Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ಕಚೇರಿಯಲ್ಲಿ ಡಾ.ಬಾಬುಜಗಜೀವನರಾಂರವರ ಜಯಂತಿ 

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಒಳ ಮೀಸಲಾತಿ ಜಾರಿಗೊಳಿಸುವಲ್ಲಿ ರಾಜಕಾರಣ ಮಾಡುತ್ತಿರುವ ರಾಜ್ಯದ ಮುಖ್ಯ ಮಂತ್ರಿ ಸಿದ್ದರಾಮಯ್ಯನವರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಅನ್ಯಾಯವೆಸಗುತ್ತಿದ್ದಾರೆಂದು ಬಿಜೆಪಿ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಹೆಚ್.ಮೋಹನ್‌ಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.


ಬಿಜೆಪಿ. ಕಚೇರಿಯಲ್ಲಿ ಭಾನುವಾರ ಡಾ.ಬಾಬು ಜಗಜೀವನರಾಂರವರ ೧೧೯ ನೇ ಜಯಂತಿಯಲ್ಲಿ ಭಾಗವಹಿಸಿ ಮಾತನಾಡಿದರು.

ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ಡಾ.ಬಾಬು ಜಗಜೀವನರಾಂರವರನ್ನು ಅಗೌರವದಿಂದ ನಡೆಸಿಕೊಂಡ ಕಾಂಗ್ರೆಸ್‌ಗೆ ಜಯಂತಿಯನ್ನು ಆಚರಿಸುವ ನೈತಿಕತೆಯಿಲ್ಲ. ಕಾಂಗ್ರೆಸ್ ನಾಯಕರುಗಳ ವರ್ತನೆಯಿಂದ ಬೇಸತ್ತು ೧೯೭೭ ಫೆ.೨ ರಂದು ಪಕ್ಷದಿಂದ ಹೊರ ಬಂದ ಡಾ.ಬಾಬುಜಗಜೀವನರಾಂರವರು ಬಾಲ್ಯದಲ್ಲಿಯೇ ಶೋಷಣೆ, ಅಸ್ಪೃಶ್ಯತೆಯ ನೋವುಂಡವರು. ರೈತರ ಕಷ್ಟಗಳನ್ನು ಕಣ್ಣಾರೆ ಕಂಡು ಕೃಷಿಗೆ ಹೆಚ್ಚಿನ ಒತ್ತು ಕೊಟ್ಟಿದ್ದರಿಂದ ಹಸಿರು ಕ್ರಾಂತಿಯ ಹರಿಕಾರ ಎಂಬ ಬಿರುದು ಪಡೆದರೆಂದು ಅವರ ಸಾಧನೆಗಳನ್ನು ಸ್ಮರಿಸಿದರು.

ಬಿಹಾರದಲ್ಲಿ ಕಾರ್ಮಿಕ ಸಂಘಟನೆಯನ್ನು ಕಟ್ಟಿದ ಡಾ.ಬಾಬು ಜಗಜೀವನರಾಂರವರು ೩೨ ನೇ ವಯಸ್ಸಿಗೆ ದೊಡ್ಡ ನಾಯಕನಾಗಿ ಬೆಳೆದರು. ೧೯೩೬ ರಲ್ಲಿ ರಾಜಕೀಯ ಪ್ರವೇಶಿಸಿದ ಅವರು ೧೯೭೧ ರಲ್ಲಿ ಪಾಕಿಸ್ತಾನ ಭಾರತದ ಮೇಲೆ ಯುದ್ದಕ್ಕೆ ಬಂದಾಗ ಸಮರ್ಥವಾಗಿ ನಿಭಾಯಿಸಿ ದೇಶಕ್ಕೆ ಜಯ ತಂದು ಕೊಟ್ಟ ಕೀರ್ತಿ ಅವರಿಗೆ ಸಲ್ಲಬೇಕು. ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷ ನಾಟಕೀಯವಾಗಿ ಜಯಂತಿಯನ್ನು ಆಚರಿಸುತ್ತಿರುವುದು ಯಾವ ಪುರುಷಾರ್ಥಕ್ಕೆ? ಮೊದಲು ಒಳ ಮೀಸಲಾತಿಯಲ್ಲಿನ ಗೊಂದಲಗಳನ್ನು ಸರಿಪಡಿಲಿ ಎಂದು ಜಿ.ಹೆಚ್.ಮೋಹನ್‌ಕುಮಾರ್ ಒತ್ತಾಯಿಸಿದರು.

ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಪರಶುರಾಂ, ಪ್ರಭಾರಿ ಎ.ಮುರಳಿ, ಮಾಧುರಿ ಗಿರೀಶ್, ಎಸ್ಸಿ. ಮೋರ್ಚಾ ನಿಕಟಪೂರ್ವ ಅಧ್ಯಕ್ಷ ತಿಪ್ಪೇಸ್ವಾಮಿ, ಎಸ್ಸಿ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಧನಂಜಯ, ಸುರೇಶ್, ನಾಗರಾಜ್, ನವೀನ್, ಪ್ರದೀಪ್, ಕಲ್ಲೇಶ್, ಬಸಣ್ಣ, ಹನುಮಂತ, ಪ್ರಸನ್ನ, ವಿರುಪಾಕ್ಷ, ಕೆಂಚಪ್ಪ, ದುರುಗೇಶ್, ಕೆ.ಶಿವಣ್ಣಾಚಾರ್, ರಾಜಣ್ಣ, ಆರ್.ಶೋಭರಾಜ್ ಇವರುಗಳು ಜಯಂತಿಯಲ್ಲಿ ಪಾಲ್ಗೊಂಡಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ