Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅರ್ಥಪೂರ್ಣವಾಗಿ ಜರುಗಿದ ಭಾರತ ರತ್ನ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ

Advertisement
ಚಂದ್ರವಳ್ಳಿ ನ್ಯೂಸ್, ಹೊಸಪೇಟೆ(ವಿಜಯನಗರ):
ಹೊಸಪೇಟೆಯ ಪಾಂಡುರಂಗ
ಕಾಲೋನಿ ಎಂ.ಪಿ ಪ್ರಕಾಶ್ ನಗರ ರಸ್ತೆ( ರಿಲಯನ್ಸ್ ಸ್ಮಾರ್ಟ್ ಬಜಾರ್ ಪಕ್ಕದಲ್ಲಿ)ರುವ ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ಸಿಹಿ ಹಂಚುವುದರ ಮೂಲಕ ಸಂಭ್ರಮದಿಂದ ಆಚರಿಸಲಾಯಿತು.

ಕರ್ನಾಟಕ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಿ .ಎಸ್. ರಾಜು ಮಾತನಾಡಿ, ಡಾ.ಬಿ ಆರ್. ಅಂಬೇಡ್ಕರ್ ರವರು ನ್ಯೂಯಾರ್ಕ್ ಕೊಲಂಬಿಯಾ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರ ಅಧ್ಯಯನ ಮಾಡಿ ಗೌರವ ಡಾಕ್ಟರೇಟ್ ಪಡೆದರು. ಅವರು ಜಾತಿ ತಾರತಮ್ಯ ಹಾಗೂ ಅಸ್ಪೃಶ್ಯತೆಯ ವಿರುದ್ಧ ಹೋರಾಟ ಪ್ರಾರಂಭಿಸಿದ್ದರು.

ಅವರು ಭಗವಾನ್ ಬುದ್ಧ, ಸಂತ ಕಬೀರ, ಮಹಾತ್ಮಪುಲೆ, ಅವರ ಜೀವನದ ಆದರ್ಶ ವ್ಯಕ್ತಿಗಳಾಗಿದ್ದರು. ಅವರು 1920 ರಲ್ಲಿ ಮೂಕ ನಾಯಕ ಎಂಬ ಪತ್ರಿಕೆ ಪ್ರಾರಂಭಿಸಿದರು. ಹಾಗೂ ತಮ್ಮ ಸ್ವಂತ ಗ್ರಂಥಾಲಯ ರಾಜಗ್ರಿಹದಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ಪುಸ್ತಕಗಳನ್ನು ಸಂಗ್ರಹಿಸಿ ವಿಶ್ವದ ಅತಿ ದೊಡ್ಡ ವೈಯಕ್ತಿಕ ಗ್ರಂಥಾಲಯ ಎಂಬ ಹೆಗ್ಗಳಿಕೆಗೆ ಕಾರಣೀಭೂತರಾದರು.

ಅವರನ್ನು ಭಾರತದ ಸಂವಿಧಾನ ಕರಡು ಸಮಿತಿಯ ಅಧ್ಯಕ್ಷರನ್ನಾಗಿ ಮಾಡಲಾಯಿತು. ಭಾರತದ ಸಂವಿಧಾನ ಶಿಲ್ಪಿ ಎಂದೇ  ಕರೆಯುತ್ತೇವೆ. ದೇಶದ ಮೊದಲ ಕಾನೂನು ಸಚಿವರಾಗಿದ್ದ ಅವರು 1990ರಲ್ಲಿ ಅವರಿಗೆ ಮರಣೋತ್ತರ ಭಾರತ ರತ್ನ ಎಂಬ ಬಿರುದು ನೀಡಿ ಗೌರವಿಸಲಾಯಿತು. ಅವರ ಜನ್ಮದಿನವನ್ನು ಪ್ರತಿವರ್ಷ ಜಯಂತಿಯಾಗಿ ಆಚರಿಸಲಾಗುತ್ತಿದೆ.

ಅವರು ರಚಿಸಿದ ಸಂವಿಧಾನವೇ ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬೂನಾದಿಯಾಗಿದೆ ಎಂದು ಹೇಳಿದರು.
ಸಂಸ್ಥೆಯ ವ್ಯವಸ್ಥಾಪಕ ಚಾಂದ್
ಬಾಷಾ, ರಾಮು, ಅಶ್ರೀತ್, ಪತ್ರಕರ್ತರಾದ ಮಮ್ಮದ್ ಗೌಸ್, ವಿಜಯವಾಣಿ ಮತ್ತು ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ