Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮರಡಿಹಳ್ಳಿಯಲ್ಲಿ ಶಿಕ್ಷಣ ಪಡೆದು ವೈದ್ಯರಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿ ಗಳಿಸಿದ ಡಾ.ಕಂಠೀರವ ಬಾಲಸರಸ್ವತಿ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಬಹಳ ವರ್ಷಗಳ ಕಾಲ ಅಮೇರಿಕಾದಲ್ಲಿ ಸೇವೆ ಸಲ್ಲಿಸಿದ ಡಾ.ಕಂಠೀರವ ಬಾಲಸರಸ್ವತಿಯವರು ಭಾರತಕ್ಕೆ ಮರಳಿ ಅನೇಕ ಹೊಸ ಮೆಡಿಕಲ್ ಕಾಲೇಜುಗಳಲ್ಲಿ ಸೂಕ್ತ ಸಲಹೆ ಕೊಟ್ಟ ಕೀರ್ತಿ ಅವರಿಗೆ ಸಲ್ಲುತ್ತದೆಂದು ರೆಡ್ಡಿ ಜನಸಂಘದ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ ಸ್ಮರಿಸಿದರು.

ಕಳೆದ ೯ ರಂದು ನಿಧನರಾದ ಡಾ.ಕಂಠೀರವ ಬಾಲಸರಸ್ವತಿರವರಿಗೆ ಕುಟುಂಬ ವರ್ಗದವರು ತುರುವನೂರು ರಸ್ತೆಯಲ್ಲಿರುವ ರೆಡ್ಡಿ ಸಮುದಾಯ ಭವನದಲ್ಲಿ ಭಾನುವಾರ ಏರ್ಪಡಿಸಿದ್ದ ನುಡಿನಮನ ಕಾರ್ಯಕ್ರಮದಲ್ಲಿ ಮೃತರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

ನನಗೂ ಅವರಿಗೂ ಅರವತ್ತು ವರ್ಷಗಳ ಪರಿಚಯವಿದೆ. ಹಿರಿಯೂರು ತಾಲ್ಲೂಕು ಕುಗ್ರಾಮ ಬಸಪ್ಪನಮಾಳಿಗೆಯಲ್ಲಿ ಜನಿಸಿದ ಡಾ.ಕಂಠೀರವ ಬಾಲಸರಸ್ವತಿರವರು ಮರಡಿಹಳ್ಳಿಯಲ್ಲಿ ಶಿಕ್ಷಣ ಪಡೆದು ನಂತರ ಬೇರೆ ಬೇರೆ ಕಡೆ ವಿದ್ಯಾಭ್ಯಾಸ ಮಾಡಿ ವೈದ್ಯರಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿ ಗಳಿಸಿದರು. ರೆಡ್ಡಿ ಜನಸಂಘದ ಸದಸ್ಯರಾಗಿ ಅಮೂಲ್ಯವಾದ ಸಲಹೆಗಳನ್ನು ನೀಡುತ್ತಿದ್ದರು. ಅವರ ನಿಧನದಿಂದ ಸಂಘಕ್ಕೆ ಅಪಾರ ನಷ್ಟವಾಗಿದೆ ಎಂದು ಕಂಬನಿ ಮಿಡಿದರು.

ಡಾ.ಕಂಠೀರವ ಬಾಲಸರಸ್ವತಿರವರ ಜೊತೆ ಸಾಕಷ್ಟು ಬಾರಿ ಚರ್ಚೆ ನಡೆಸಿದ್ದೇನೆ. ಅವರು ನೀಡಿದ ಸಲಹೆಗಳನ್ನು ಪಾಲಿಸುತ್ತೇವೆ. ಐಮಂಗಲ ಭಾಗದಲ್ಲಿ ಸಾಕಷ್ಟು ಸೇವೆ ಸಲ್ಲಿಸಿದ ಮೃತರು ಅನೇಕ ಬಡ ಮಕ್ಕಳಿಗೆ ನೆರವಾಗಿದ್ದಾರೆ. ಅವರ ಕುಟುಂಬಕ್ಕೆ ಭಗವಂತ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರು.

ಚರ್ಮ ತಜ್ಞ ಡಾ.ಆನಂದಪ್ಪ ಮಾತನಾಡಿ ಡಾ.ಕಂಠೀರವ ಬಾಲಸರಸ್ವತಿರವರು ವೈದ್ಯರಾಗಿ ಅಪಾರ ಸೇವೆ ಸಲ್ಲಿಸಿ ವೈದ್ಯಕೀಯ ಲೋಕದ ಬ್ರಹ್ಮ ಎನಿಸಿಕೊಂಡವರು. ಅವರೊಬ್ಬ ಕೇವಲ ವೈದ್ಯರಾಗಿರಲಿಲ್ಲ ಶಕ್ತಿಯಾಗಿದ್ದರು. ವೃತ್ತಿ ಜೀವನದಲ್ಲಿ ಯಾರಿಗೂ ತೊಂದರೆ ಕೊಟ್ಟವರಲ್ಲ ಎಂದು ಗುಣಗಾನ ಮಾಡಿದರು.

ಬಸವೇಶ್ವರ ಆಸ್ಪತ್ರೆಯ ಡಾ.ರಾಜೇಶ್ ಇನ್ನು ಅನೇಕು ನುಡಿನಮನದಲ್ಲಿ ಮಾತನಾಡಿದರು.
ಮಾಜಿ ಶಾಸಕ ಎಸ್.ಕೆ.ಬಸವರಾಜನ್, ಮರ್ಚೆಂಟ್ ಬ್ಯಾಂಕ್ ಅಧ್ಯಕ್ಷ ರಘುರಾಮರೆಡ್ಡಿ, ಡಾ.ಕಂಠೀರವ ಬಾಲಸರಸ್ವತಿರವರ ಪತ್ನಿ, ಮಕ್ಕಳು, ಮೊಮ್ಮಕ್ಕಳು, ಅಳಿಯಂದಿರು ಬಂಧು ಬಾಂಧವರು, ಅಪಾರ ವೈದ್ಯರುಗಳು, ರೆಡ್ಡಿ ಜನಸಂಘದ ನಿರ್ದೇಶಕರುಗಳಾದ ಆರ್.ವಿ.ಮಾರುತೇಶ್‌ರೆಡ್ಡಿ, ರಾಮಕೃಷ್ಣರೆಡ್ಡಿ ಹಾಗೂ ಪದಾಧಿಕಾರಿಗಳು ನುಡಿನಮನದಲ್ಲಿ ಭಾಗವಹಿಸಿದ್ದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ್ಯಾಷನಲ್ ಫ್ರೈಡ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಪಟ್ಟಣ ಪಂಚಾಯತಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸಿ.ನಾರಾಯಣಸ್ವಾಮಿ ಆಯ್ಕೆಕೆ.ಹೆಚ್ ಮುನಿಯಪ್ಪ ರವರ ಹಿರಿತನಕ್ಕೆ ತಕ್ಕ ಖಾತೆ ನೀಡಬೇಕು-ಆರ್.ವಿ ಮಹೇಶ್ಹಸಿರ ಒಡಲಿಗೆ ಚಿಣ್ಣರ ಪ್ರೀತಿಯ ಸ್ಪರ್ಶ: ಕರಗಿದ ಕಲ್ಲುಕೋಟೆಯ ನಾಡು!ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ ಸೇರಿ ಮೂವರಿಂದ ನಾಮಪತ್ರ ಸಲ್ಲಿಕೆಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ: 6 ವರ್ಷಗಳ ಸುದೀರ್ಘ ಸಂಬಂಧ ಅಂತ್ಯ, ರಾಜೀನಾಮೆ ಅಂಗೀಕರಿಸಿದ ಹೈಕಮಾಂಡ್ಸರ್ಕಾರಕ್ಕೆ ಮೊದಲ ಶಾಕ್: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ!ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪಿಲ್ಲ, ಅದು ಪಕ್ಷದ ‘ಒಬ್ಬರಿಗೆ ಒಂದು ಹುದ್ದೆ’ ಸೂತ್ರ: ಸಚಿವ ಸತೀಶ್ ಜಾರಕಿಹೊಳಿಖಾತೆ ಕಿಚ್ಚು: ಸಚಿವರ ಅಸಮಾಧಾನದ ಸವಾಲಿಗೆ 'ಕನಕಪುರ ಬಂಡೆ' ರೆಡಿ!ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ಶಂಕಿತ ಉಗ್ರನ ಬಂಧನ: ತುಮಕೂರು ಪೊಲೀಸರ ಭರ್ಜರಿ ಕಾರ್ಯಾಚರಣೆ!