Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

"ಯುವಕರ ಭವಿಷ್ಯದ ಜೊತೆ ಆಟವಾಡಬೇಡಿ, ತಕ್ಷಣ ನೇಮಕಾತಿ ಆರಂಭಿಸಿ"​

Advertisement
Advertisement

 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಜಾತ್ಯತೀತ ಜನತಾದಳ (ಜೆಡಿಎಸ್) ತೀವ್ರ ವಾಗ್ದಾಳಿ ನಡೆಸಿದ್ದು
, ಸರ್ಕಾರ ಕೇವಲ ಸುಳ್ಳು ಭರವಸೆಗಳನ್ನಷ್ಟೇ ನೀಡುತ್ತಿದೆ ಎಂದು ಆರೋಪಿಸಿದೆ.

​ಸಿದ್ದರಾಮಯ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಹರಿಹಾಯ್ದಿರುವ ಜೆಡಿಎಸ್, "ಪತ್ರಿಕೆಗಳಲ್ಲಿ ಬೃಹತ್ ಜಾಹೀರಾತು ನೀಡಿ 56,432 ಹುದ್ದೆಗಳ ನೇಮಕಾತಿ ಮಾಡಿಕೊಳ್ಳುವುದಾಗಿ ಮುಖ್ಯಮಂತ್ರಿಗಳು ಕೇವಲ ಡಂಗುರ ಸಾರುತ್ತಿದ್ದಾರೆ. ಆದರೆ ವಾಸ್ತವದಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಗಿದ್ದಾರೆಯೇ ವಿನಃ ಯಾವುದೇ ನೇಮಕಾತಿ ಪ್ರಕ್ರಿಯೆಗಳು ನಡೆದಿಲ್ಲ" ಎಂದು ಟೀಕಿಸಿದೆ.

​ಜೆಡಿಎಸ್ ಪ್ರಮುಖವಾಗಿ ಈ ಕೆಳಗಿನ ಹುದ್ದೆಗಳ ನೇಮಕಾತಿ ವಿಳಂಬವನ್ನು ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆದಿದೆ.
​೮
,೦೦೦ ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳು, ​ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ಹುದ್ದೆಗಳು. ​ಶಿಕ್ಷಕರ ಹುದ್ದೆಗಳು, ​ಪ್ರಥಮ ದರ್ಜೆ ಸಹಾಯಕರ ಮತ್ತು ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳು.

​"ರಾಜ್ಯದ ನಿರುದ್ಯೋಗಿ ಯುವಕರ ಭವಿಷ್ಯದ ಜೊತೆ ಆಟವಾಡುವುದನ್ನು ಸರ್ಕಾರ ತಕ್ಷಣ ನಿಲ್ಲಿಸಬೇಕು. ಬಾಕಿ ಉಳಿದಿರುವ ಎಲ್ಲಾ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ವಿಳಂಬ ಮಾಡದೆ ತಕ್ಷಣವೇ ಪ್ರಾರಂಭಿಸಬೇಕು. ಇಲ್ಲದಿದ್ದರೆ ಯುವ ಸಮೂಹದ ಶಾಪ ಈ ಸರ್ಕಾರಕ್ಕೆ ತಟ್ಟದೇ ಬಿಡುವುದಿಲ್ಲ" ಎಂದು ಜೆಡಿಎಸ್ ಎಚ್ಚರಿಕೆ ನೀಡಿದೆ.

​ರಾಜ್ಯದಲ್ಲಿ ಉದ್ಯೋಗಾಕಾಂಕ್ಷಿಗಳು ದೀರ್ಘಕಾಲದಿಂದ ನೇಮಕಾತಿಗಾಗಿ ಕಾಯುತ್ತಿದ್ದು, ಜೆಡಿಎಸ್‌ನ ಈ ಪೋಸ್ಟ್ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿಯಪ್ಪನವರ ಅನುಭವಕ್ಕೆ ತಕ್ಕಂತೆ ಉಪಮುಖ್ಯಮಂತ್ರಿಯನ್ನಾಗಿ ನೇಮಿಸಲು ಬ್ಲಾಕ್ ಕಾಂಗ್ರೆಸ್ ಆಗ್ರಹಸೂಪರ್ಡೆಂಟ್ ಆಗಿ ಸೇವೆ ಸಲ್ಲಿಸಿ ನಿವೃತ್ತರಾಧ ನಂದಕುಮಾರ್ರವರಿಗೆ ಅಭಿನಂದನಾ ಸಮಾರಂಭರಾಜಕೀಯ ಮುತ್ಸದ್ದಿ ಮುನಿಯಪ್ಪ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಲು ಮಾದಾರ ಮಹಾಸಭಾ ಒತ್ತಾಯಸ್ಥಳೀಯ ಸ್ವಾಭಿಮಾನವಾ? ಅಥವಾ ಚುನಾವಣಾ ಕಾಲದ ದ್ವಂದ್ವ ರಾಜಕೀಯವಾ?ಹಿರಿಯೂರು ಜೆಡಿಎಸ್ ಭದ್ರ ಕೋಟೆಗೆ ಒಳ ಒಪ್ಪಂದದ ಗೆದ್ದಲು ಹಿಡಿದಿದೆಯೇ? ಕಾರ್ಯಕರ್ತರ ಕಣ್ಣೀರಿನ ಪ್ರಶ್ನೆ?ಜೂನ್ 3 ರಂದು ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕಾರಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ. ಶಿವಕುಮಾರ್ ಆಯ್ಕೆ; ಜೂನ್ 3ಕ್ಕೆ ಸಿಎಂ ಆಗಿ ಪ್ರಮಾಣವಚನರಾಜಭವನಕ್ಕೆ ಡಿ.ಕೆ.ಶಿ ಭೇಟಿ: ಸರ್ಕಾರ ರಚನೆಗೆ ಹಕ್ಕು ಮಂಡನೆ; ಜೂನ್ 3ಕ್ಕೆ ಪ್ರಮಾಣವಚನಕ್ಕೆ ಸಿದ್ಧತೆ!ಖಾಸಗಿ ಶಾಲೆಯ ಸಭಾಂಗಣದಲ್ಲಿ ಭೀಕರ ಅಗ್ನಿ ಅವಘಡ; ಸಮಯಪ್ರಜ್ಞೆಯಿಂದ ತಪ್ಪಿದ ದೊಡ್ಡ ದುರಂತ!ಸಿಎಲ್‌ಪಿ ಸಭೆಗೂ ಮುನ್ನ ರಾಜ್ಯಪಾಲರನ್ನು ಭೇಟಿಯಾದ ಡಿ.ಕೆ. ಶಿವಕುಮಾರ್: