ಚಂದ್ರವಳ್ಳಿ ನ್ಯೂಸ್ ಹಿರಿಯೂರು:
ಚಿತ್ರದುರ್ಗ ಜಿಲ್ಲಾ ಪ್ರಕೃತಿ ವಿಕೋಪ ಪರಿಹಾರ ಕಾರ್ಯಗಳ ಉಸ್ತುವಾರಿ ಹಾಗೂ ಸಚಿವರಾದ ಟಿ. ರಘುಮೂರ್ತಿ ಅವರನ್ನು ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಹೆಚ್ ಮಂಜುನಾಥ್ ಅಲಿಯಾಸ್ ರಾಕ್ ಮಂಜು ನೇತೃತ್ವದಲ್ಲಿ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿರುವ ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿ ಸಚಿವರನ್ನು ಗೌರವಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, "ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಸಂವಿಧಾನದ ಮೌಲ್ಯಗಳಿಗಾಗಿ ಬಾಬಾಸಾಹೇಬ್ ಅಂಬೇಡ್ಕರ್ ಅವರು ತೋರಿದ ಮಾರ್ಗವು ನಮ್ಮೆಲ್ಲರಿಗೂ ಸದಾ ಪ್ರೇರಣೆಯಾಗಿದೆ," ಎಂದು ಸ್ಮರಿಸಿದರು.
ಈ ಕಾರ್ಯಕ್ರಮದಲ್ಲಿ ರಾಜ್ಯ ಭೋವಿ ನಿಗಮದ ಅಧ್ಯಕ್ಷ ರಾಮಣ್ಣ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್ ಉಪಸ್ಥಿತರಿದ್ದರು.
ಅಲ್ಲದೆ, ಕಾಂಗ್ರೆಸ್ ಪ್ರಮುಖ ನಾಯಕರಾದ ಬಿ.ಹೆಚ್. ಮಂಜುನಾಥ್, ಕೃಷ್ಣಮೂರ್ತಿ ಸೂರಗೊಂಡನಹಳ್ಳಿ, ಮಾಜಿ ನಗರಸಭಾ ಸದಸ್ಯರಾದ ಗುಂಡೇಶ್, ಈರಲಿಂಗೇಗೌಡ, ಶಿವಕುಮಾರ್, ಅನಿಲ್ ಪಾಳೇಗಾರ, ಜೋಗಪ್ಪ, ಶ್ರೀನಿವಾಸ್ ಮಾಳಿಗೆ ಸೇರಿದಂತೆ ಹಲವು ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.



