾಗಿ ಹೋರಾಟ ಮಾಡುತ್ತೇವೆ. ಪ್ರತಿದಿನ, ನಾನು ಉಸಿರಾಡುವವರೆಗೆ ನಿಮಗಾಗಿ ಹೋರಾಡುವೆ. ಮುಂದಿನ ಪೀಳಿಗೆಗೆ ಅರ್ಹವಾದ, ಸುರಕ್ಷಿತ ಮತ್ತು ಸಮೃದ್ಧ ದೇಶ ಕಟ್ಟಿಕೊಡಲು ಶ್ರಮಿಸುವೆ ಎಂದು ಭರವಸೆ ನೀಡಿದ್ದಾರೆ.

ಅಕ್ರಮ ವಲಸೆ ಸ್ಥಗಿತ-ಟ್ರಂಪ್
ಟ್ರಂಪ್ ಅವರು ಮುಂದುವರೆದು ಮಾತನಾಡಿ ಅಕ್ರಮ ವಲಸೆ ನಿಲ್ಲಿಸುವುದಾಗಿ ಭರವಸೆ ನೀಡಿದರು. ನಾವು ಸೆನೆಟ್‌ನಲ್ಲಿ ಬಹುಮತ ಪಡೆದಿದ್ದೇವೆ. ನನಗಾಗಿ ಉದ್ಯಮಿ ಎಲಾನ್​ ಮಸ್ಕ್​​ ಅವರು ಬಹುವಾಗಿ ಶ್ರಮಿಸಿದರು. ಅವರ ಉತ್ಸಾಹ ಮತ್ತು ಪಾಲ್ಗೊಳ್ಳುವಿಕೆಯು ನನಗೆ ದೊಡ್ಡ ಜಯ ತಂದು ಕೊಟ್ಟಿದೆ. ಅದೇ ರೀತಿ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್​ ಅವರು ಕೂಡ ನನ್ನ ಗೆಲುವಿಗಾಗಿ ಶ್ರಮಿಸಿದ್ದಾರೆ ಎಂದು ಹೇಳಿದರು.


ಟ್ರಂಪ್ ಅವರು ಏಳು 'ಬ್ಯಾಟಲ್‌ ಗ್ರೌಂಡ್‌' ರಾಜ್ಯಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಪೆನ್ಸಿಲ್ವೇನಿಯಾ, ಅರಿಜೋನಾ, ಜಾರ್ಜಿಯಾ, ಮಿಷಿಗನ್‌, ವಿಸ್ಕಾನ್‌ಸ್ಕಿನ್‌ಮತ್ತು ನೆವಾಡದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಈ ರಾಜ್ಯಗಳು ಅಭ್ಯರ್ಥಿಗಳ ಪಾಲಿಗೆ ನಿರ್ಣಾಯಕವಾಗಿವೆ. ಅಮೆರಿಕದ 50 ರಾಜ್ಯಗಳಲ್ಲಿ ಈ ಏಳು ರಾಜ್ಯಗಳ ಮತದಾರರನ್ನು ಹೊರತುಪಡಿಸಿ ಹೆಚ್ಚಿನ ರಾಜ್ಯಗಳ ಮತದಾರರು ಒಂದೇ ಪಕ್ಷಕ್ಕೆ ಮತ ಹಾಕುತ್ತಾ ಬಂದಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ