Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಒತ್ತಡದಿಂದ ಪರೀಕ್ಷೆ ಬರೆಯಬೇಡಿ ಹಬ್ಬದಂತೆ ಆಚರಿಸಿ-ತಾಪಂ ಇಒ ರವಿಕುಮಾರ್

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಶಾಲಾ ವಾರ್ಷಿಕ ಪರೀಕ್ಷೆಗಳು ವರ್ಷಕ್ಕೊಮ್ಮೆ ಬರುತ್ತವೆ
, ಅದೇ ರೀತಿ ಹಬ್ಬಗಳು ಸಹ ವರ್ಷಕ್ಕೊಮ್ಮೆ ಬರುತ್ತವೆ. ಹಬ್ಬವನ್ನು ಹೇಗೆ ಸಂಭ್ರಮದಿಂದ ಆಚರಿಸುತ್ತೇವೆಯೋ, ಹಾಗೆಯೇ ಪರೀಕ್ಷೆಯನ್ನೂ ಸಂಭ್ರಮದಿಂದ ಎದುರಿಸಬೇಕು ಎಂದು ಚಿತ್ರದುರ್ಗ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಗಳು ಹಾಗೂ ತಾಲ್ಲೂಕು ಬಾಲ ಭವನ ಸಮಿತಿಯ ಅಧ್ಯಕ್ಷ ವೈ.ರವಿಕುಮಾರ್ ತಿಳಿಸಿದರು.

ನಗರದ ಕೆ.ಕೆ. ನ್ಯಾಷನಲ್ ಆಂಗ್ಲ ಮಾಧ್ಯಮಿಕ ಶಾಲೆಯಲ್ಲಿ ಈಚೆಗೆ ರಾಜ್ಯ ಬಾಲ ಭವನ ಸೊಸೈಟಿ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮತ್ತು ತಾಲೂಕು ಬಾಲ ಭವನ ಸಮಿತಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ಕಲಾ ಪ್ರತಿಭೆಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪರೀಕ್ಷೆಯ ಒತ್ತಡಕ್ಕೆ ಒಳಗಾಗದೆ ಏಕಾಗ್ರತೆಯಿಂದ ಪರೀಕ್ಷೆ ಬರೆಯಬೇಕು. ಮಕ್ಕಳ ಮನಸ್ಸು ಹೂವಿನಂತೆ, ಅದಕ್ಕೆ ಜ್ಞಾನವೆಂಬ ಗೊಬ್ಬರ ಹಾಕಿ ಸಮಾಜದಲ್ಲಿ ಉತ್ತಮ ವಿನಯದೊಂದಿಗೆ ಬೆಳೆಸುವುದು ಪೋಷಕರ ಆದ್ಯ ಕರ್ತವ್ಯ. ಪರೀಕ್ಷೆ ಸಂದರ್ಭದಲ್ಲಿ ಪೋಷಕರು ಮಕ್ಕಳಿಗೆ ಒತ್ತಡ ಹಾಕಬಾರದು ಎಂದು ಕಿವಿಮಾತು ಹೇಳಿದರು.

ಜಿಲ್ಲಾ ಬಾಲಭವನ ಕಾರ್ಯಕ್ರಮ ಸಂಯೋಜಕ ಡಿ. ಶ್ರೀಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ರಾಜ್ಯ ಬಾಲ ಭವನದ ಕಲಾಪ್ರತಿಭೆ ಕಾರ್ಯಕ್ರಮವು ಜಿಲ್ಲೆಯಲ್ಲಿ ಅತ್ಯುತ್ತಮವಾಗಿ ನಡೆಯುತ್ತಿದೆ. ರಾಜ್ಯ ಬಾಲ ಸೊಸೈಟಿಯ ಅಧ್ಯಕ್ಷ ಬಿ.ಆರ್. ನಾಯ್ಡು ಹಾಗೂ ಕಾರ್ಯದರ್ಶಿ ನಿಶ್ಚಲ್ ಅವರ ಮಾರ್ಗದರ್ಶನದಂತೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆಕಾಶ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಕೆ.ಎಚ್.ವಿಜಯಕುಮಾರ್ ಅವರ ನಿರ್ದೇಶನದ ಮೇರೆಗೆ ಜಿಲ್ಲೆಯಾದ್ಯಂತ ಮಕ್ಕಳಿಗೆ ಈ ಕಾರ್ಯಕ್ರಮ ಆಯೋಜಿಸಿ ಬಹುಮಾನ ನೀಡಲಾಗುತ್ತಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕ ಮಹೇಶ್ವರಪ್ಪ ಮಾತನಾಡಿ, ಮಕ್ಕಳಿಗೆ ಬಾಲ ಭವನದ ಚಟುವಟಿಕೆಗಳು ಬಹಳ ಅವಶ್ಯಕ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಪ್ರಮಾಣ ಪತ್ರ ಹಾಗೂ ಪೆನ್ನುಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಹಿರಿಯ ಶಿಕ್ಷಕಿಯರಾದ ವಿಜಯಲಕ್ಷ್ಮಿ, ಅಮೋಘ, ವೀಣಾ, ತಮಸುಮ್, ರೂಪಿಣಿ, ರೂಪಾ, ತೌಷಿತ ಹಾಗೂ ದೈಹಿಕ ಶಿಕ್ಷಕರಾದ ಡಿ.ಅಣ್ಣೇಶ್, ನಾಗಾರ್ಜುನ್ ಉಪಸ್ಥಿತರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ