Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Entertainment News

ಸಮ ಸಮಾಜ ನಿರ್ಮಾಣಕ್ಕೆ ನಿರಂತರ ಹೋರಾಟ ನಡೆಸಿದ ಡಾ.ಅಂಬೇಡ್ಕರ್

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಅಸ್ಪೃಶ್ಯತೆ
, ಅಸಮಾನತೆ, ಶೋಷಣೆಗಳನ್ನು ಹೋಗಲಾಡಿಸಿ ಸಮ ಸಮಾಜ ನಿರ್ಮಾಣಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ನಿರಂತರವಾಗಿ ಹೋರಾಟ ನಡೆಸಿದ ಮಹಾನ್ ಮಾನವತಾವಾದಿ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಮಂಜುನಾಥ್ ತಿಳಿಸಿದರು.

ಜೆಡಿಎಸ್ ಕಚೇರಿಯಲ್ಲಿ ಮಂಗಳವಾರ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯಲ್ಲಿ ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

ಶತ ಶತಮಾನಗಳಿಂದಲೂ ತುಳಿತಕ್ಕೊಳಪಟ್ಟಿದ್ದ ಜನತೆಗೆ ಸಮಾನತೆ ಸಿಗಲಿ ಎನ್ನುವ ಉದ್ದೇಶವಿಟ್ಟುಕೊಂಡು ಅನೇಕ ವರ್ಷಗಳ ಕಾಲ ಹೋರಾಟ ನಡೆಸಿದರು. ಬಾಲ್ಯದಲ್ಲಿಯೇ ಶೋಷಣೆ, ಅಸ್ಪೃಶ್ಯತೆ, ಅವಮಾನ, ಹಿಂಸೆ, ಸಂಕಟಗಳನ್ನು ಅನುಭವಿಸಿದ ಡಾ.ಬಿ.ಆರ್.ಅಂಬೇಡ್ಕರ್ ಶಿಕ್ಷಣದಿಂದ ಮಾತ್ರ ಶೋಷಣೆ ತಪ್ಪಿಸಲು ಸಾಧ್ಯ ಎನ್ನುವುದನ್ನು ಮನಗಂಡು ಪ್ರತಿಯೊಬ್ಬರಿಗೂ ಸಂವಿಧಾನದಲ್ಲಿ ಶಿಕ್ಷಣವನ್ನು ಒಂದು ಹಕ್ಕನ್ನಾಗಿ ನೀಡಿದ್ದಾರೆಂದು ಗುಣಗಾನ ಮಾಡಿದರು.

ಸ್ವಪ್ರಯತ್ನಗಳಿಂದ ಮಹಾನ್ ಮಾನವತಾವಾದಿಯಾಗಿ ಬೆಳೆದ ಡಾ.ಬಿ.ಆರ್.ಅಂಬೇಡ್ಕರ್ ಹೋರಾಟದ ಮೂಲಕ ಶೋಷಿತರಿಗೆ ಧ್ವನಿ ನೀಡಿದರು. ದೇಶದ ಸರ್ವಾಂಗೀಣ ಅಭಿವೃದ್ದಿಗೆ ಸಾಮಾಜಿಕ ಕ್ರಾಂತಿ ಅತ್ಯಗತ್ಯ ಎನ್ನುವುದನ್ನು ಬಲವಾಗಿ ನಂಬಿದ್ದರು. ಅಂತಹ ಮಹಾನ್ ಪುರುಷನ ಹಾದಿಯಲ್ಲಿ ಪ್ರತಿಯೊಬ್ಬರು ಸಾಗಬೇಕಿದೆ ಎಂದು ಹೇಳಿದರು.

ಜೆಡಿಎಸ್.ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಡಿ.ಗೋಪಾಲಸ್ವಾಮಿ ನಾಯಕ ಮಾತನಾಡುತ್ತ ಶೋಷಿತ ಜನಾಂಗ ಮೊದಲು ಆರ್ಥಿಕವಾಗಿ ಸ್ವಾವಲಂಭಿಗಳಾಗಬೇಕಾದರೆ ಬೌದ್ದಿಕ ವಿಕಾಸಕ್ಕೆ ಸಮಾಜ ನೆರವು ನೀಡಬೇಕು. ಭಾರತದ ಸಂವಿಧಾನ ಶಿಲ್ಪಿಯಾಗಿ ಮಹತ್ತರ ಸಾಧನೆ ಮಾಡಿ ಅಸ್ಪೃಶ್ಯತೆ ನಿರ್ಮೂಲನೆಗಾಗಿ ದಲಿತರನ್ನು ರಾಜಕೀಯ ಮತ್ತು ಸಾಮಾಜಿಕ ಸಮಾನತೆಗೆ ತರಬೇಕೆಂಬುದೇ ಡಾ.ಬಿ.ಆರ್.ಅಂಬೇಡ್ಕರ್‌ರವರ ಬದುಕಿನ ಆಶಯವಾಗಿತ್ತದೆಂದು ಹೇಳಿದರು.

ಅಂಬೇಡ್ಕರ್‌ರವರ ಆಶಯದಂತೆ ಶಿಕ್ಷಣ, ಸಂಘಟನೆ, ಹೋರಾಟಕ್ಕೆ ಹೆಚ್ಚಿನ ಮಹತ್ವ ಕೊಟ್ಟಾಗ ಮಾತ್ರ ಸೌಹಾರ್ಧಯುತ ಸಮಾಜ ನಿರ್ಮಾಣ ಸಾಧ್ಯ. ಮಾನವ ಕುಲ ಒಂದೆ ಎಂದು ಬಲವಾಗಿ ನಂಬಿದ್ದ ಅವರು ಭಾರತದ ಕಟ್ಟ ಕಡೆಯ ವ್ಯಕ್ತಿಯೂ ಸ್ವಾಭಿಮಾನದಿಂದ ಬದುಕುವಂತಾಗಬೇಕೆಂಬ ಆಸೆಯಿಟ್ಟುಕೊಂಡು ಭದ್ರವಾದ ಸಂವಿಧಾನವನ್ನು ಭಾರತಕ್ಕೆ ಕೊಡುಗೆಯಾಗಿ ನೀಡಿದ್ದಾರೆಂದು ಸ್ಮರಿಸಿದರು.

ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಸಣ್ಣತಿಮ್ಮಣ್ಣ, ಹಿರಿಯೂರು ತಾಲ್ಲೂಕು ಘಟಕದ ಕಾರ್ಯಾಧ್ಯಕ್ಷ ಜಲದಪ್ಪ ಇವರುಗಳು ಅಂಬೇಡ್ಕರ್ ಜಯಂತಿಯಲ್ಲಿ ಪಾಲ್ಗೊಂಡಿದ್ದರು.

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೆಪಿಎಸ್‌ಸಿ ಅಕ್ರಮ, ರೆಸಾರ್ಟ್ ಪರೀಕ್ಷೆ ಹಗರಣ: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹಸಾರ್ವಜನಿಕರ ಅಹವಾಲುಗಳ ನಿರಂತರ ಪರಿಶೀಲನೆ, ಅಧಿಕಾರಿಗಳ ಹೊಣೆಗಾರಿಕೆಯಾಗಿದೆ- ಡಾ.ಶಾಲಿನಿ ರಜನೀಶ್ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆ: ಮರು ಪರಿಶೀಲನೆ ಅವಧಿ ಸೆಪ್ಟೆಂಬರ್ 30ರ ವರೆಗೆ ವಿಸ್ತರಣೆ!ಚುನಾವಣಾ ವ್ಯವಸ್ಥೆ ಹದಗೆಟ್ಟಿದೆ, ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಸಿದ್ದರಾಮಯ್ಯ ಬಾಂಬ್!ಪ್ರಧಾನಿ ವಿರುದ್ಧ ಕಿಡಿಕಾರಿದ್ದ ರುಚಿಕಾ ಸಿಂಗ್‌ಗೆ ಕಾಂಗ್ರೆಸ್ ಬೆಂಬಲ: ಭವ್ಯಾ ನರಸಿಂಹಮೂರ್ತಿಯಿಂದ "ಧೀರ ಬಾಲಕಿ" ಶ್ಲಾಘನೆ!ವಿವಾಹೇತರ ಸಂಬಂಧಕ್ಕೆ ಅಡ್ಡ ಬಂದ ಪತಿಯ ಭೀಕರ ಹತ್ಯೆ; 2 ಲಕ್ಷ ಸುಪಾರಿ ಕೊಟ್ಟಿದ್ದ ಪತ್ನಿ, ಪ್ರಿಯಕರ ಜೈಲಿಗೆ!13 ಕನ್ನಡಿಗರ ನಾಪತ್ತೆ: ಪತ್ತೆಗೆ ಕ್ರಮ, ಕೆಪಿಎಸ್‌ಸಿ ಹಗರಣದ ತನಿಖೆಯಲ್ಲಿ ಮಧ್ಯಪ್ರವೇಶಿಸಲ್ಲ – ಸಿಎಂ ಡಿಕೆಶಿ775 'ಅರಣ್ಯ ವೀಕ್ಷಕ' ಹುದ್ದೆಗಳ ಭರ್ತಿಗೆ ಪರಿಷ್ಕೃತ ಅಧಿಸೂಚನೆ: ಲಿಖಿತ ಪರೀಕ್ಷೆಯಿಲ್ಲದೆ ಭರ್ತಿ!ರೈಲ್ವೆ ಹಳಿ ದಾಟುವಾಗ ಎಕ್ಸ್‌ಪ್ರೆಸ್ ರೈಲು ಡಿಕ್ಕಿ; ಅಜ್ಜಿ ಹಾಗೂ ಇಬ್ಬರು ಮೊಮ್ಮಕ್ಕಳು ದುರಂತ ಸಾವು!ಪತಿಗೆ ಕ್ರೌರ್ಯ, ಪ್ರತ್ಯೇಕ ವಾಸ: ಕೆಳ ಕೋರ್ಟ್ ಆದೇಶ ರದ್ದುಗೊಳಿಸಿ ವಿಚ್ಛೇದನ ಮಂಜೂರು ಮಾಡಿದ ಹೈಕೋರ್ಟ್!