Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತೋಟಗಾರಿಕೆಗೆ ಹೆಚ್ಚುತ್ತಿರುವ ಪ್ರ್ರಾಮುಖ್ಯತೆ- ಡಾ: ಕೆ.ಪಿ. ರಘುಪ್ರಸಾದ್

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಇತ್ತೀಚಿನ ದಿನಗಳಲ್ಲಿ ನಗರ ತೋಟಗಾರಿಕೆ ಹೆಚ್ಚಿನ ಪ್ರ್ರಾಮುಖ್ಯತೆ ಪಡೆದುಕೊಳ್ಳುತ್ತಿದೆ. ಹಸಿರು ಕ್ರಾಂತಿಯ ಅಳವಡಿಕೆಯ ಪರಿಣಾಮವಾಗಿ 1950 ದಶಕದಲ್ಲಿ 50 ಮಿಲಿಯನ್ ಟನ್ ಇದ್ದ ಆಹಾರ ಉತ್ಪಾದನೆ ಇಂದು 350 ಮಿಲಿಯನ್ ಟನ್ ಉತ್ಪಾದಿಸಿ ಸ್ವಾವಲಂಬನೆಯನ್ನು ಕಂಡುಕೊಂಡಿದ್ದೇವೆ ಎಂದು ಕೃಷಿ ತಂತ್ರಜ್ಞಾನ ಮಾಹಿತಿ ಕೇಂದ್ರದ ಮುಖ್ಯಸ್ಥ ಹಾಗೂ ಸಹ ವಿಸ್ತರಣಾ ನಿರ್ದೇಶಕ ಡಾ: ಕೆ.ಪಿ. ರಘುಪ್ರಸಾದ್ ತಿಳಿಸಿದರು.

ಇಂದು ಕೃಷಿ ವಿಶ್ವವಿದ್ಯಾನಿಲಯ ಆವರಣದಲ್ಲಿ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ, ವಿಸ್ತರಣಾ ನಿರ್ದೇಶನಾಲಯ, ಕೃಷಿ ತಂತ್ರಜ್ಞಾನ ಮಾಹಿತಿ ಕೇಂದ್ರದ ಆಶ್ರಯದಲ್ಲಿ ಹಸಿರು ನಗರ ಆರೋಗ್ಯಯುತ ಜೀವನಎಂಬ ಘೋಷವಾಕ್ಯದೊಂದಿಗೆ ಆಯೋಜಿಸಿದ್ದ ನಗರ ತೋಟಗಾರಿಕೆ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,

ಪ್ರಸ್ಥುತ ಪರಿಸ್ಥಿತಿಯಲ್ಲಿ ಸಾರ್ವಜನಿಕರು ಆರೋಗ್ಯದ ಕಡೆ ಹೆಚ್ಚು ಗಮನ ನೀಡುತ್ತಿದ್ದು, ರಾಸಾಯನಿಕ ಮುಕ್ತ ತರಕಾರಿ, ವರ್ಷ ಪೂರ್ತಿ ನಮ್ಮ ಅಗತ್ಯಗಳಿಗೆ ತಕ್ಕಂತೆ ಹಣ್ಣು ಮತ್ತು ಸೊಪ್ಪುಗಳನ್ನು ಬೆಳೆಯಲು ಹಾಗೂ ಹೆಚ್ಚುತ್ತಿರುವ ನಗರೀಕರಣದಿಂದಾಗಿ ಸ್ಥಳದ ಕೊರತೆಯನ್ನು ನೀಗಿಸಲು ನಗರ ತೋಟಗಾರಿಕೆ ಅತ್ಯಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ರೈತ ತರಬೇತಿ ಸಂಸ್ಥೆ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕ ಡಾ: ಸಿ. ನಾರಾಯಣಸ್ವಾಮಿ ಮಾತನಾಡಿ, ವಿಶ್ವ ಆರೋಗ್ಯ ಸಂಸ್ಥೆಯವರ ಪ್ರಕಾರ ಮನುಷ್ಯನ ಬೆಳವಣಿಗೆ ಎಂದರೆ ಕೇವಲ ದೈಹಿಕವಾಗಿ ಮಾತ್ರವಲ್ಲ ಮಾನಸಿಕವಾಗಿ ಹಾಗೂ ಆರೋಗ್ಯ ಪೂರ್ಣ ಅಂಶಗಳನ್ನು ಒಳಗೊಂಡಿರುತ್ತದೆ.

ನಾವು ತಿನ್ನುವ ಆಹಾರವು ಔಷಧವಾಗಬೇಕು. ಹಿಂದಿನ ಕಾಲದಲ್ಲಿ ಅನುಸರಿಸುತ್ತಿದ್ದ ಆಹಾರ ಪದ್ಧತಿಗಳನ್ನು ಮತ್ತೆ ಅಳವಡಿಸಿಕೊಳ್ಳುವ ಅಗತ್ಯತೆ ಇದೆ ಎಂದು ತಿಳಿಸಿದರು.

ಜಿಕೆವಿಕೆ  ಕೃಷಿ ತಂತ್ರಜ್ಞಾನ ಮಾಹಿತಿ ಕೇಂದ್ರದ ತೋಟಗಾರಿಕೆ ಸಹಾಯಕ ಪ್ರಾಧ್ಯಾಪಕಿ ಡಾ. ಎಂ.ಶಾಲಿನಿ ಮಾತನಾಡಿ, ನಗರ ಪ್ರದೇಶಗಳಲ್ಲಿ ಬದಲಾದ ಪರಿಸ್ಥಿತಿಯಲ್ಲಿ ಆಹಾರ ಶೈಲಿ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದ್ದು, ವಿಷಮುಕ್ತ ಆಹಾರವನ್ನು ಉತ್ಪಾದಿಸಲು ನಗರ ತೋಟಗಾರಿಕೆಯು ಅತ್ಯಗತ್ಯವಾಗಿದೆ.

ಕನಿಷ್ಟ ವೆಚ್ಚದೊಂದಿಗೆ ಆದ್ಯತೆಯ ಮೇರೆಗೆ ವರ್ಷ ಪೂರ್ತಿ ತಾಜಾ ತರಕಾರಿ, ಹಣ್ಣು, ಔಷಧಿ ಸಸ್ಯಗಳನ್ನು ತಾವೇ ಉತ್ಪಾದಿಸಬಹುದಾಗಿದೆ ಎಂದು ತಿಳಿಸಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ