Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ನನ್ನನ್ನು ಅಷ್ಟು ಸುಲಭ ಅಂದುಕೊಳ್ಳಬೇಡಿ:ಸಿದ್ದರಾಮಯ್ಯ

ನನ್ನನ್ನು ಅಷ್ಟು ಸುಲಭ ಅಂದುಕೊಳ್ಳಬೇಡಿ:ಸಿದ್ದರಾಮಯ್ಯ
ಚಂದ್ರವಳ್ಳಿ ನ್ಯೂಸ್, ಕಲಬುರಗಿ:
ಹೆಚ್.ಡಿ.ಕುಮಾರಸ್ವಾಮಿ, ಬಿ.ಎಸ್ ಯಡಿಯೂರಪ್ಪ ನನ್ನನ್ನು ಮುಗಿಸ್ತೀನಿ ಅಂದುಕೊಂಡಿದ್ದರೆ ಅದು ಅವರ ಮೂರ್ಖತನ. ನನ್ನನ್ನು ಅಷ್ಟು ಸುಲಭ ಅಂದುಕೊಳ್ಳಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು BJP ಮತ್ತು JDS ನಾಯಕರಿಗೆ ನೇರ ಸವಾಲೆಸೆದರು.

ಕಲಬುರಗಿ ತಾಲ್ಲೂಕಿನ‌ಕವಲಗಿ (ಕೆ) ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಜಯಂತ್ಸೋತ್ಸವ ಉದ್ಘಾಟಿಸಿ ರಾಯಣ್ಣ ಪ್ರತಿಮೆ ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಬ್ರಿಟಿಷರ ಜೊತೆ ನಮ್ಮವರು ಕೈಜೋಡಿಸಿದ್ದರಿಂದಲೇ 200 ವರ್ಷ ಗುಲಾಮಗಿರಿ ಅನುಭವಿಸಿದೆವು. ಸಂಗೊಳ್ಳಿ ರಾಯಣ್ಣನನ್ನು ಬ್ರಿಟಿಷರಿಗೆ ಹಿಡಿದುಕೊಟ್ಟವರು ನಮ್ಮವರೇ ಆದ ಮನೆ ಮುರುಕರು. ನಮ್ಮ ಸಮಾಜದಲ್ಲೇ ಇಂಥಹ ಮನೆ ಮುರುಕರು ಹಿಂದೆಯೂ ಇದ್ದರು. ಮುಂದೆಯೂ ಇರುತ್ತಾರೆ. ಇಂಥವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದರು.

ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಬಡವರ, ಮದ್ಯಮ ವರ್ಗದವರ ಕಲ್ಯಾಣಕ್ಕೆ ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದಕ್ಕೆ ಪಟ್ಟಭದ್ರರು ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

40 ವರ್ಷದಿಂದ ಸಣ್ಣ ತಪ್ಪು ಮಾಡದವನು ಈಗ ಮಾಡ್ತೀನಾ? ಹಿಂದೆಯೂ ಮಾಡಿಲ್ಲ, ಮುಂದೆಯೂ ಮಾಡಲ್ಲ.

ಮುಡಾ ಪ್ರಕರಣದಲ್ಲಿ ಏನೇನೂ ಇಲ್ಲ. ಆದರೂ BJP, JDS ನಾಯಕರು ಡೆಲ್ಲಿಯಿಂದ ರಾಜಭವನದವರೆಗೂ ಪಿತೂರಿ ಹೆಣೆಯುತ್ತಿದ್ದಾರೆ. ಇದರಲ್ಲಿ ಅವರು ಯಶಸ್ವಿ ಆಗಲು ಬಿಡಬಾರದು. ಸಂಗೊಳ್ಳಿರಾಯಣ್ಣನ ಹೋರಾಟದ ಕಿಚ್ಚು ನಮ್ಮೊಳಗಿದೆ ಎಂದು ಎಚ್ಚರಿಸಿದರು.

ಡಾ.ಬಾಬಾ ಸಾಹೇಬರು ಕೊಟ್ಟ ಸಂವಿಧಾನದಿಂದಾಗಿ ನಾನು ಮುಖ್ಯಮಂತ್ರಿ‌ಆಗಿದ್ದೇನೆ. ಬಾಬಾ ಸಾಹೇಬರ ಆಶಯದಂತೆ ನಾನು ಎಲ್ಲಾ ಜಾತಿ, ಜನ ವರ್ಗಗಳಿಗೆ, ಮಹಿಳೆಯರಿಗೆ ಆರ್ಥಿಕ‌ಶಕ್ತಿ ನೀಡುತ್ತಿದ್ದೇನೆ ಎಂದರು.

ದೇಶದಲ್ಲಿ ಆಹಾರ ಭದ್ರತೆ ಕಾಯ್ದೆ ಜಾರಿಗೆ ಬಂದಿದ್ದು ಕಾಂಗ್ರೆಸ್ ಅವಧಿಯಲ್ಲಿ. ನಾವು ನಮ್ಮ ಜನರಿಗೆ 5 ಕೆಜಿ ಹೆಚ್ಚುವರಿ ಅಕ್ಕಿ ಕೊಡಬೇಕು ಎಂದು ತೀರ್ಮಾನಿಸಿದರೆ ನರೇಂದ್ರ ಮೋದಿಯವರು ಅಕ್ಕಿ ಕೊಡಲು ಬಿಡಲಿಲ್ಲ. ಅದಕ್ಕಾಗಿ ನಾವು ಅಕ್ಕಿ ಬದಲಿಗೆ 5kg ಅಕ್ಕಿಯ ಹಣ ಕೊಡುತ್ತಿದ್ದೇವೆ ಎಂದರು.

ಇಷ್ಟೆಲ್ಲಾ ಕಾರ್ಯಕ್ರಮಗಳನ್ನು ನಾನು ಕೊಡುತ್ತಿರುವುದರಿಂದ ನನ್ನನ್ನು ಮುಗಿಸಲು ಯತ್ನಿಸುತ್ತಿದ್ದಾರೆ. ಅವರ ಯತ್ನ ಸಕ್ಸಸ್ ಆಗಲು ಬಿಡಬೇಡಿ ಎಂದು ಕರೆ ನೀಡಿದರು.

ಪಟ್ಟಭದ್ರ ಹಿತಾಸಕ್ತಿಗಳೇ ರಾಯಣ್ಣನನ್ನು ಬ್ರಿಟಿಷರಿಗೆ ಹಿಡಿದುಕೊಟ್ಟರು, ಬಸವಣ್ಣನವರನ್ನು ಆಸ್ಥಾನದಿಂದ ಓಡಿಸಿಬಿಟ್ಟರು. ಹೀಗಾಗಿ ಈ BJP ಮತ್ತು JDS ನವರ ಬಗ್ಗೆ ಎಚ್ಚರದಿಂದ ಇರಿ ಎಂದು ಕರೆ ನೀಡಿದರು.

ನಾನು ಹಿಂದುಳಿದ ಸಮಾಜದಲ್ಲಿ ಜನಿಸಿ ಬಡತನ ಅಂದರೆ ಏನು, ಗ್ರಾಮಗಳ ಸ್ಥಿತಿ ಹೇಗಿದೆ ಎಂದು ಅರ್ಥಮಾಡಿಕೊಂಡಿದ್ದೇನೆ. ಬಡತನ ಹೋಗಲಾಡಿಸಲು ಕಾರ್ಯಕ್ರಮ ರೂಪಿಸುತ್ತಿದ್ದೇನೆ ಎಂದರು.

ಕಲಬುರಗಿಯ ಕವಲಗಿಯ 14 ಹಳ್ಳಿಗಳಿಗೆ ಅನುಕೂಲ ಆಗುವ ಏತ ನೀರಾವರಿ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ಶಾಸಕರಾದ ಎಂ.ವೈ.ಪಾಟೀಲ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಸಚಿವರಾದ ಬೈರತಿ ಸುರೇಶ್, ಶರಣ ಪ್ರಕಾಶ್ ಪಾಟೀಲ್, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಬಿ.ಆರ್.ಪಾಟೀಲ್, ಮಾಲೀಕಯ್ಯ ಗುತ್ತೇದಾರ್ ಸೇರಿದಂತೆ ಜಿಲ್ಲೆಯ ಶಾಸಕರು, ಸಮುದಾಯದ ಮುಖಂಡರುಗಳು ಉಪಸ್ಥಿತರಿದ್ದರು.

ಕಾರ್ಯಕ್ರಮ ತಿಂಥಣಿ ಕಾಗಿನೆಲೆ ಪೀಠದ ಜಗದ್ಗುರು ಸಿದ್ದರಾಮಾನಂದಪುರಿ ಶ್ರೀಗಳ ದಿವ್ಯ ಸಾನ್ನಿಧ್ಯದಲ್ಲಿ ನೆರವೇರಿತು.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ