Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠಕ್ಕೆ ಉತ್ತರಾಧಿಕಾರಿಯಾಗಿ ಡಾ.ಎಚ್.ಎಲ್ ನಾಗರಾಜ್ ನೇಮಕ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಉತ್ತರಾಧಿಕಾರಿಯಾಗಿ ಡಾ.ಎಚ್.ಎಲ್.ನಾಗರಾಜ್ ನೇಮಕದ್ದು, ಶನಿವಾರ ವಿಧಿ ವಿಧಾನಗಳೊಂದಿಗೆ ಪಟ್ಟಾಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ವಿಶ್ವಒಕ್ಕಲಿಗರ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ತಿಳಿಸಿದರು.

ಮಠದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ ಸ್ವಾಮೀಜಿ, ನನಗೆ ಈಗ 81 ವರ್ಷ ಆಗಿದೆ. ಹೀಗಾಗಿ, ನಮ್ಮ ಮಠದೊಂದಿಗೆ ಅನೇಕ ವರ್ಷಗಳಿಂದ ಸಂಪರ್ಕ ಹೊಂದಿರುವ ಸೇವಾ ಕಾರ್ಯಗಳನ್ನು ಮಾಡತ್ತಾ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಎಚ್.ಎಲ್.ನಾಗರಾಜ್ ಅವರನ್ನು ಉತ್ತರಾಧಿಕಾರಿಯಾಗಿ ಭಗವಂತನ ಇಚ್ಛೆಯಂತೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.

ಈ ಆಯ್ಕೆಗೆ ಮಠದ ಟ್ರಸ್ಟ್‌ನ ಎಲ್ಲಾ ಸದಸ್ಯರು ಸರ್ವಾನುಮಂತದಿಂದ ಒಪ್ಪಿಗೆ ಸೂಚಿಸಿದ್ದಾರೆ. ಮಠದ ಉತ್ತರಾಧಿಕಾರಿಯಾಗಿ ಧಾರ್ಮಿಕ, ಶೈಕ್ಷಣಿಕ, ಸಾಂಸ್ಕೃತಿಕ ಕಾರ್ಯಗಳನ್ನು 'ನಾಥ' ಪರಂಪರೆಯಂತೆ ನಡೆಸಿಕೊಂಡು ಹೋಗಲಿದ್ದಾರೆ ಎಂದು ತಿಳಿಸಿದರು.

ಡಿಸೆಂಬರ್ 14 ರಂದು ಶನಿವಾರ ಸಂಜೆ ಆರಂಭವಾಗುವ ವಿಧಿ ವಿಧಾನಗಳು, ವಿವಿಧ ಕಾರ್ಯಕ್ರಮಗಳು ಭಾನುವಾರ ಸಂಜೆವರೆಗೂ ಜರುಗಲಿವೆ. ಹತ್ತು ಸಾವಿರ ಜನ ಭಾಗವಹಿಸುವ ನಿರೀಕ್ಷೆ ಇದೆ. ಆದಿಚುಂಚನಗಿರಿ ಪೀಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ನಿಡುಮಾಮಿಡಿ ಜಗದ್ಗುರು ಮಠದ ಶ್ರೀ ವೀರಭದ್ರ ಚನ್ನಮಲ್ಲ ದೇಶೀಕೇಂದ್ರ ಸ್ವಾಮೀಜಿ ಸೇರಿದಂತೆ ನಾಡಿನ ಅನೇಕ ಮಠಗಳ ಪೀಠಾಧ್ಯಕ್ಷರ ಸಮ್ಮುಖದಲ್ಲಿ ಸನ್ಯಾಸ ದೀಕ್ಷೆ ನೀಡಿ ಉತ್ತರಾಧಿಕಾರಿಯಾಗಿ ನೇಮಿಸಲಾಗುತ್ತದೆ ಎಂದು ಚಂದ್ರಶೇಖರನಾಥ ಸ್ವಾಮೀಜಿ ಹೇಳಿದರು.

ಧಾರ್ಮಿಕತೆ ಮತ್ತು ಸಮಾಜ ಸೇವಾ ಮನೋಭಾವ ಹೊಂದಿರುವ ನಾಗರಾಜ್ ಅವರು ಅವಿವಾಹಿತರಾಗಿಯೇ ಇದ್ದಾರೆ. ಅವರು ಶನಿವಾರದಿಂದ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಮಹಾಸ್ವಾಮೀಜಿಯಾಗಿ ಮಠದ ಕಾರ್ಯಗಳು, ಶ್ರೀಮಠದ ಶಿಕ್ಷಣ ಸಂಸ್ಥೆಗಳನ್ನು ಇನ್ನಷ್ಟು ಉನ್ನತ ಸ್ಥಾನಕ್ಕೆ ತೆಗೆದುಕೊಂಡು ಹೋಗಲಿದ್ದಾರೆ. ಸೇವಾ ಕಾರ್ಯಗಳನ್ನು ಇನ್ನಷ್ಟು ವಿಸ್ತರಿಸಿಕೊಂಡು ಹೋಗುತ್ತಾರೆ ಎಂದು ಚಂದ್ರಶೇಖರನಾಥ ಸ್ವಾಮೀಜಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಠದ ಟ್ರಸ್ಟಿಗಳಾದ ದೊಡ್ಡಮನೆ ವೆಂಕಟೇಶ, ಆಡಿಟರ್ ನಾಗರಾಜ್, ಪಂಚಲಿಂಗಯ್ಯ, ಶಿವಲಿಂಗಯ್ಯ, ಮಾರಪ್ಪಣ್ಣ, ವಕೀಲರಾದ ಸಿದ್ದರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಉತ್ತರಾಧಿಕಾರಿ ಡಾ.ಎಚ್.ಎಲ್.ನಾಗರಾಜ್ ಅವರ ಹಿನ್ನೆಲೆ-
ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಗ್ರಾಮದ ಲಿಂಗಯ್ಯ ಮತ್ತು ಗಂಗಮ್ಮನವರ ಸುಪುತ್ರರಾಗಿರುವ ಎಚ್.ಎಲ್.ನಾಗರಾಜ್ ಅವರು ಬಾಲ್ಯದ ಪ್ರಾಥಮಿಕ ಶಿಕ್ಷಣವನ್ನು ತುಮಕೂರಿನ ಸಿದ್ದಗಂಗಾ ಮಠದಲ್ಲಿ ಮುಗಿಸಿದ್ದಾರೆ.


ನಂತರ ಪದವಿ ಮುಗಿಸಿ, ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಮೈಕ್ರೋಫೈನಾನ್ಸ್‌ನಲ್ಲಿ ಸಂಶೋಧನೆ (ಪಿಎಚ್‌ಡಿ) ಮಾಡಿದ್ದಾರೆ. ಸಿದ್ದಗಂಗಾ ಮಠದಲ್ಲಿ ವ್ಯಾಸಂಗ ಮಾಡುವಾಗಿನಿಂದಲೂ ನಾಗರಾಜ್ ಅವರಿಗೆ ಧಾರ್ಮಿಕ ಕಾರ್ಯಗಳ ಕುರಿತು ಆಸಕ್ತಿ ಬೆಳೆದಿತ್ತು. ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರನ್ನು ಆದರ್ಶವಾಗಿ ತೆಗೆದುಕೊಂಡಿದ್ದರು. ಶಿಕ್ಷಣ ಮುಂದುವರೆಸಿ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುವಾಗ ಅವರು ಆದಿಚುಂಚನಗಿರಿ ಮಠದ ಹಾಸ್ಟೇಲ್‌ನಲ್ಲಿ ಉಳಿದುಕೊಂಡಿದ್ದರು. ಈ ಅವಧಿಯಲ್ಲಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಸೇವಾ ಕಾರ್ಯಗಳಿಂದ ಪ್ರಭಾವಿತರಾದರು. ಸನ್ಯಾಸತ್ವ ಮತ್ತು ಧಾರ್ಮಿಕ, ಶೈಕ್ಷಣಿಕ, ಸಾಂಸ್ಕೃತಿಕ ಸೇವಾ ಕಾರ್ಯ ಮಾಡಬೇಕು ಎನ್ನುವ ಮನಸ್ಸು ಮಾಡಿದರು.

ತಹಶೀಲ್ದಾರ್, ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ, ಮೈಶುಗರ್ ಕಾರ್ಖಾನೆಯ ಎಂ.ಡಿ. ಆಗಿ ಕೆಲಸ ಮಾಡಿರುವ ನಾಗರಾಜ್ ಅವರ ಪ್ರಾಮಾಣಿಕತೆ, ದಕ್ಷತೆ ಮತ್ತು ಜನಸೇವಾ ಮನೋಭಾವವನ್ನು ರೂಢಿಸಿಕೊಂಡಿದ್ದಾರೆ ಎಂದು ಮಠದ ಟ್ರಸ್ಟಿಗಳು ಉತ್ತರಾಧಿಕಾರಿಯವರ ಕುರಿತಾದ ಹಿನ್ನೆಲೆ ಹಂಚಿಕೊಂಡರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ