Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರಿಸಿದ ಅವರ ಕಿರು ಪರಿಚಯ

 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ನಗರದ ಲೋಕಭವನದ ಗಾಜಿನ ಮನೆಯಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರು ನೂತನ ರಾಜ್ಯಪಾಲರಿಗೆ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.

ಹಾಲಿ ರಾಜ್ಯಪಾಲರಾಗಿದ್ದ ಥಾವರ್‌ಚಂದ್ ಗೆಹ್ಲೋಟ್ ಅವರ ಅಧಿಕಾರಾವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಾ. ಸುಧಾ ಯಾದವ್ ಅವರನ್ನು ಕರ್ನಾಟಕದ ನೂತನ ರಾಜ್ಯಪಾಲರನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದರು.

Advertisement

ಈ ಗಂಭೀರ ಹಾಗೂ ಐತಿಹಾಸಿಕ ಕ್ಷಣಕ್ಕೆ ಹಲವು ರಾಜಕೀಯ ಧುರೀಣರು ಮತ್ತು ಉನ್ನತಾಧಿಕಾರಿಗಳು ಸಾಕ್ಷಿಯಾದರು. ನಿರ್ಗಮಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್, ಪ್ರವಾಸೋದ್ಯಮ ಹಾಗೂ ಇಂಧನ ಸಚಿವ ಕೆ.ಜೆ. ಜಾರ್ಜ್, ಗೃಹ ಸಚಿವ ಪ್ರಿಯಂಕ್ ಖರ್ಗೆ ಸೇರಿದಂತೆ ಹಲವು ಸಚಿವರು ಹಾಜರಿದ್ದರು.

ಅಲ್ಲದೆ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ಟಿ. ನಾರಾಯಣಸ್ವಾಮಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.ಎ. ಸಲೀಂ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಹೈಕೋರ್ಟ್ ನ್ಯಾಯಮೂರ್ತಿಗಳು, ಸಂಸದರು, ಶಾಸಕರು ಹಾಗೂ ಹಿರಿಯ ಸಚಿವಾಲಯದ ಅಧಿಕಾರಿಗಳು ಸಮಾರಂಭದಲ್ಲಿ ಪಾಲ್ಗೊಂಡು ನೂತನ ರಾಜ್ಯಪಾಲರಿಗೆ ಶುಭ ಕೋರಿದರು.

ಡಾ. ಸುಧಾ ಯಾದವ್ ಅವರ ವಿಶೇಷತೆ ಹಾಗೂ ಹಿನ್ನೆಲೆ:
ರಾಜ್ಯದ 2ನೇ ಮಹಿಳಾ ರಾಜ್ಯಪಾಲೆ: ಡಾ. ಸುಧಾ ಯಾದವ್ ಅವರು ಕರ್ನಾಟಕದ ಇತಿಹಾಸದಲ್ಲೇ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ 2ನೇ ಮಹಿಳೆಯಾಗಿದ್ದಾರೆ. ಈ ಮೊದಲು 1999ರಲ್ಲಿ ವಿ.ಎಸ್. ರಮಾದೇವಿ ಅವರು ರಾಜ್ಯದ ಪ್ರಥಮ ಮಹಿಳಾ ರಾಜ್ಯಪಾಲೆಯಾಗಿ ಸೇವೆ ಸಲ್ಲಿಸಿದ್ದರು.

ಕಾರ್ಗಿಲ್ ಹುತಾತ್ಮ ಯೋಧನ ಪತ್ನಿ:
ಇವರ ಪತಿ ಸುಖಬೀರ್ ಸಿಂಗ್ ಯಾದವ್ ಅವರು ಗಡಿ ಭದ್ರತಾ ಪಡೆಯ ಉಪ ಕಮಾಂಡೆಂಟ್ ಆಗಿ ಸೇವೆ ಸಲ್ಲಿಸುತ್ತಿದ್ದು, 1999ರ ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನಿ ಪಡೆಗಳ ಫಿರಂಗಿ ದಾಳಿಯನ್ನು ದಿಟ್ಟತನದಿಂದ ಎದುರಿಸಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದರು. ಅವರ ಶೌರ್ಯಕ್ಕಾಗಿ ಮರಣೋತ್ತರವಾಗಿ 'ಸೇನಾ ಪದಕ' ನೀಡಿ ಗೌರವಿಸಲಾಗಿತ್ತು.

ಉನ್ನತ ಶಿಕ್ಷಣದಲ್ಲೂ ಸಿದ್ಧಿ:
ಶೈಕ್ಷಣಿಕವಾಗಿ ಅಪಾರ ಸಾಧನೆ ಮಾಡಿರುವ ಸುಧಾ ಯಾದವ್ ಅವರು ಪ್ರತಿಷ್ಠಿತ ಐಐಟಿ ರೂರ್ಕಿಯಿಂದ ರಸಾಯನಶಾಸ್ತ್ರದಲ್ಲಿ ಎಂ.ಎಸ್ಸಿ ಪದವಿ ಪಡೆದು ಚಿನ್ನದ ಪದಕ ಗಳಿಸಿದ್ದಾರೆ. ಜೊತೆಗೆ ಪಿಎಚ್‌ಡಿ ಪದವಿಯನ್ನೂ ಪೂರ್ಣಗೊಳಿಸಿದ್ದಾರೆ.

ದೀರ್ಘಕಾಲದ ರಾಜಕೀಯ ಹಾಗೂ ಸಾಂಸ್ಥಿಕ ಅನುಭವ:
ಪ್ರಧಾನಿ ನರೇಂದ್ರ ಮೋದಿ ಅವರಿಂದ ಪ್ರೇರಣೆಗೊಂಡು ರಾಜಕೀಯ ಪ್ರವೇಶಿಸಿದ ಇವರು, 1999 ರಿಂದ 2004 ರವರೆಗೆ ಹರಿಯಾಣದ ಮಹೇಂದ್ರಗಢ ಲೋಕಸಭಾ ಕ್ಷೇತ್ರದ ಸಂಸದೆಯಾಗಿ ಆಯ್ಕೆಯಾಗಿದ್ದರು. ಸುಷ್ಮಾ ಸ್ವರಾಜ್ ಅವರ ನಂತರ ಬಿಜೆಪಿ ಸಂಸದೀಯ ಮಂಡಳಿಗೆ ಆಯ್ಕೆಯಾದ 2ನೇ ಮಹಿಳೆ ಎಂಬ ಹೆಗ್ಗಳಿಕೆಯೂ ಇವರಿಗಿದೆ. ಇದರೊಂದಿಗೆ ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಉಸ್ತುವಾರಿಯಾಗಿ ಹಾಗೂ ಕೇಂದ್ರ ಹಿಂದುಳಿದ ವರ್ಗಗಳ ರಾಷ್ಟ್ರೀಯ ಆಯೋಗದ ಸದಸ್ಯೆಯಾಗಿಯೂ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ಬೃಹತ್ ಬೈಕ್ ರ‍್ಯಾಲಿಗೀತಮ್ ಕಾಲೇಜಿನ ಬಿ. ಟೆಕ್ ವಿದ್ಯಾರ್ಥಿನಿ ಸಾವುಗಾಯಿತ್ರಿ ಜಲಾಶಯದ ಕೆರೆ ಅಂಗಳದಲ್ಲಿ ಅಕ್ರಮ ಮಣ್ಣು ಸಾಗಾಟ – ಇಟಾಚಿ, ಟಿಪ್ಪರ್ ಲಾರಿಗಳು ವಶಕ್ಕೆ! ಹಿರಿಯೂರು ಉಪಚುನಾವಣೆ: ಅಧಿಕೃತ ಅರ್ಜಿ ಪಡೆದ ಕಾಂಗ್ರೆಸ್‌ ಟಿಕೆಟ್‌ಗಾಗಿ ಸಿ. ಶಿವು ಯಾದವ್‌CJP ಪರ ಖರ್ಗೆ ಬೆಂಬಲ: ರಾಜ್ಯದ ಹಣ ಲೂಟಿ ಮಾಡಿ ದೇಶದಲ್ಲಿ ಅಭದ್ರತೆ ಸೃಷ್ಟಿಸುತ್ತಿದ್ದಾರೆ - HDK ಗಂಭೀರ ಆರೋಪಕೆಪಿಎಸ್‌ಸಿ ಅಕ್ರಮ: ಫೈವ್ ಸ್ಟಾರ್ ಹೋಟೆಲ್‌ನಲ್ಲಿ ಅಭ್ಯರ್ಥಿಗಳಿಂದ ಪರೀಕ್ಷೆ! ಇಡಿ ತನಿಖೆಯಲ್ಲಿ ಕರಾಳ ದಂಧೆ ಬಯಲುಭಾರತೀಯ ನೌಕಾಪಡೆಗೆ ಮತ್ತಷ್ಟು ಬಲ: ಕಾರವಾರದಲ್ಲಿ ಅತ್ಯಾಧುನಿಕ ‘INS ಸಮರ್ಥಕ್’ ಬಹುಪಯೋಗಿ ಯುದ್ಧನೌಕೆ ಲೋಕಾರ್ಪಣೆ'ಕರ್ನಾಟಕ ಹನಿಟ್ರ್ಯಾಪ್' ಯೂಟ್ಯೂಬ್ ಚಾನೆಲ್‌ನ 54 ಸಬ್‌ಸ್ಕ್ರೈಬರ್‌ಗಳಿಗೆ ಪೊಲೀಸ್ ನೋಟಿಸ್?ದಾವಣಗೆರೆಯಲ್ಲಿ ಎರಡು ಭೀಕರ ರಸ್ತೆ ಅಪಘಾತಗಳು: ಕಾರು ಡಿಕ್ಕಿಯಾಗಿ ಅಪ್ರಾಪ್ತ ಸಾವು, ಮತ್ತೊಂದರಲ್ಲಿ ಹಿಟ್ ಆ್ಯಂಡ್ ರನ್​ಗೆ ವ್ಯಕ್ತಿ ಬಲಿಮಾದಕ ದ್ರವ್ಯ ಮುಕ್ತ ಭಾರತ ನಿರ್ಮಾಣಕ್ಕೆ ಒಗ್ಗಟ್ಟಿನ ಹೋರಾಟ ಅನಿವಾರ್ಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಕರೆ