ಕೆಪಿಸಿಸಿ ನಿಧಿಗೆ ಶಾಲೂ-ಹಾರದ ಬದಲು ದೇಣಿಗೆ ನೀಡಿ: ಬಿ.ಕೆ. ಹರಿಪ್ರಸಾದ್ ಕರೆ ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ತಮಗೆ ಗೌರವ ಸೂಚಿಸಲು ಶಾಲು ಮತ್ತು ಹಾರಗಳನ್ನು ಹಾಕುವ ಬದಲು, ಕಾರ್ಯಕರ್ತರು ಹಾಗೂ ಮುಖಂಡರು ಕೆಪಿಸಿಸಿ ನಿಧಿಗೆ ತಮ್ಮ ಕೈಲಾದ ಆರ್ಥಿಕ ಸಹಾಯವನ್ನು ನೀಡಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಕರೆ ನೀಡಿದರು.
ಬಿ.ಕೆ ಹರಿಪ್ರಸಾದ್ ಅವರ ಈ ಕರೆಗೆ ಓಗೊಟ್ಟು, ಹಿರಿಯೂರು ಯುವ ಕಾಂಗ್ರೆಸ್ ವತಿಯಿಂದ ಕೆಪಿಸಿಸಿ ನಿಧಿಗೆ 10,000 ದೇಣಿಗೆಯನ್ನು ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಅಭಿ ಪಟೇಲ್, ಎನ್ಎಸ್ ಯುಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಸಲ್ಮಾನ್, ತಾಲೂಕು ನಗರ ಅಧ್ಯಕ್ಷ ದರ್ಶನ್, ತಾಲೂಕು ಗ್ರಾಮಾಂತರ ಅಧ್ಯಕ್ಷ ಶಿವಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅವಿನಾಶ್ ಹಾಗೂ ಮಹಮ್ಮದ್ ಶಾಹಿದ್ ಉಪಸ್ಥಿತರಿದ್ದರು.



