Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕಾನೂನು ಉಲ್ಲಂಘಿಸಬೇಡಿ, ನೈತಿಕ ಪೊಲೀಸ್‌ಗಿರಿ ಸಹಿಸಲ್ಲ: ಡಿ.ಕೆ ಶಿವಕುಮಾರ್ ಎಚ್ಚರಿಕೆ

ಚಂದ್ರವಳ್ಳಿ ನ್ಯೂಸ್, ​ಬೆಂಗಳೂರು:
ಕರ್ನಾಟಕದಲ್ಲಿ ವಾಸಿಸುವ ಪ್ರತಿಯೊಬ್ಬರೂ ಈ ನೆಲದ ಕಾನೂನು ಹಾಗೂ ಗೌರವವನ್ನು ಕಾಪಾಡುವುದು ಕಡ್ಡಾಯ. ಕಾನೂನು ಎಲ್ಲರಿಗೂ ಒಂದೇ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಬೆಳಗಾವಿಯಲ್ಲಿ ಎಂಇಎಸ್ ಕರಾಳ ದಿನಾಚರಣೆ ವಿಚಾರವಾಗಿ ಪ್ರತಿಕ್ರಿಯಿಸಿ, ಕನ್ನಡಿಗರು ಹಾಗೂ ಮರಾಠಿಗರು ಯಾರೂ ಸಹ ಕಾನೂನನ್ನು ಕೈಗೆತ್ತಿಕೊಳ್ಳಬಾರದು.

ಐಟಿ ಸಂಸ್ಥೆಗಳ ಮೇಲೆ ದಾಳಿ ಬೇಡ: ಕನ್ನಡಪರ ಸಂಘಟನೆಗಳು ಐಟಿ-ಬಿಟಿ ಸಂಸ್ಥೆಗಳ ಮೇಲೆ ದಾಳಿ ಮಾಡುವುದು ಅಥವಾ ನೈತಿಕ ಪೊಲೀಸ್‌ಗಿರಿ ನಡೆಸುವುದು ಸರಿಯಲ್ಲ. ಯಾವುದೇ ದೂರು ಅಥವಾ ಸಮಸ್ಯೆಗಳಿದ್ದರೆ ಸರ್ಕಾರದ ಗಮನಕ್ಕೆ ತನ್ನಿ, ಪೊಲೀಸರೇ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ.

ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಸ್: ಈ ಹಿಂದೆ ಕನ್ನಡ ಹೋರಾಟಗಾರರ ಮೇಲೆ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯಲು ಈಗಾಗಲೇ ಕಡತಗಳನ್ನು ಸಿದ್ಧಪಡಿಸಲಾಗುತ್ತಿದೆ. ಆದರೆ, ಮತ್ತೆ ಇಂತಹ ಘಟನೆಗಳಲ್ಲಿ ಭಾಗಿಯಾದರೆ ಪೊಲೀಸರು ಆಕ್ಷೇಪ ಎತ್ತುತ್ತಾರೆ, ಹೀಗಾಗಿ ಹೋರಾಟಗಾರರು ಸಹಕರಿಸಬೇಕು ಎಂದು ಮನವಿ ಮಾಡಿದರು.

ಮತದಾರರ ಹಕ್ಕು ರಕ್ಷಣೆಗೆ ಹೋರಾಟ: ದೆಹಲಿಯಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿರುವ ಪ್ರತಿಭಟನೆ ಬೆಂಬಲಿಸಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಹಕ್ಕು ಬದುಕುವ ಹಕ್ಕಿನಷ್ಟೇ ಮುಖ್ಯ. ಲಕ್ಷಾಂತರ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಅಳಿಸಿಹಾಕಿರುವ ಅಕ್ರಮದ ವಿರುದ್ಧ ಕಾಂಗ್ರೆಸ್ ನಿರಂತರ ಹೋರಾಟ ನಡೆಸಲಿದೆ ಎಂದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಜ್ಞಾನದ ಭಾಷೆಯಾಗಿ ಕನ್ನಡದ ಸಬಲೀಕರಣ ಅಗತ್ಯಶಾಲಾ ಕೊಠಡಿಗೆ ನುಗ್ಗಿ ವಿದ್ಯಾರ್ಥಿನಿಯರ ಮೇಲೆ ದಾಳಿ: ಆಘಾತಕಾರಿ ಘಟನೆಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್: ಕುಮಾರಸ್ವಾಮಿ ಹೆಸರು ಪ್ರಸ್ತಾಪಿಸಿದ ಪೊಲೀಸರು!ಕನ್ನಡ ಧ್ವಜ ವಿನ್ಯಾಸ ಬದಲಾವಣೆ ಹಾಗೂ ಕಡ್ಡಾಯ ಹಾರಾಟಕ್ಕೆ ರಾಜ್ಯ ಚಿಂತನೆ: ಡಿ.ಕೆ. ಶಿವಕುಮಾರ್ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕುಮಾರಸ್ವಾಮಿ ಮಾಡಿಸಿದ್ದು: ಸಚಿವ ಪುಟ್ಟರಂಗಶೆಟ್ಟಿ ಗಂಭೀರ ಆರೋಪಗೂಗಲ್ ಲೆನ್ಸ್ ಬಳಸಿ ವಿಎಓ ಟಾಪರ್ ಆಗಿದ್ದ ಶಂಕರ ಬನ್ನೂರ ಬಂಧನ; ಸಿಸಿಟಿವಿಯಲ್ಲಿ ಅಕ್ರಮ ಬಟಾಬಯಲು'ಇಂಡಿಯಾ' ಮೈತ್ರಿಕೂಟದ ಬೃಹತ್ ರ‍್ಯಾಲಿ: ಸ್ಥಳೀಯ ವ್ಯಾಪಾರಿಗಳ ಬೆಂಬಲಕ್ಕೆ ನಿಲ್ಲುವಂತೆ ರಾಹುಲ್‌ಗಾಂಧಿ ಕರೆಕಾನೂನು ಉಲ್ಲಂಘಿಸಬೇಡಿ, ನೈತಿಕ ಪೊಲೀಸ್‌ಗಿರಿ ಸಹಿಸಲ್ಲ: ಡಿ.ಕೆ ಶಿವಕುಮಾರ್ ಎಚ್ಚರಿಕೆವಿದ್ಯುತ್ ವಲಯದಲ್ಲಿ ಡಿಜಿಟಲ್ ಕ್ರಾಂತಿ: ಪಾರದರ್ಶಕತೆಗಾಗಿ KPTCL-GTD ಸಮಗ್ರ ವೇದಿಕೆ ಜಾರಿಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್: ಕುಮಾರಸ್ವಾಮಿ ದೆಹಲಿ ನಿವಾಸದಲ್ಲಿ ಮೊಬೈಲ್ ಹಸ್ತಾಂತರ!