Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೇತಗಾನಹಳ್ಳಿಯಲ್ಲಿ ಭೂ ಕಬಳಿಕೆ ಮಾಡಿಲ್ಲ-ಸಂಸದ ಡಾ.ಮಂಜುನಾಥ್

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿ ಭೂ ಕಬಳಿಕೆ ಮಾಡಿದ್ದಾರೆಂಬ ಆರೋಪ ನಿನ್ನೆಯಿಂದ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ವಾಸ್ತವವಾಗಿ
1996 ರಲ್ಲಿ ನಮ್ಮ ತಂದೆ ನಂಜಪ್ಪ ಉರುಫ್ ಚಾಮರಾಜೇಗೌಡ ಅವರು ಕೇತಗಾನಹಳ್ಳಿಯಲ್ಲಿ 03 ಎಕರೆ 25 ಗುಂಟೆ ಜಮೀನನ್ನು ಕ್ರಮಬದ್ಧವಾಗಿ ಖರೀದಿಸಿರುತ್ತಾರೆ ಎಂದು ಸಂಸದ ಡಾ.ಸಿ.ಎನ್ ಮಂಜುನಾಥ್ ಸ್ಪಷ್ಟಪಡಿಸಿದ್ದಾರೆ.

ತಂದೆಯವರು ಕಾಲವಾದ ನಂತರ ಅದು ನನ್ನ ಹೆಸರಿಗೆ ವರ್ಗಾವಣೆಯಾಗಿರುತ್ತದೆ, ಎಲ್ಲವೂ ಕ್ರಮಬದ್ಧವಾಗಿ ಕಾನೂನಾತ್ಮಕವಾಗಿ ನಡೆದಿದ್ದು ಯಾವುದೇ ರೀತಿಯ ಒತ್ತುವರಿ ನಡೆದಿಲ್ಲ ಎಂದು ಮಂಜುನಾಥ್ ತಿಳಿಸಿದ್ದಾರೆ.

ಈ ಬಗ್ಗೆ ನಾನು ಲೋಕಸಭಾ ಚುನಾವಣೆ ವೇಳೆ ಸಲ್ಲಿಸಿದ್ದ ಅಫಿಡವಿಟ್ ನಲ್ಲೂ ತಿಳಿಸಿರುತ್ತೇನೆ. ಇತ್ತೀಚಿಗೆ ಕೆಲವು ಮಾಧ್ಯಮಗಳಲ್ಲಿ ವಾಸ್ತವಾಂಶವನ್ನು ತಿರುಚಿ ಜನತೆಗೆ ತಪ್ಪು ಸಂದೇಶ ನೀಡುತ್ತಿರುವುದು ಹಾಗೂ ನನ್ನ ಹೆಸರಿಗೆ ಚ್ಯುತಿ ಬರುವ ರೀತಿ ಆರೋಪಗಳನ್ನು ಮಾಡುತ್ತಿರುವುದು ನನಗೆ ನೋವುಂಟು ಮಾಡಿದೆ ಎಂದು ಡಾ.ಮಂಜುನಾಥ್ ಬೇಸರ ವ್ಯಕ್ತಪಡಿಸಿದ್ದಾರೆ.

 ಕಳೆದ ಅನೇಕ ದಶಕಗಳಿಂದ ಸಮಾಜದ ಸ್ವಾಸ್ಥ್ಯ ಕಾಪಾಡುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತಾ ಬಂದಿದ್ದೇನೆ, ಯಾವುದೇ ರೀತಿಯ ಅಕ್ರಮಗಳಿಗೆ ಆಸ್ಪದ ನೀಡಿಲ್ಲ. ನನ್ನ ಮೇಲೆ ಮಾಡಲಾಗಿರುವ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ಸಂಸದರು ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ